Homeಮುಖಪುಟಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

"ರಾಜಕೀಯ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ದೆಹಲಿ ಆಗಮಿಸುವಂತೆ ಸಮನ್ಸ್‌ ನೀಡಲಾಗಿದೆ"

- Advertisement -
- Advertisement -

ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಿ ಭಯ ಹುಟ್ಟಿಸುವ ಮೂಲಕ ರಾಜ್ಯದಲ್ಲಿ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಾಳಿಯಾದಗಿನಿಂದ ಈ ಆರೋಪ-ಪ್ರತ್ಯಾರೋಗಳು ಆರಂಭವಾಗಿವೆ.

ಇದರ ಭಾಗವಾಗಿ, “ರಾಜಕೀಯ ಉದ್ದೇಶದಿಂದ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ದೆಹಲಿ ಆಗಮಿಸುವಂತೆ ಸಮನ್ಸ್‌ ನೀಡಲಾಗಿದೆ” ಎಂದು ಲೋಕಸಭೆಯಲ್ಲಿನ ತೃಣಮೂಲ ಕಾಂಗ್ರೆಸ್‌ನ ಮುಖಂಡ ಕಲ್ಯಾಣ್ ಬ್ಯಾನರ್ಜಿ ದೂರಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಷ್ಟ್ರೀಯತೆಯ ಹೆಸರಿನಲ್ಲಿ ಅನ್ಯಧರ್ಮಗಳ ಜನರ ಮೇಲೆ ಸವಾರಿ

ಈ ವಿಷಯದ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ ಅವರಿಗೆ ಬರೆದಿರುವ ಪತ್ರದಲ್ಲಿ, “ರಾಜ್ಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಚರ್ಚೆಗೆ ಕರೆದಿರುವುದು ಏಕೆ” ಎಂದು ಪ್ರಶ್ನಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಕೇಂದ್ರ ಗೃಹ ಸಚಿವರ ನಿರ್ದೇಶನದ ಮೇರೆಗೆ ಹಿರಿಯ ಅಧಿಕಾರಿಗಳಿಗೆ ಸಮನ್ಸ್‌ ನೀಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಬೆದರಿಕೆ ಹಾಕುವ ತಂತ್ರವನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ನೀಡಿದ ಎನ್‌ಡಿಎ ಮಿತ್ರಪಕ್ಷ RLP

ಒಕ್ಕೂಟ ವ್ಯವಸ್ಥೆಯನ್ನು ಧಿಕ್ಕರಿಸಿ ಕೇಂದ್ರ ಸರ್ಕಾರವು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಧಾನಸಭೆಗೆ ನಿಷ್ಠೆಯಿಂದ ಇರಬೇಕೇ ಹೊರತು ನಿಮಗೆ ಅಥವಾ ನಿಮ್ಮ ಗೃಹ ಸಚಿವರಿಗೆ ಅಲ್ಲ ಎಂದು ದೂರಿದ್ದಾರೆ.

ಪ್ರಕರಣವೊಂದರಲ್ಲಿ ಅಪರಾಧಿಯಾಗಿದ್ದ ಮತ್ತು 59 ಇತರ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ಎದುರಿಸುತ್ತಿರುವ ವ್ಯಕ್ತಿಯೊಬ್ಬ ನಡ್ಡಾ ಅವರ ಬೆಂಗಾವಲು ವಾಹನದಲ್ಲಿದ್ದ. ಈತ ರಸ್ತೆ ಬದಿಯಲ್ಲಿದ್ದ ಟಿಎಂಸಿ ಬೆಂಬಲಿಗರಿಗೆ ಪ್ರಚೋದನಾಕಾರಿ ಸನ್ನೆ ಮಾಡುತ್ತಿದ್ದ ಎಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸರ್ಕಾರಿ ಉದ್ಯೋಗಿಗಳು ಟೀ ಶರ್ಟ್, ಜೀನ್ಸ್ ಧರಿಸುವಂತಿಲ್ಲ!

ಕೋಲ್ಕತ್ತದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ಮುಖ್ಯಮಂತ್ರಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಸಂಸದೀಯ ಕ್ಷೇತ್ರವಾದ ಡೈಮಂಡ್ ಹಾರ್ಬರ್‌ನಲ್ಲಿ ಈ ಘಟನೆ ನಡೆದಿದೆ.


ಇದನ್ನೂ ಓದಿ: ಕರ್ನಾಟಕ ಸರಕಾರ ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ನಾಶ ಮಾಡಲು ಹೊರಟಂತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...