Homeಕರ್ನಾಟಕಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

- Advertisement -
- Advertisement -

2023 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸದ್ಯದಲ್ಲೇ ಸಚಿವ ಸಂಪುಟ ಪುನರ್‍ರಚನೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಇದರ ಜೊತೆಜೊತಗೆ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಬಗ್ಗೆಗಿನ ಸುದ್ದಿಗಳು ಕೂಡಾ ಬಿಜೆಪಿ ವಲಯದಲ್ಲಿ ಹರಿದಾಡುತ್ತಿದೆ. ಹೊಸ ಸಚಿವ ಸಂಪುಟದಲ್ಲಿ 10ಕ್ಕೂ ಹೆಚ್ಚು ಹೊಸ ಮತ್ತು ಯುವ ಮುಖಗಳಿಗೆ ಅವಕಾಶ ಕಲ್ಪಿಸಲು ಚಿಂತಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್‌ ಹೆರಾಲ್ಡ್‌ ವರದಿ ಮಡಿದೆ. ಬಿಜೆಪಿಯು ಇದೇ ತಂತ್ರವನ್ನು ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅನುಸರಿಸಿತ್ತು.

ಮೂಲಗಳ ಪ್ರಕಾರ, ಈ ವಾರದ 8-9 ಕ್ಕೆ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನಿಗದಿಯಾಗಿತ್ತು. ಆದರೆ ಇದೀಗ ಅದು ರದ್ದಾಗಿದ್ದು, ಜನವರಿ 18-19 ರ ವೇಳೆಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ದ್ವೇಷ ಭಾಷಣ: ವಿವಾದಿತ ಕಾಳಿಚರಣ್ ಸ್ವಾಮಿಯನ್ನು ವಶಕ್ಕೆ ಪಡೆದ ಮಹಾರಾಷ್ಟ್ರ ಪೊಲೀಸರು

“ಅಮಿತ್‌ ಶಾ ಅವರ ಸಭೆಯಲ್ಲಿ ಪ್ರಮುಖ ಮೂರು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಮೊದಲನೆಯದಾಗಿ ಸಂಪುಟ ಪುನರ್‍ರಚನೆ, ಎರಡನೆಯದ್ದಾಗಿ ಮುಖ್ಯಮಂತ್ರಿ ಬದಲಾವಣೆ, ಮೂರನೆಯದ್ದಾಗಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ. ಈ ಸಭೆಯಲ್ಲಿ ಸಂಪುಟ ಪುನರ್‍ರಚನೆ ಬಗ್ಗೆ ಒಪ್ಪಿಗೆ ಸಿಕ್ಕರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇಲ್ಲವೆಂದರೆ ಮುಖ್ಯಮಂತ್ರಿ ಬಲದಲಾವಣೆ ಸಾಧ್ಯತೆ ಇದೆ” ಎಂದು ಮೂಲವೊಂದು ನಾನುಗೌರಿ.ಕಾಂಗೆ ಹೇಳಿದೆ.

ಒಟ್ಟಿನಲ್ಲಿ ಬಿಜೆಪಿಯ ಎಲ್ಲಾ ರಾಜಕೀಯ ಬದಲಾವಣೆಗಳು ಸಂಕ್ರಾಂತಿ ಹಬ್ಬದ ನಂತರ ನಿರೀಕ್ಷಿಸಲಾಗಿದೆ. ಒಂದು ವೇಳೆ ಸಚಿವ ಸಂಪುಟ ಪುನರ್‍ರಚನೆ ನಡೆದರೆ 2023 ರ ಚುನಾವಣೆಯವರೆಗೆ ಬೊಮ್ಮಾಯಿ ಅವರ ಸ್ಥಾನ ಭದ್ರವಾಗಿ ಇರಲಿದೆ ಎಂದು ಮೂಲಗಳು ಹೇಳುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಆಗಿರುವ ಹಿನ್ನಲೆಯಲ್ಲಿ ಈ ಎಲ್ಲಾ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಪಕ್ಷದ ಸಂಘಟನೆ ಬಗ್ಗೆ ನಿಷ್ಕ್ರಿಯವಾಗಿರುವ ಸಚಿವರನ್ನು ವಜಾಗೊಳಿಸಲು ಬಿಜೆಪಿ ಕೇಂದ್ರ ನಾಯಕತ್ವ ಮುಂದಾಗಿದೆ. ಸಿಎಂ ವಿರುದ್ಧ ಇರುವ ಕೆಲವು ಹಿರಿಯ ಸಚಿವರನ್ನೂ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಡೆಕ್ಕನ್‌ ಹೆರಾಲ್ಡ್‌ ಹೇಳಿದೆ.

