Homeಮುಖಪುಟಬರ ಪರಿಹಾರ ನೀಡದಿರುವ ಬಗ್ಗೆ ಸುಳ್ಳು ಹೇಳಿದ ಅಮಿತ್ ಶಾ; ದಾಖಲೆ ಮುಂದಿಟ್ಟ ಸಚಿವ ಕೃಷ್ಣ...

ಬರ ಪರಿಹಾರ ನೀಡದಿರುವ ಬಗ್ಗೆ ಸುಳ್ಳು ಹೇಳಿದ ಅಮಿತ್ ಶಾ; ದಾಖಲೆ ಮುಂದಿಟ್ಟ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಕೊಡಬೇಕಾರ ಬರ ಪರಿಹಾರ ವಿಚಾರವಾಗಿ ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡುತ್ತಲೇ ಇದ್ದಾರೆ. ಆದರೂ, ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ವಿಶೇಷ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ಪಾಲಿನ ತೆರಿಗೆ ಹಾಗೂ ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಅಮಿತ್ ಶಾ ಸಾರ್ವಜನಿಕವಾಗಿ ಸುಳ್ಳು ಹೇಳಿದ್ದಾರೆ.

ಬರ ಪರಿಹಾರ ವಿತರಣೆಯಲ್ಲಿನ ವಿಳಂಬದ ಕುರಿತು ಕೇಂದ್ರ ಮತ್ತು ಕರ್ನಾಟಕ ಸರ್ಕಾರದ ನಡುವೆ ನಡೆಯುತ್ತಿರುವ ಜಗಳ ಮತ್ತೊಂದು ತಿರುವು ಪಡೆದುಕೊಂಡಿದ್ದು, ರಾಜ್ಯ ಸರ್ಕಾರವು ಮೂರು ತಿಂಗಳ ತಡವಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರಿಂದ ಕೇಂದ್ರವು ಅದನ್ನು ಸಕಾಲದಲ್ಲಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನ ತಮ್ಮ ಬೆಂಗಳೂರು ಪ್ರವಾಸದಲ್ಲಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, “ಕರ್ನಾಟಕದಲ್ಲಿ ಬರಗಾಲವಿದೆ. ಮೂರು ತಿಂಗಳು ತಡವಾಗಿ ಕೇಂದ್ರಕ್ಕೆ ಪ್ರಸ್ತಾವನೆ (ರಾಜ್ಯ ಸರ್ಕಾರದಿಂದ) ಸಲ್ಲಿಸಲಾಗಿದೆ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರದ ಮನವಿ ಇಂದು ಚುನಾವಣಾ ಆಯೋಗಕ್ಕೆ ಸಿಕ್ಕಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದರು.

ಆದರೆ, ಕೇಂದ್ರ ಗೃಹ ಸಚಿವರ ಹೇಳಿಕೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಾಕ್ಷಿ ಸಹಿತ ತಿರುಗೇಟು ನೀಡಿದ್ದಾರೆ. ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಬರ ಪರಿಹಾರ ನೀಡದಿರುವ ಬಗ್ಗೆ ಜನರಿಗೆ ಸುಳ್ಳು ಮಾಹಿತಿ ನೀಡಿರುವುದು ನನ್ನ ಗಮನಕ್ಕೆ ಬಂದಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಭಾಷಣದ ವೇಳೆ, ಕರ್ನಾಟಕ ಸರ್ಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲು ಮೂರು ತಿಂಗಳು ತಡ ಮಾಡಿದ ಕಾರಣದಿಂದಾಗಿ ಕೇಂದ್ರ ಸರ್ಕಾರ ನಿಗದಿತ ಸಮಯಕ್ಕೆ ಪರಿಹಾರ ಬಿಡುಗಡೆ ಮಾಡಲಾಗಿಲ್ಲ ಎಂದು ಅಮಿತ್ ಶಾ ಸುಳ್ಳು ಹೇಳಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಾಗೂ ಕಂದಾಯ ಇಲಾಖೆಯ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರಾಜಕೀಯ ಪ್ರೇರಿತ ಸುಳ್ಳು ಹೇಳಿಕೆಗೆ ಸ್ಪಷ್ಟೀಕರಣ ನೀಡಲೇಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದೇನೆ” ಎಂದಿದ್ದಾರೆ.

“ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು, ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೀಗಾಗಿ ಕಳೆದ ವರ್ಷ ಆಗಸ್ಟ್ ಎರಡನೇ ವಾರದಲ್ಲೇ ಸಮೀಕ್ಷೆ ನಡೆಸಿ ಕೇಂದ್ರದ ಮಾನದಂಡದ ಪ್ರಕಾರ ಸೆ.13ರಂದು ಬರ ಘೋಷಿಸಲಾಗಿತ್ತು. ಮೊದಲ ಹಂತದಲ್ಲಿ 195 ತಾಲೂಕುಗಳು ಹಾಗೂ ಎರಡನೇ ಹಂತದಲ್ಲಿ 28 ತಾಲೂಕುಗಳೂ ಸೇರಿ ಒಟ್ಟು 223 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿತ್ತು” ಎಂದು ವಿವರಿಸಿದ್ದಾರೆ.

