Homeಮುಖಪುಟಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದತ್ತ ಬಿಜೆಪಿ ಚಿತ್ತ!

ಅಮಿತ್ ಶಾ ತಿಂಗಳಿಗೆ ಎರಡು ದಿನ ಮತ್ತು ಜೆ.ಪಿ.ನಡ್ಡಾ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

- Advertisement -
- Advertisement -

ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಬಿಜೆಪಿ ಈಗ ತನ್ನ ಚಿತ್ತವನ್ನು ಸಂಪೂರ್ಣವಾಗಿ ಟಿಎಂಸಿ ಆಡಳಿತರೂಢ ಪಶ್ಚಿಮ ಬಂಗಾಳದತ್ತ ನೆಟ್ಟಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಪ್ರತಿ ತಿಂಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ 294 ಸದಸ್ಯರ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪ್ರತಿ ತಿಂಗಳು ಪ್ರತ್ಯೇಕವಾಗಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಚುನಾವಣೆಗೆ ಮುಂಚಿತವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ.

“ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪ್ರತಿ ತಿಂಗಳು ಪ್ರತ್ಯೇಕವಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಆದರೆ ದಿನಾಂಕಗಳು ಇನ್ನೂ ಅಂತಿಮಗೊಂಡಿಲ್ಲ. ಅವರ ನಿಯಮಿತ ಭೇಟಿಗಳು ಪಕ್ಷದ ಕಾರ್ಯಕರ್ತರಿಗೆ ಚೈತನ್ಯ ತುಂಬುತ್ತವೆ” ಎಂದು ದಿಲೀಪ್ ಘೋಷ್ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದ ವೈಭವ ಮರುಸ್ಥಾಪಿಸುವ ಅಗತ್ಯವಿದೆ: ಗೃಹ ಸಚಿವ ಅಮಿತ್ ಶಾ

After BJP's Dilip Ghosh says will turn Bengal into Gujarat, TMC hits back -  India News
PC: India Today (ದಿಲೀ‌ಪ್ ಘೋಷ್)

2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದ ಬಿಜೆಪಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿನ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿದೆ. ಹೀಗಾಗಿ ಈ ಬಾರಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಬಿಜೆಪಿ ಹೊಸ ಪಟ್ಟುಗಳನ್ನು ಹಾಕುತ್ತಿದೆ.

ಅಮಿತ್ ಶಾ ತಿಂಗಳಿಗೆ ಸತತ ಎರಡು ದಿನ ಮತ್ತು ಜೆ.ಪಿ.ನಡ್ಡಾ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

“ಪಶ್ಚಿಮ ಬಂಗಾಳದ ಜನರು ಕಾಂಗ್ರೆಸ್, ಸಿಪಿಐ (ಎಂ) ಮತ್ತು ಟಿಎಂಸಿಗೆ ಅವಕಾಶಗಳನ್ನು ನೀಡಿದ್ದಾರೆ. ಆದರೆ, ಮೂರೂ ಪಕ್ಷಗಳು ಜನಸಾಮಾನ್ಯರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಲು ವಿಫಲವಾಗಿವೆ, ಅದು ಈಗ ಬಿಜೆಪಿಯಿಂದ ಈಡೇರಲಿದೆ” ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಪ್ರವಾಸ: ಬಿಜೆಪಿ ಅಧಿಕಾರಕ್ಕೆ ತರಲು ಪಣತೊಟ್ಟ ಅಮಿತ್ ಶಾ

ಇನ್ನು ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ರಾಜ್ಯವನ್ನು ಐದು ಸಾಂಸ್ಥಿಕ ವಲಯಗಳಾಗಿ ವಿಂಗಡಿಸಿ ಕೇಂದ್ರ ನಾಯಕರಿಗೆ ಉಸ್ತುವಾರಿ ವಹಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿಯ ಹಿರಿಯ ಮುಖಂಡರಾದ ಸುನಿಲ್ ದಿಯೋಧರ್, ವಿನೋದ್ ತಾವ್ಡೆ, ದುಶ್ಯಂತ್ ಗೌತಮ್, ಹರೀಶ್ ದ್ವಿವೇದಿ ಮತ್ತು ವಿನೋದ್ ಸೊಂಕರ್ ಈ ಉಸ್ತುವಾರಿ ವಹಿಸಿಕೊಂಡಿರುವ ನಾಯಕರು. ಈ ನಾಯಕರು ತಮ್ಮ ತಮ್ಮವಲಯಗಳಲ್ಲಿ ಸರಣಿ ಸಭೆಗಳನ್ನು ನಡೆಸಿ ವಾರದೊಳಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೋಲ್ಕತಾ ವಲಯದ ಉಸ್ತುವಾರಿ ವಹಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದಾಗಿ ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...