Homeಮುಖಪುಟವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

ವಿವಾದಾತ್ಮಕ AFPSA ಅಡಿಯಲ್ಲಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದ ಅಮಿತ್ ಶಾ!

- Advertisement -
- Advertisement -

ನಾಗಾಲ್ಯಾಂಡ್, ಅಸ್ಸಾಂ ಮತ್ತು ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಾತ್ಮಕ ಕಾನೂನಾಗಿರುವ, ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ’ಯಡಿಯಲ್ಲಿ ಒಳಗೊಂಡಿರುವ ಪ್ರದೇಶಗಳನ್ನು ಕಡಿಮೆಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಅವರು ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ ಗುರುವಾರ ತಿಳಿಸಿದ್ದಾರೆ.

ಈ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಅವರು, “ನಿರಂತರ ಪ್ರಯತ್ನಗಳು ಮತ್ತು ದಂಗೆಯನ್ನು ಕೊನೆಗೊಳಿಸಲು ಹಾಗೂ ಈಶಾನ್ಯದಲ್ಲಿ ಶಾಶ್ವತ ಶಾಂತಿಯನ್ನು ತರಲು ನಡೆದ ಹಲವಾರು ಒಪ್ಪಂದಗಳಿಂದಾಗಿ ಸುಧಾರಿತ ಭದ್ರತಾ ಪರಿಸ್ಥಿತಿ ಮತ್ತು ವೇಗದ ಅಭಿವೃದ್ಧಿ ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಈಶಾನ್ಯ ಭಾಗದ ಜನರನ್ನು ಅಭಿನಂದಿಸುತ್ತಾ, ಹಿಂದೆ ಬಂದ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ ಮತ್ತು ಈಗ ಶಾಂತಿ, ಸಮೃದ್ಧಿ ಮತ್ತು ಅಭೂತಪೂರ್ವ ಅಭಿವೃದ್ಧಿಯ ಹೊಸ ಯುಗಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮೂರು ಬಂಡಾಯ ಪೀಡಿತ ರಾಜ್ಯಗಳಿಂದ AFSPAಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ ಎಂಬುವುದು ಈ ನಿರ್ಧಾರವು ಸೂಚಿಸುವುದಿಲ್ಲ. ಕಾಯಿದೆಯು ಇನ್ನೂ ಕೆಲವು ಪ್ರದೇಶಗಳಲ್ಲಿ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

AFSPA ಕಾಯಿದೆಯು ಭದ್ರತಾ ಪಡೆಗಳಿಗೆ ಎಲ್ಲಿ ಬೇಕಾದರೂ ಕಾರ್ಯಾಚರಣೆ ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಲು ಅಧಿಕಾರ ನೀಡುತ್ತದೆ. ಒಂದು ವೇಳೆ ಕಾರ್ಯಾಚರಣೆಯು ತಪ್ಪಾದ ಸಂದರ್ಭದಲ್ಲಿ ಭದ್ರತಾ ಪಡೆಗಳಿಗೆ ಇದು ಒಂದು ನಿರ್ದಿಷ್ಟ ಮಟ್ಟದ ವಿನಾಯಿತಿ ನೀಡುತ್ತದೆ. ಇದು ವ್ಯಾಪಕ ಅಧಿಕಾರವನ್ನು ನೀಡುವುದರ ಜೊತೆಗೆ, ಇದು ನಾಗರಿಕ ವಿಚಾರಣೆಯ ವಿರುದ್ಧ ಪಡೆಗಳಿಗೆ ಕಾನೂನು ವಿನಾಯಿತಿ ನೀಡುತ್ತದೆ.

ಇದನ್ನೂ ಓದಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಆದಾಗ್ಯೂ, ಕಾಯ್ದೆಯ ಅಡಿಯಲ್ಲಿ ಸೇನೆಯು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿ ಹೋರಾಟಗಾರದು ಅದನ್ನು ವಾಪಾಸು ಪಡೆಯುವಂತೆ ದಶಕಗಳಿಂದಲೂ ಕರೆ ನೀಡುತ್ತಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ AFSPA ರಕ್ಷಣೆ ನೀಡುತ್ತದೆ ಎಂದು ಕಾಯಿದೆಯ ವಿಮರ್ಶಕರು ಹೇಳುತ್ತಿದ್ದಾರೆ. ಯಾಕೆಂದರೆ ಈ ಅಧಿಕಾರಿಗಳನ್ನು ನಾಗರಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಮತ್ತು ಮಿಲಿಟರಿಯ ಆಂತರಿಕ ಪ್ರಕ್ರಿಯೆಗಳು ಅಪಾರದರ್ಶಕವಾಗಿವೆ ಎಂದು ಆರೋಪಿಸಲಾಗಿದೆ.

ಕಾಯಿದೆಯಡಿಯಲ್ಲಿ, ನಾಗರಿಕ ನ್ಯಾಯಾಲಯಗಳಲ್ಲಿ ಸೇನೆ ಅಥವಾ ಅರೆಸೇನಾ ಪಡೆಗಳನ್ನು ವಿಚಾರಣೆಗೆ ಒಳಪಡಿಸಲು ಸ್ಥಳೀಯ ಪೊಲೀಸರಿಗೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ.

ಕಳೆದ ವರ್ಷ ಡಿಸೆಂಬರ್ 4 ರಂದು ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 14 ನಾಗರಿಕರು ಸಾವನ್ನಪ್ಪಿದ ನಂತರ ಕಾಯಿದೆಯನ್ನು ರದ್ದುಪಡಿಸುವ ನಿರಂತರ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ. ಹೀಗಾಗಿ ಅಮಿತ್‌ ಷಾ ಅವರ ಇಂದಿನ ಘೋಷಣೆಯು ಮಹತ್ವದ್ದೆನಿಸಿದೆ.

ಮಣಿಪುರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವಿವಾದಾತ್ಮಕ ಕಾಯ್ದೆಯನ್ನು ರಾಜ್ಯದಿಂದ ತೆಗೆದುಹಾಕುವ ಬೇಡಿಕೆಯನ್ನು ಪರಿಹರಿಸುವುದಾಗಿ ಎಲ್ಲಾ ಪಕ್ಷಗಳು ಭರವಸೆ ನೀಡಿದ್ದವು. ಎರಡನೇ ಅವಧಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿದ ಬಿರೇನ್ ಸಿಂಗ್, ಎಎಫ್‌ಎಸ್‌ಪಿಎ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ರಾಜ್ಯ ಚುನಾವಣೆಗಳನ್ನು ಎದುರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...