Homeಮುಖಪುಟರೈಲುಗಳ ಪ್ರವೇಶಕ್ಕೆ ಅಡ್ಡಿ - ಮಮತಾ ಬ್ಯಾನರ್ಜಿಗೆ ಪತ್ರ ಬರೆದ ಅಮಿತ್ ಶಾ

ರೈಲುಗಳ ಪ್ರವೇಶಕ್ಕೆ ಅಡ್ಡಿ – ಮಮತಾ ಬ್ಯಾನರ್ಜಿಗೆ ಪತ್ರ ಬರೆದ ಅಮಿತ್ ಶಾ

- Advertisement -
- Advertisement -

ವಲಸೆ ಕಾರ್ಮಿಕರನ್ನು ಕರೆತಂದಿರುವ ರೈಲುಗಳು ಪಶ್ಚಿಮಬಂಗಾಳ ಪ್ರವೇಶಿಸದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ತಡೆಯುತ್ತಿದೆ. ಇದರಿಂದ ವಲಸೆ ಕಾರ್ಮಿಕರು ಮತ್ತೆ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಅವರಿಗೆ ಪತ್ರ ಬರೆದಿರುವ ಅಮಿತ್ ಶಾ ವಲಸೆ ಕಾರ್ಮಿಕರು ಮನೆ ಸೇರಬೇಕಾಗಿದೆ. ಆದರೆ ನಮಗೆ ನಿರೀಕ್ಷಿತ ಬೆಂಬಲ ದೊರೆಯುತ್ತಿಲ್ಲ. ಪಶ್ಚಿಮ ಬಂಗಾಳಕ್ಕೆ ವಲಸೆ ಕಾರ್ಮಿಕರನ್ನು ಕರೆತಂದಿರುವ ರೈಲುಗಳನ್ನು ರಾಜ್ಯದೊಳಕ್ಕೆ ಬಿಟ್ಟುಕೊಳ್ಳುತ್ತಿಲ್ಲ ಎಂದು ದೂರಿದ್ದಾರೆ.

ಇದು ವಲಸೆ ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಪಶ್ಚಿಮ ಬಂಗಾಳ ಸರ್ಕಾರದ ನಡೆಯಿಂದ ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಶ್ರಮಿಕ್ ವಿಶೇಷ ರೈಲುಗಳು ವಲಸೆ ಕಾರ್ಮಿಕರನ್ನು ದೇಶದ ವಿವಿಧ ಭಾಗಗಳಲ್ಲಿ ಕರೆದೊಯ್ಯುತ್ತಿವೆ. ಅವರನ್ನು ಮನೆಗಳಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಸುಮಾರು 2 ಲಕ್ಷ ಕಾರ್ಮಿಕರು ಮನೆ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಕಾರ್ಯದರ್ಶಿಗಳು ಕೂಡ ಮುಖ್ಯಮಂತ್ರಿಗೆ ಪತ್ರ ಬರೆದು, ಪಶ್ಚಿಮ ಬಂಗಾಳದಲ್ಲಿ ರಿಕ್ಷಾಗಳು ಓಡಾಡುತ್ತಿವೆ. ಮಕ್ಕಳು ಕ್ರಿಕೆಟ್ ಆಟದಲ್ಲಿ ತೊಡಗಿದ್ದಾರೆ. ಜನರು ನದಿಯಲ್ಲಿ ಸ್ನಾನ ಮಾಡುತ್ತಿದ್ದಾರೆ. ಇಎಲ್ಲವೂ ಲಾಕ್ ಡೌನ್ ನಿಯಮಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮುಂಬೈನಲ್ಲಿ ಉಪವಾಸ ಧರಣಿ ಆರಂಭಿಸಿದ ಕರ್ನಾಟಕದ ವಲಸೆ ಕಾರ್ಮಿಕರು


ವಿಡಿಯೋ ನೋಡಿ: ಸದ್ದು…ಈ ಸುದ್ದಿಗಳೇನಾದವು? ಸಂಚಿಕೆ 5


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...