Homeಕರ್ನಾಟಕ'ಲಿಂಗಾಯತ ಸಿಎಂ' ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

- Advertisement -
- Advertisement -

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಲ್ಲಿ ಪ್ರಭಾವಿ ಲಿಂಗಾಯತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಲಿಂಗಾಯತ ನಾಯಕರು ಬಿಜೆಪಿ ತೊರೆದಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸುವ ಪ್ರಯತ್ನಕ್ಕೆ ಕೈ ಹಾಕಿತು. ಆದರೆ ಇದಕ್ಕೆ ತಡೆಯೊಡ್ಡುವ ನಿಟ್ಟಿನಲ್ಲಿ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸಿಎಂ ಅಭ್ಯರ್ಥಿಯಾಗಿ ಲಿಂಗಾಯತ ಮುಖಂಡರೊಬ್ಬರನ್ನು ಬಿಂಬಿಸುವ ಪ್ರಸ್ತಾವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿಯ ಪ್ರಮುಖ ಲಿಂಗಾಯಿತ ಮುಖಂಡರಾಗಿದ್ದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಪಕ್ಷ ತೊರೆದಿರುವುದರಿಂದ, 224 ಸದಸ್ಯಬಲದ ವಿಧಾನಸಭೆಯಲ್ಲಿ ಅಗತ್ಯ ಬಹುಮತ (113 ಸ್ಥಾನ)ಕ್ಕಿಂತ 15-20 ಹೆಚ್ಚು ಸ್ಥಾನಗಳನ್ನು ಗೆಲ್ಲುವುದಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಶಾ ಶನಿವಾರ ಸ್ಪಷ್ಟಪಡಿಸಿದ್ದಾರೆ.

”ಶೆಟ್ಟರ್ ಹಾಗೂ ಸವದಿಯಂತಹ ಲಿಂಗಾಯತ ಮುಖಂಡರು ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ತಡೆಯಲು ಲಿಂಗಾಯತ ಮುಖಂಡರೊಬ್ಬರನ್ನು ಸಿಎಂ ಅಭ್ಯರ್ಥಿಯಾಗಿ ಬಿಂಬಿಸುವಂತೆ ಪ್ರಸ್ತಾವ ಮುಂದಿಟ್ಟೆವು. ಆದರೆ ಇದು ಲಿಂಗಾಯತರನ್ನು ಹೊರತುಪಡಿಸಿ ಇತರ ಮತದಾರರ ಧ್ರುವೀಕರಣಕ್ಕೆ ಕಾರಣವಾಗುತ್ತದೆ ಎಂಬ ಕಾರಣ ನೀಡಿದ ಶಾ ನಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದರು” ಎಂದು ಶಾ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ಬಹಿರಂಗಪಡಿಸಿದ್ದಾರೆ.

ಡಬಲ್ ಎಂಜಿನ್ ಪ್ರಗತಿ ಮತ್ತು ಮೀಸಲಾತಿ ವಿಷಯವನ್ನು ಚುನಾವಣೆಯಲ್ಲಿ ಬಿಂಬಿಸುವಂತೆ ಶಾ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಎಪ್ರಿಲ್ 30ರ ಬಳಿಕ  ನರೇಂದ್ರ ಮೋದಿ ನಡೆಸುವ 20ಕ್ಕೂ ಹೆಚ್ಚು ರ‍್ಯಾಲಿಗಳನ್ನು ಎಲ್ಲ ಕ್ಷೇತ್ರಗಳಲ್ಲಿ ಸಮರ್ಥವಾಗಿ ಬಳಸಿಕೊಳ್ಳುವಂತೆಯೂ ಸಲಹೆ ನೀಡಿದರು.

ಬಿಜೆಪಿ ಲಿಂಗಾಯತ ವಿರೋಧಿ: ಕಾಂಗ್ರೆಸ್ ಆರೋಪ

ಬಿಜೆಪಿ ಲಿಂಗಾಯತ ಸಮುದಾಯದ ವಿರೋಧಿ ಎನ್ನುವ ಆರೋಪ ಮಾಡಿರುವ ಕಾಂಗ್ರೆಸ್, ಆ ಬಗ್ಗೆ ಹಲವು ಟ್ವೀಟ್ ಮಾಡಿದೆ. ”ಬಿಜೆಪಿಯ ಲಿಂಗಾಯತ ವಿರೋಧಿ ನೀತಿ ಕೇವಲ ರಾಜಕೀಯ ಕಾರಣಕ್ಕಾಗಿ ಮಾತ್ರವಲ್ಲ, ಅದು ಮನುವಾದ vs ಬಸವ ತತ್ವದ ಸೈದ್ದಂತಿಕ ಸಂಘರ್ಷದ ದ್ವೇಷ. ಚುನಾವಣೆಗಾಗಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಸಿದ್ದಗಂಗಾ ಶ್ರೀಗಳ ಅಂತ್ಯಸಂಸ್ಕಾರಕ್ಕೆ ಬರಲು ಸಮಯವಿರಲಿಲ್ಲವೇ?” ಎಂದು #ಲಿಂಗಾಯತವಿರೋಧಿಬಿಜೆಪಿ ಎಂದು ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

”ಲಿಂಗಾಯತ ನಾಯಕರನ್ನು ತುಳಿಯುತ್ತಿರುವ ಬಿಜೆಪಿ ವಿರುದ್ಧ ತಿರುಗಿಬಿದ್ದ ಲಿಂಗಾಯತರ ಕಿವಿ ಮೇಲೆ ಹೂವಿಡಲು ಲಿಂಗಾಯತರನ್ನೇ ಸಿಎಂ ಮಾಡುತ್ತೇವೆ ಎನ್ನುತ್ತಿದ್ದಾರೆ ಬಿಜೆಪಿಗರು. ಆದರೆ ಮುಂದೆಯೂ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ ಎಂದು ಹೇಳುತ್ತಿಲ್ಲವೇಕೆ? ಇದರರ್ಥ ಬೊಮ್ಮಾಯಿಯವರನ್ನೂ ಮೂಲೆಗೆ ತಳ್ಳುವುದು ನಿಶ್ಚಿತ.” ಎಂದು #ಲಿಂಗಾಯತವಿರೋಧಿಬಿಜೆಪಿ ಹ್ಯಾಶ್‌ಟ್ಯಾಗ್ ಹಾಕಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...