‘ಕಳೆದ ವರ್ಷ ಸೆ.22ಕ್ಕೆ ₹18,200 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಮೊದಲ ಮನವಿ (ಮೆಮೊರಾಂಡಂ) ಸಲ್ಲಿಸಲಾಯಿತು. ಒಂದು ವಾರದ ಅವಧಿಯಲ್ಲಿ ಬರ ಪರಿಹಾರ ಕೋರಿ ಮತ್ತೊಂದು ಮನವಿಯನ್ನೂ ಸಲ್ಲಿಸಲಾಗಿದೆ. ಕಳೆದ ವರ್ಷ ದೇಶದ ಹಲವು ರಾಜ್ಯಗಳು ಬರಕ್ಕೆ ತುತ್ತಾಗಿದ್ದವು. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ, ತಮಿಳುನಾಡು ಸೇರಿದಂತೆ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಹಾಗೂ 18 ರಾಜ್ಯಗಳಲ್ಲಿ ಹಿಂಗಾರಿನ ಬರ ಇತ್ತು. ಆದರೆ, ಈ ಯಾವ ರಾಜ್ಯಗಳೂ ಬರ ಘೋಷಣೆ ಮಾಡುವ ಮುನ್ನವೇ ದೇಶದಲ್ಲೇ ಮೊದಲ ರಾಜ್ಯವಾಗಿ ಕರ್ನಾಟಕ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಿತ್ತು ಎಂಬ ವಿಚಾರವನ್ನು ನಾನು ಇಲ್ಲಿ ಉಲ್ಲೇಖಿಸಲು ಇಚ್ಛಿಸುತ್ತೇನೆ” ಎಂದಿದ್ದಾರೆ.

“ಕರ್ನಾಟಕದ ಬರ ಪರಿಹಾರ ಮನವಿಯ ಮೇರೆಗೆ ಕೇಂದ್ರದ ಬರ ಅಧ್ಯಯನ ತಂಡ ಕಳೆದ ವರ್ಷ ಅಕ್ಟೋಬರ್ 06 ರಂದು ರಾಜ್ಯಕ್ಕೆ ಆಗಮಿಸಿತ್ತು. ಮೂರು ತಂಡಗಳಾಗಿ ರಾಜ್ಯಾದ್ಯಂತ ಮೂರು ದಿನಗಳ ಪ್ರವಾಸ ಕೈಗೊಂಡ ತಂಡ ಬರ ಅಧ್ಯಯನ ನಡೆಸಿತ್ತು. ಅಲ್ಲದೆ, ಬರ ಅಧ್ಯಯನದ ನಂತರ ರಾಜ್ಯ ಸರ್ಕಾರದ ಜೊತೆಗೂ ಅಕ್ಟೋಬರ್ 09 ರಂದು ಸಭೆ ನಡೆಸಿದ್ದ ಕೇಂದ್ರದ ತಂಡ ನಾವು ಮಾಡಿದ ಮನವಿ ವಸ್ತುಸ್ಥಿತಿಯಿಂದ ಕೂಡಿದೆ ಎಂದು ತಿಳಿಸಿತ್ತು. ಈ ಬಗ್ಗೆ ಅದೇ ದಿನ ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮ ಮಿತ್ರರಿಗೂ ಮಾಹಿತಿ ನೀಡಲಾಗಿತ್ತು” ಎಂದು ಸಚಿವರು ಮಾಹಿತಿ ನೀಡಿದ್ದಾರೆ.

“ಅಧ್ಯಯನದ ಬೆನ್ನಿಗೆ ದೆಹಲಿಗೆ ಹಿಂತಿರುಗಿದ ಬರ ಅಧ್ಯಯನ ತಂಡ, ಕೇಂದ್ರ ಸರ್ಕಾರಕ್ಕೆ ಒಂದು ವಾರದಲ್ಲೇ ವರದಿಯನ್ನೂ ಸಲ್ಲಿಸಿದೆ. ಎನ್‌ಡಿಆರ್‌ಎಫ್‌ ನಿಯಮದ ಅನ್ವಯ ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ ತಕ್ಷಣ ಕೇಂದ್ರ ಗೃಹ ಸಚಿವರು, ಹಣಕಾಸು ಸಚಿವರು ಹಾಗೂ ಕೃಷಿ ಸಚಿವರು ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ, ಆ ಸಭೆ ಈವರೆಗೂ ನಡೆದಿಲ್ಲ ಎಂಬುದೇ ವಾಸ್ತವ ಸಂಗತಿ” ಎಂದು ಸತ್ಯ ಸಂಗತಿಯನ್ನು ಬಿಟ್ಟಿಟ್ಟಿದ್ದಾರೆ.

