Homeಮುಖಪುಟಅಮಿತ್ ಶಾ ವಿರುದ್ಧದ ಹಕ್ಕುಚ್ಯುತಿ ನೋಟಿಸ್ ತಿರಸ್ಕರಿಸಿದ ಜಗದೀಪ್ ಧನಕರ್

ಅಮಿತ್ ಶಾ ವಿರುದ್ಧದ ಹಕ್ಕುಚ್ಯುತಿ ನೋಟಿಸ್ ತಿರಸ್ಕರಿಸಿದ ಜಗದೀಪ್ ಧನಕರ್

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಹಕ್ಕುಚ್ಯುತಿ ಸೂಚನೆಯನ್ನು ರಾಜ್ಯಸಭೆ ಸ್ಪೀಕರ್ ಜಗದೀಪ್ ಧನಕರ್‌ ಗುರುವಾರ ತಿರಸ್ಕರಿಸಿದ್ದಾರೆ. ಪ್ರಧಾನಿಯ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯ ನಿರ್ವಹಣೆಯಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಭಾಗವಾಗಿದ್ದಾರೆ ಎಂದು ಅಮಿತ್ ಹೇಳಿಕೆ ನೀಡಿದ್ದ ಹಿನ್ನಲೆ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ನೋಟಿಸ್ ನೀಡಲಾಗಿತ್ತು.

ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಮೇಲೆ ಈ “ಆಕ್ಷೇಪಣೆಗಳನ್ನು” ವ್ಯಕ್ತಪಡಿಸಿದ್ದಕ್ಕಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಅಮಿತ್ ಶಾ ವಿರುದ್ಧ ನೋಟಿಸ್ ಸಲ್ಲಿಸಿದ್ದರು. ಅಮಿತ್ ಶಾ ವಿರುದ್ಧದ 

ಮಾರ್ಚ್ 25 ರಂದು ರಾಜ್ಯಸಭೆಯಲ್ಲಿ 2024 ರ ವಿಪತ್ತು ನಿರ್ವಹಣಾ ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸುವಾಗ ಅಮಿತ್ ಶಾ ಈ ಹೇಳಿಕೆಗಳನ್ನು ನೀಡಿದ್ದರು. ಈ ವೇಳೆ ಅವರು ತಮ್ಮ ಹೇಳಿಕೆಯನ್ನು ದೃಢೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ಜಗದೀಪ್ ಧನಕರ್ ಹೇಳಿದ್ದಾರೆ.

ಜನವರಿ 24, 1998 ರಂದು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಹೊರಡಿಸಿದ ಪತ್ರಿಕಾ ಹೇಳಿಕೆಯನ್ನು ಉಲ್ಲೇಖಿಸಿದ್ದ ಗೃಹ ಸಚಿವ ಅಮಿತ್ ಶಾ, ಅದರಲ್ಲಿ ಆಗಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು PMNRF ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದನ್ನು ಪ್ರಧಾನಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು ಮತ್ತು ಇತರ ಕೆಲವು ಜನರು ಒಳಗೊಂಡ ಸಮಿತಿಯು ನಿರ್ವಹಿಸಬೇಕಿತ್ತು ಎಂದು ಹೇಳಿದ್ದರು.

“ನಾನು ಅದನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ಯಾವುದೇ ಉಲ್ಲಂಘನೆ ನಡೆದಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ” ಎಂದು ಜಗದೀಪ್ ಧನಕರ್ ಹೇಳಿದ ಅವರು, ಹಕ್ಕುಚ್ಯುತಿ ಮಂಡನೆಯನ್ನು ತಿರಸ್ಕರಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಿಮಾಚಲ ಪ್ರದೇಶ | ಬಿಜೆಪಿ ಪರ ಹಿಂದುತ್ವ ದುಷ್ಕರ್ಮಿಗಳಿಂದ ಬೆದರಿಕೆ; ಈದ್ ಆಚರಣೆ ರದ್ದು ಮಾಡಿದ ಶಾಲೆ

ಹಿಮಾಚಲ ಪ್ರದೇಶ | ಬಿಜೆಪಿ ಪರ ಹಿಂದುತ್ವ ದುಷ್ಕರ್ಮಿಗಳಿಂದ ಬೆದರಿಕೆ; ಈದ್ ಆಚರಣೆ ರದ್ದು ಮಾಡಿದ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...

ಇಂಧನ ಬಿಕ್ಕಟ್ಟು: ‘ಭಾರತದಲ್ಲಿ ಲಾಕ್‌ಡೌನ್ ಇಲ್ಲ’: ‘ಅಂತಹ ಯಾವುದೇ ಪ್ರಸ್ತಾಪ ಪರಿಗಣನೆಯಲ್ಲಿಲ್ಲ’; ಹರ್ದೀಪ್ ಪುರಿ ಸ್ಪಷ್ಟನೆ

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾದ ಎಲ್‌ಪಿಜಿ ಬಿಕ್ಕಟ್ಟಿನ ಮಧ್ಯೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಭಾರತದಲ್ಲಿ ಲಾಕ್‌ಡೌನ್ ವದಂತಿಗಳು "ಸುಳ್ಳು" ಎಂದು ಹೇಳಿದ್ದಾರೆ. ಇಂಧನ ಬಿಕ್ಕಟ್ಟಿನ ಕಳವಳಗಳನ್ನು ತಿಳಿಸುತ್ತಾ...

ವಿಶೇಷ ಸಚಿವ ಸಂಪುಟ ಮುಂದೂಡಿದ ಸರ್ಕಾರ; ಒಳಮೀಸಲಾತಿ ನಿರ್ಧಾರ ಮತ್ತಷ್ಟು ವಿಳಂಬ

ಪರಿಶಿಷ್ಟ ಜಾತಿಯೊಳಗಿನ (ಎಸ್‌ಸಿ) ಒಳಮೀಸಲಾತಿ ಜಾರಿ ಸಂಬಂಧ ಇಂದು ಸರ್ಕಾರ ನಡೆಸಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನು ಉಪಚುನಾವಣೆ 'ಮಾದರಿ ನೀತಿ ಸಂಹಿತೆ' ಕಾರಣ ಮುಂದಿಟ್ಟು ಮುಂದೂಡಿದೆ. ಆ ಮೂಲಕ, ಒಳಮೀಸಲಾತಿ ನಿರ್ಧಾರವನ್ನು...

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...