Homeಮುಖಪುಟ‘ಬಿಹಾರದಲ್ಲಿ ಅಧಿಕಾರ ಹೋದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿದ್ದಾರೆ’: ಆರ್‌‌ಜೆಡಿ ಮುಖ್ಯಸ್ಥ ಲಾಲು ಯಾದವ್

‘ಬಿಹಾರದಲ್ಲಿ ಅಧಿಕಾರ ಹೋದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿದ್ದಾರೆ’: ಆರ್‌‌ಜೆಡಿ ಮುಖ್ಯಸ್ಥ ಲಾಲು ಯಾದವ್

- Advertisement -
- Advertisement -

ಬಿಹಾರದ ಹೊಸ ಸರ್ಕಾರವನ್ನು ‘ಜಂಗಲ್ ರಾಜ್‌’ ಎಂದು ಉಲ್ಲೇಖಿಸಿದ್ದ ಒಕ್ಕೂಟ ಸರ್ಕಾರದ ಗೃಹಸಚಿವ ಅಮಿತ್‌ ಶಾ ಅವರಿಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಿರುಗೇಟು ನೀಡಿದ್ದಾರೆ. “ಬಿಹಾರದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಿದ ನಂತರ, ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿ ಹೋಗಿದ್ದಾರೆ” ಎಂದು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಜೊತೆಯಾಗಿ ಭಾನುವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅದಕ್ಕೂ ಒಂದು ದಿನ ಮೊದಲು ಪ್ರತಿಪಕ್ಷಗಳ ಒಗ್ಗಟ್ಟಿನ ಅಗತ್ಯವನ್ನು ಲಾಲು ಯಾದವ್‌ ಒತ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಹಾರದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿದ ನಂತರ ಅಮಿತ್ ಶಾಗೆ ಸಂಪೂರ್ಣವಾಗಿ ಹುಚ್ಚು ಹಿಡಿದಿದೆ. ಬಿಜೆಪಿ 2024 ರಲ್ಲೂ ಸೋಲನ್ನು ಎದುರಿಸಲಿದೆ. ಅದಕ್ಕಾಗಿಯೇ ಅವರು ಅಲ್ಲಿಗೆ ಓಡಿ ಹೋಗಿ, ಜಂಗಲ್ ರಾಜ್ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಗುಜರಾತ್‌ನಲ್ಲಿ ಇದ್ದಾಗ ಏನು ಮಾಡುತ್ತಿದ್ದರು” ಎಂದು ಲಾಲು ಯಾದವ್‌ ಕೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

“ಜಂಗಲ್ ರಾಜ್‌ ಇದ್ದಿದ್ದು, ಅವರು ಗುಜರಾತ್‌ನಲ್ಲಿ ಇದ್ದಾಗ” ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. “ಅಮಿತ್‌ ಶಾ ಬಿಲ್ಕುಲ್‌ ಹುಚ್ಚರಾಗಿ ಹೋಗಿದ್ದಾರೆ (ಅಮಿತ್‌ ಶಾ ಬಿಲ್ಕುಲ್‌ ಪಗ್ಲಾಯೇ ಹುಯೇ ಹೈಂ)” ಎಂದು ಹೇಳಿದ್ದಾರೆ.

2024ರಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿ ಮುಂದಿನ ವರ್ಷ ಬಿಹಾರದಲ್ಲಿ ಸರ್ಕಾರ ರಚಿಸಲಿದೆ ಎಂಬ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಲಾಲು ಯಾದವ್‌, “ನೋಡೋಣ ಅದನ್ನು” ಎಂದು ಹೇಳಿದ್ದಾರೆ.

ನಿತೀಶ್‌ ಕುಮಾರ್ ಮತ್ತು ಲಾಲು ಯಾದವ್ ಭಾನುವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. “ನಾವು ಪ್ರತಿಪಕ್ಷಗಳ ಏಕತೆಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಇದು ನಮ್ಮ ಸಭೆಯ ಕಾರ್ಯಸೂಚಿಯಾಗಿದೆ” ಎಂದು ಲಾಲು ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ತಮ್ಮ ಮಾಜಿ ಮೈತ್ರಿಕೂಟವಾಗಿದ್ದ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌‌ ಶಾ,“ಅವರು ಬಿಜೆಪಿಯ ಬೆನ್ನಹಿಂದೆ ಚೂರಿ ಹಾಕಿ, ಕಾಂಗ್ರೆಸ್‌ ಮತ್ತು ಆರ್‌ಜೆಡಿ ಮಡಿಲಲ್ಲಿ ಕುಳಿತು ತಮ್ಮ ಪ್ರಧಾನಮಂತ್ರಿ ಆಗುವ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“2024ರ ಲೋಕಸಭೆ ಚುನಾವಣೆಯಲ್ಲಿ ನಿತೀಶ್‌ ಕುಮಾರ್ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಯಾದವ್‌ ಅವರ ಜೋಡಿಯನ್ನು ನಿರ್ನಾಮ ಮಾಡಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಲಿದೆ. ಬಿಹಾರವು ಮಹಾಮೈತ್ರಿಕೂಟದ ‘ಜಂಗಲ್ ರಾಜ್’ಅನ್ನು ಬಯಸುವುದಿಲ್ಲ” ಎಂದು ಬಿಹಾರದ ಪೂರ್ಣೆಯಾದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...