Homeರಾಷ್ಟ್ರೀಯ10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

- Advertisement -
- Advertisement -

ಅಸ್ಸಾಂನಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯನ್ನು ಒಕ್ಕೂಟ ಸರ್ರಕಾವು ಮುಂದಿಟ್ಟರೆ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಅಧ್ಯಕ್ಷ ದೀಪಂಕ ಕುಮಾರ್ ನಾಥ್ ಎಚ್ಚರಿಸಿದ್ದಾರೆ.

ಏಪ್ರಿಲ್ 7 ರಂದು ಸಂಸತ್ತಿನ ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ಅಮಿತ್ ಶಾ, ವಿವಿಧ ಭಾಷಾ ಸಮುದಾಯಗಳ ನಡುವೆ ಕೊಂಡಿಯಾಗಿ ಹಿಂದಿ ಭಾಷೆ ಇರಬೇಕು, ಇಂಗ್ಲಿಷ್ ಅಲ್ಲ ಎಂದು ಹೇಳಿದ್ದರು. ಈಶಾನ್ಯ ರಾಜ್ಯಗಳಲ್ಲಿ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಬೇಕು ಮತ್ತು ಈ ರಾಜ್ಯಗಳ ಒಂಬತ್ತು ಬುಡಕಟ್ಟು ಸಮುದಾಯಗಳು ಈಗಾಗಲೇ ದೇವನಾಗರಿ ಲಿಪಿಗೆ ಬದಲಾಗಿವೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೃಹ ಸಚಿವರ ಈ ಹೇಳಿಕೆಗೆ ಅಸ್ಸಾಂ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. “10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಈ ಪ್ರದೇಶದಲ್ಲಿನ ‘ಸ್ಥಳೀಯ ಭಾಷೆಗಳ’ ಭವಿಷ್ಯಕ್ಕೆ ಬೆದರಿಕೆಯನ್ನುಂಟು ಮಾಡುತ್ತದೆ” ಎಂದು ‘ಆಲ್‌ ಅಸ್ಸಾಂ ಸ್ಟೂಡಂಟ್‌ ಯುನಿಯನ್‌’ನ ಸಲಹೆಗಾರ ಸಮುಜ್ಜಲ್ ಭಟ್ಟಾಚಾರ್ಯ ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ‘ರಾಜಕೀಯ ಹಿತಾಸಕ್ತಿ’ ಯಿಂದ ಈ ಪ್ರಸ್ತಾಪವನ್ನು ನಡೆಸಲಾಗಿದೆ. ಪಕ್ಷವು ಉತ್ತರದ ರಾಜ್ಯಗಳ ಹಿಂದಿ ಬೆಲ್ಟ್ ಅನ್ನು ಪ್ರಭಾವಿಸಲು ಪ್ರಯತ್ನಿಸುತ್ತಿದೆ ಎಂದು ದೀಪಂಕ ಕುಮಾರ್ ನಾಥ್ ಹೇಳಿದ್ದಾರೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ’: ಅಮಿತ್‌ ಶಾ ಹೇಳಿಕೆ ವಿರುದ್ದ ತಮಿಳುನಾಡು BJP ಅಧ್ಯಕ್ಷ ಅಣ್ಣಾಮಲೈ

ಈ ಎಲ್ಲಾ ಹಿನ್ನಲೆಯಲ್ಲಿ, ಅಸ್ಸಾಮಿ ಉಪರಾಷ್ಟ್ರೀಯತೆಯ ಘೋಷಣೆಯನ್ನು ಪಠಿಸುತ್ತಾ ಅಧಿಕಾರಕ್ಕೆ ಬಂದ ಅಸ್ಸಾಂನ ಬಿಜೆಪಿ ಸರ್ಕಾರವು ಈಗ ಸಂಕಷ್ಟದಲ್ಲಿದೆ.