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ಇತ್ತೀಚೆಗೆ ನಡೆದ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಒಬ್ಬ ಹಿರಿಯ ಸಚಿವನಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದರು. ಇಷ್ಟೇ ಅಲ್ಲದೆ ವಿರೋಧ ಪಕ್ಷದ ನಾಯಕರೊಂದಿಗೆ ‘ಹೊಂದಾಣಿಕೆ’ ಇರುವ ಮಂತ್ರಿಗಳ ಬಗ್ಗೆ ಕೂಡಾ ಕೇಂದ್ರ ನಾಯಕತ್ವವು ಅತೃಪ್ತಿಯಲ್ಲಿದೆ ಎಂದು ಮೂಲಗಳು ಹೇಳುತ್ತವೆ ಎಂದು DH ವರದಿ ಮಾಡಿದೆ.

“ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೊನೆವರೆಗೂ ಯಾರೂ ಬಿಟ್ಟುಕೊಡುವುದಿಲ್ಲ. ಯಾಕೆಂದರೆ ಒಂದು ವೇಳೆ ಅದು ಬಹಿರಂಗವಾದರೆ ಆಡಳಿತ ಯಂತ್ರ ಕುಸಿದು ಬಿದ್ದು, ಮುಖ್ಯಮಂತ್ರಿಯ ಅಧಿಕಾರಕ್ಕೆ ಮನ್ನಣೆ ಸಿಗುವುದಿಲ್ಲ, ಹೀಗಾಗಿ ಕೊನೆವರೆಗೂ ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಕಳೆದ ಬಾರಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಾಗ ಕೂಡಾ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೊನೆವರೆಗೂ ಸಿಎಂ ಬದಲಾವಣೆ ಇಲ್ಲ ಎಂದೇ ಹೇಳಿದ್ದರು. ಆದರೆ ಕೊನೆಗೆ ಸಿಎಂ ಬದಲಾವಣೆ ಆಗಿತ್ತಲ್ಲವೇ” ಎಂದು ನಾನುಗೌರಿ.ಕಾಂ ಜೊತೆ ರಾಜಕೀಯ ವಿಶ್ಲೇಷಕರೊಬ್ಬರು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಪಕ್ಷವು ತನ್ನ ಸ್ಥಾನವನ್ನು ಹೆಚ್ಚಿಸಲು ಉತ್ಸುಕವಾಗಿರುವುದರಿಂದ, ಪ್ರಾದೇಶಿಕ ಅಸಮತೋಲನದ ಬಗ್ಗೆ ಎದ್ದಿರುವ ಆರೋಪಗಳನ್ನು ಪರಿಹರಿಸಲು ಸಂಪುಟ ಪುನರ್‍ರಚನೆಗೆ ಪ್ರಯತ್ನಿಸುತ್ತಿದೆ. ಇದಲ್ಲದೆ, ಸತತ ಚುನಾವಣೆಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಸಮುದಾಯಗಳ ಪ್ರತಿನಿಧಿಗಳಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ DH ವರದಿ ತಿಳಿದೆ.

ಇದನ್ನೂ ಓದಿ:ಕಥುವಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಅಪರಾಧಿ ಬಿಡುಗಡೆ, ಆತಂಕದಲ್ಲಿ ಸಂತ್ರಸ್ತ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...