“ರಾಜ್ಯದ ರೈತರು ಬರದಿಂದ ತತ್ತರಿಸುತ್ತಿದ್ದಾರೆ ಹೀಗಾಗಿ ಶೀಘ್ರ ಬರ ಪರಿಹಾರ ವಿತರಿಸಿ ಎಂದು ಮನವಿ ಮಾಡುವ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿಗೆ ಮನವಿ ಮಾಡಲಾಗಿತ್ತು. ಆದರೆ, ಅವರು ಭೇಟಿಗೆ ಅವಕಾಶ ನೀಡದ ಕಾರಣ ಕಳೆದ ವರ್ಷ ಅಕ್ಟೋಬರ್ 25ರಂದು, ಕರ್ನಾಟಕದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೊಳಗೊಂಡ ನಿಯೋಗದೊಂದಿಗೆ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಶೀಘ್ರ ಬರ ಪರಿಹಾರಕ್ಕೆ ಮನವಿ ಮಾಡಲಾಗಿತ್ತು. ಈ ನಡುವೆ ಇದೇ ಅವಧಿಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರ ಭೇಟಿಗೆ ಅವಕಾಶ ಕೋರಿ ಎರಡು ಪತ್ರ ಬರೆದಿದ್ದರು. ಆದರೆ, ಅವರ ಭೇಟಿಗೆ ಅವಕಾಶ ನೀಡಲಾಗಿರಲಿಲ್ಲ” ಎಂದು ಹೇಳಿದ್ದಾರೆ.

‘ಕಳೆದ ವರ್ಷ ನವೆಂಬರ್ 24 ರಂದು ಕರ್ನಾಟಕದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲಾಗಿತ್ತು. ಅಲ್ಲದೆ, ಶೀಘ್ರ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಸಚಿವರು ಚರ್ಚೆ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರಾದರೂ ಇದರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿರಲಿಲ್ಲ. ಕಳೆದ ವರ್ಷ ಡಿಸೆಂಬರ್ 19 ರಂದು ಕೊನೆಗೂ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತ್ತು. ಈ ವೇಳೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆಗೆ ನಾನೂ ಸಹ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಸಭೆಯಲ್ಲಿ ಕರ್ನಾಟಕದ ಬರ ಪರಿಸ್ಥಿತಿಯ ಕುರಿತು ಪ್ರಧಾನಿಗೆ ವಿವರಿಸಲಾಗಿತ್ತು. ಶೀಘ್ರವೇ ₹18,177.44 ಕೋಟಿ ಪರಿಹಾರ ಬಿಡುಗಡೆಗೂ ಮನವಿ ಮಾಡಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಕರ್ನಾಟಕ ಸರ್ಕಾರ ಬೇರೆ ದಾರಿ ಕಾಣದೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದಿಂದ ಬರ ಪರಿಹಾರವನ್ನು ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಈ ಕ್ಷಣದ ವರೆಗೆ ಸಾಂವಿಧಾನಿಕ ಮಾದರಿಯಲ್ಲಿ ಹೋರಾಟ ನಡೆಸುತ್ತಿದೆಯೇ ವಿನಃ, ಈ ವಿಚಾರದಲ್ಲಿ ರಾಜಕೀಯ ಮಾಡಿರಲಿಲ್ಲ. ಇಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮೇಲಾಟ ಸರಿಯಲ್ಲ ಎಂಬುದು ನಮ್ಮ ಅಭಿಪ್ರಾಯ. ರೈತರಿಗೆ ನೆರವು ನೀಡುವ ವಿಚಾರದಲ್ಲಿ ರಾಜಕೀಯ ಸರಿಯಲ್ಲ” ಎಂದು ಕೇಂದ್ರ ಗೃಹ ಸಿಚವರಿಗೆ ತಿರುಗೇಟು ಕೊಟ್ಟಿದ್ದಾರೆ.

“ತೆರಿಗೆ ಹಂಚಿಕೆ, ವಿಶೇಷ ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ರೈತರಿಗೆ ಬರ ಪರಿಹಾರ ನೀಡುವ ವಿಚಾರವನ್ನೂ ಕೇಂದ್ರ ಸರ್ಕಾರ ರಾಜಕೀಯಗೊಳಿಸಿ ಕರ್ನಾಟಕವನ್ನು ಶೋಷಣೆಗೆ ಮಾಡುತ್ತದೆ ಎಂದು ನಾವು ಭಾವಿಸಿರಲಿಲ್ಲ. ಇನ್ನೂ ಜನರ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಇದೇ ವಿಚಾರವನ್ನು ಮುಂದಿಟ್ಟು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹಸಿ ಹಸಿ ಸುಳ್ಳು ಹೇಳುತ್ತಾರೆ ಎಂದು ನಾವು ಖಂಡಿತ ಭಾಸಿರಲಿಲ್ಲ. ಅವರ ಈ ವರ್ತನೆಗೆ ನಾನು ವಿಷಾದಿಸುತ್ತೇವೆ” ಎಂದು ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ‘ಭಾರತದ ಭೂಮಿಯನ್ನು ಬಾಂಗ್ಲಾಕ್ಕೆ ಕೊಟ್ಟ ಮೋದಿ..’; ಬಿಜೆಪಿ ವಿರುದ್ಧ ಫಾರೂಕ್ ಅಬ್ದುಲ್ಲಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...