ಆದರೆ ಬಿಜೆಪಿಯ ಕೇಂದ್ರ ನಾಯಕತ್ವದ ಜೊತೆಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ನಂಬಲಾಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಅಸಮತೋಲನವನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. 10ನೇ ತರಗತಿವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಕ್ಕೂಟ ಸರ್ಕಾರದ ಆದೇಶ ಇನ್ನೂ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

“ಅಮಿತ್ ಶಾ ಅವರು ಮಕ್ಕಳಿಗೆ ಹಿಂದಿ ತಿಳಿದಿರಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಕ್ಕಳು ಹಿಂದಿ ಮತ್ತು ಇಂಗ್ಲಿಷ್ ತಿಳಿಯಬೇಕೆಂದು ನಾವು ಬಯಸುತ್ತೇವೆ. ಆದರೆ ಹಿಂದಿ ಕಲಿಯಲು ಬೇಕಾಗಿ ಅಸ್ಸಾಮಿ ಕಲಿಯುವುದನ್ನು ಬಿಡಬೇಕು ಎಂದು ಅವರು ಹೇಳಿಲ್ಲ” ಎಂದು ಹಿಮಾಂತ ಅವರು ತರ್ಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಪಾದಿಸಲಾದ ಮೂರು ಭಾಷೆಯ ಸೂತ್ರದ ಬದಲಿಗೆ ನಾಲ್ಕು ಭಾಷೆಗಳನ್ನು ಪರಿಚಯಿಸುವುದು ಸಮಸ್ಯೆಗೆ ಪರಿಹಾರವಾಗಿದೆ ಎಂದು ಹಿಮಾಂತ ಅವರ ಅಭಿಪ್ರಾಯವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ, ರಾಜ್ಯಗಳು, ಪ್ರದೇಶಗಳು ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳು ತಾವು ಯಾವುದಾದರೂ ಮೂರು ಭಾಷೆಗಳನ್ನು ಕಲಿಯಲು ನಿರ್ಧರಿಸಬಹುದು. ಆದರೆ ಇವುಗಳಲ್ಲಿ ಕನಿಷ್ಠ ಎರಡು ಭಾಷೆಗಳು ‘ಭಾರತದ ಸ್ಥಳೀಯ ಭಾಷೆ’ ಆಗಿರಬೇಕು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಈ ನಡುವೆ ಅಸ್ಸಾಂ ಮಾತ್ರವಲ್ಲದೆ, ಇತರ ರಾಜ್ಯಗಳು ಕೂಡಾ 10 ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸುವ ಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ. ಮಿಜೋರಾಂ ಸರ್ಕಾರವು ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಹೇಳಿದೆ. ನಾಗಲ್ಯಾಂಡ್‌‌ ಸರ್ಕಾರವು ಈ ನೀತಿಯನ್ನು ಜಾರಿಗೆ ತರಲು ಒಕ್ಕೂಟ ಸರ್ಕಾರ ಇನ್ನೂ ಔಪಚಾರಿಕ ಸೂಚನೆಗಳನ್ನು ನೀಡಿಲ್ಲ ಎಂದು ಬೆಟ್ಟು ಮಾಡಿದೆ.

ಈಶಾನ್ಯ ಪ್ರದೇಶದ ಏಳು ರಾಜ್ಯಗಳನ್ನು ಪ್ರತಿನಿಧಿಸುವ ಎಂಟು ಪ್ರಮುಖ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾದ ‘ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ’ಯು ಶಾ ಅವರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, “ಈಶಾನ್ಯ ಪ್ರದೇಶದಲ್ಲಿ ಹಿಂದಿಯನ್ನು ಕಡ್ಡಾಯ ವಿಷಯವಾಗಿ ಹೇರುವುದು ಸ್ಥಳೀಯ ಭಾಷೆಗಳ ಪ್ರಚಾರ ಮತ್ತು ಪ್ರಸರಣಕ್ಕೆ ಹಾನಿಕಾರಕವಾಗಿದೆ. ಮಾತ್ರವಲ್ಲದೆ ತಮ್ಮ ಈಗಾಗಲೇ ವಿಶಾಲವಾದ ಪಠ್ಯಕ್ರಮಕ್ಕೆ ಮತ್ತೊಂದು ಕಡ್ಡಾಯ ವಿಷಯವನ್ನು ಸೇರಿಸಲು ಒತ್ತಾಯಿಸಲ್ಪಡುವುದು ವಿದ್ಯಾರ್ಥಿಗಳಿಗೂ ತೊಂದರೆ ಮಾಡುತ್ತದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...