Homeರಾಜಕೀಯ2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

- Advertisement -
- Advertisement -

ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗೆ ಕಾರಣರಾದವರಿಗೆ “ಕಠಿಣ ಪಾಠ ಕಲಿಸಲಾಗಿದೆ”, ಹೀಗಾಗಿ 22 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿದೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಗುರುವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದರು. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಅಪರಾಧಿಗಳನ್ನು ಮುಕ್ತವಾಗಿ ನಡೆಯಲು ಅವಕಾಶ ನೀಡಿದ್ದೇ ಅಮಿತ್‌ ಶಾ ಕಲಿಸಿದ ‘ಪಾಠ’ಗಳಾಗಿವೆ” ಎಂದು ಹೇಳಿದ್ದಾರೆ.

ಗುಜರಾತ್‌ನ ಅತಿದೊಡ್ಡ ಮುಸ್ಲಿಂ ಬಾಹುಳ್ಯದ ಪ್ರದೇಶವಾದ ಜುಹಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, “ಅಮಿತ್ ಶಾ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ, ‘2002 ರಲ್ಲಿ ಗುಜರಾತ್‌ನ ಗಲಭೆಕೋರರಿಗೆ ಕಠಿಣ ಪಾಠ ಕಲಿಸಿದ್ದು, ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಮಾಡಿದೆ’ ಎಂದು ಹೇಳಿದ್ದಾರೆ. ಈ ಅಹಮದಾಬಾದ್‌ ಕ್ಷೇತ್ರದ ಸಂಸದ ಅಮಿತ್ ಶಾ ಅವರಿಗೆ ನಾನು ಹೇಳಲು ಬಯಸುವುದೇನೆಂದರೆ, 2002 ರಲ್ಲಿ ನೀವು ಕಲಿಸಿದ ಪಾಠದಿಂದಾಗಿ ಬಿಲ್ಕಿಸ್ ಅತ್ಯಾಚಾರಿಗಳಿಗೆ ಮುಕ್ತಿ ಸಿಗುತ್ತದೆ, ನೀವು ಕಲಿಸಿದ ಪಾಠದಿಂದಾಗಿ ಬಿಲ್ಕಿಸ್‌ನ ಮೂರು ವರ್ಷದ ಮಗಳ ಕೊಲೆಗಾರರಿಗೆ ಬಿಡುಗಡೆ ಸಿಗುತ್ತದೆ, ಅಹ್ಸಾನ್ ಜಾಫ್ರಿಯನ್ನು ಕೊಲ್ಲಬಹುದೆಂದು ಎಂಬ ಪಾಠ ಕಲಿಸಿದ್ದೀರಿ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉದ್ವೇಗಗೊಂಡು ಮಾಡನಾಡಿದ ಓವೈಸಿ, 2002 ರ ಕೋಮು ಗಲಭೆಯಲ್ಲಿ ಸಾವಿರಕ್ಕೂ ಹೆಚ್ಚು ಜನರ ಬಲಿ ಪಡೆದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಮತ್ತು ಬೆಸ್ಟ್‌ ಬೇಕರಿ ಸುಟ್ಟ ಘಟನೆ ಬಗ್ಗೆ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಇತಿಹಾಸದ ವಿರೂಪ ಸರಿಪಡಿಸುವಾಗ ನಮ್ಮನ್ನು ಈಗ ಯಾರು ತಡೆಯುತ್ತಾರೆ?: ಅಮಿತ್ ಶಾ ಪ್ರಶ್ನೆ

“ಮಿಸ್ಟರ್ ಅಮಿತ್ ಶಾ ಅವರೇ ನಾವು ಎಷ್ಟು ಪಾಠಗಳನ್ನು ನೆನಪಿಸಿಕೊಳ್ಳಬೇಕು? ಆದರೆ ನೆನಪಿಡಿ, ಪಾಠ ಕಲಿಸುವುದರಿಂದ ಏನೂ ಆಗುವುದಿಲ್ಲ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ನೀಡಿದಾಗ ಶಾಂತಿ ಬಲಗೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಅಮಿತ್‌ ಶಾ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಓವೈಸಿ, “ಅಧಿಕಾರ ಯಾವತ್ತೂ ಒಬ್ಬ ವ್ಯಕ್ತಿಯ ಬಳಿ ಇರುವುದಿಲ್ಲ. ಮುಂದೊಂದು ದಿನ ಅಧಿಕಾರವನ್ನು ಎಲ್ಲರಿಂದಲೂ ಕಿತ್ತುಕೊಳ್ಳುತ್ತಾರೆ. ಅಧಿಕಾರದ ಅಮಲಿನಲ್ಲಿ ಇಂದು ಗೃಹ ಸಚಿವರು ನಾವು ಪಾಠ ಕಲಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ನೀವು ಏನು ಪಾಠ ಕಲಿಸಿದ್ದೀರಿ? ನೀವು ಇಡೀ ದೇಶಕ್ಕೆ ಕುಖ್ಯಾತಿ ಪಡೆದಿದ್ದೀರಿ. ದೆಹಲಿಯಲ್ಲಿ ಕೋಮುಗಲಭೆಗಳು ನಡೆಯುತ್ತಿವೆ, ಆದರೆ ನೀವು ಯಾವ ಪಾಠ ಕಲಿಸಿದ್ದೀರಿ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಚುನಾವಣೆಯು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...