Homeಮುಖಪುಟಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ಪಶ್ಚಿಮ ಬಂಗಾಳ ಪ್ರವಾಸ: ಜೆ.ಪಿ.ನಡ್ಡಾ ಬಿಟ್ಟು ಅಮಿತ್ ಶಾಗೆ ಮಣೆ ಹಾಕಿದ ಬಿಜೆಪಿ!

ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ. ಈ ಉದ್ದೇಶದಿಂದ ಪಕ್ಷದ ಸಾಂಸ್ಥಿಕ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖಂಡ ಅಮಿತ್ ಶಾ ನವೆಂಬರ್ 5 ರಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.

ಆದರೆ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವೆಂಬರ್ 6ಕ್ಕೆ ಭೇಟಿ ನೀಡಬೇಕಿತ್ತು. ಆದರೆ ತಡ ರಾತ್ರಿಯ ಬೆಳವಣಿಗೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿಗದಿತ ಭೇಟಿ ರದ್ದುಗೊಂಡಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಮಾಹಿತಿ ನೀಡಿದ್ದಾರೆ.

“ಜೆ.ಪಿ.ನಡ್ಡಾ ಜಿ ಅವರ ಭೇಟಿ ರದ್ದುಗೊಂಡಿದೆ. ಅಮಿತ್ ಶಾ ಜಿ ಅವರು ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳದಲ್ಲಿರುತ್ತಾರೆ ಎಂದು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ. ’ಅಮಿತ್ ಶಾ ನವೆಂಬರ್ 5 ರಂದು ಮದಿನಿಪುರ ಸಾಂಸ್ಥಿಕ ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಯಿದೆ ಮತ್ತು ಮರುದಿನ ಅವರು ರಾಜ್ಯದ ಪಕ್ಷದ ಮುಖಂಡರನ್ನು ಭೇಟಿಯಾಗಲಿದ್ದಾರೆ. ಈಗಿನ ವೇಳಾಪಟ್ಟಿಯನ್ನು ಇನ್ನು ಅಂತಿಮಗೊಳಿಸಲಾಗಿಲ್ಲ’ ಎಂದು ಬಸು ತಿಳಿಸಿದ್ದಾರೆ.

ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪಕ್ಷ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು, ಬಂಗಾಳ ಪ್ರವಾಸದಲ್ಲಿ ಸಂಘಟನೆಯ ವಿವಿಧ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಅಮಿತ್ ಶಾ, ಪಕ್ಷದ ಹಿರಿಯ ನಾಯಕರಾದ ಕೈಲಾಶ್ ವಿಜಯವರ್ಗಿಯಾ, ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರೊಂದಿಗೆ ಮತ್ತು ಬೂತ್, ಜಿಲ್ಲಾ ಮಟ್ಟದ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿವೆ.

ಅಮಿತ್ ಶಾ ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್‍ಯಾಲಿ ನಡೆಸಿದ್ದರು. ಕೊರೊನಾ ಲಾಕ್‌ಡೌನ್‌ ನಂತರ ಪಶ್ಚಿಮ ಬಂಗಾಳಕ್ಕೆ ಇದು ಅವರ ಮೊದಲ ಪ್ರವಾಸವಾಗಿದೆ.  ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಟೀಕಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾ ಅವರ ಭೇಟಿ ಮಹತ್ವದ್ದಾಗಿದೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟುಹೋಗಿದೆ ಎಂದು ಆರೋಪಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಒತ್ತಾಯಿಸುತ್ತಿದ್ದಾರೆ.

2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದ ಬಿಜೆಪಿ ಆಡಳಿತಾಎ ತೃಣಮೂಲ ಕಾಂಗ್ರೆಸ್ಸಿನ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿದೆ. ಹೀಗಾಗಿ ಈ ಬಾರಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಅಮಿತ್ ಶಾ ಹೊಸ ಪಟ್ಟುಗಳನ್ನು ಹಾಕುತ್ತಿದ್ದಾರೆ. ಜೆ.ಪಿ.ನಡ್ಡಾರ ಪ್ರವಾಸವನ್ನು ರದ್ದುಗೊಳಿಸಿ, ತಾವೇ ಅಲ್ಲಿನ ಸ್ಥಿತಿಗತಿಗಳನ್ನು ತಿಳಿದುಕೊಳ್ಳು ಹೊರಟಿದ್ದಾರೆ.

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದಾಗಿ ಬಿಜೆಪಿ ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಿರೀಕ್ಷಿತ ಯಶಸ್ಸು ಗಳಿಸುವಲ್ಲಿ ವಿಫಲವಾದ ಪ.ಬಂಗಾಳದ ಬಿಜೆಪಿ ರ್‍ಯಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...