Homeಮುಖಪುಟಅಮಿತ್ ಷಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ: ಎಲ್ಲರಿಗೂ ಕೋವಿಡ್ ಪರೀಕ್ಷೆಗೆ ಕಾಂಗ್ರೆಸ್ ಒತ್ತಾಯ

ಅಮಿತ್ ಷಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ: ಎಲ್ಲರಿಗೂ ಕೋವಿಡ್ ಪರೀಕ್ಷೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ದೆಹಲಿಯಲ್ಲಿನ ಕೊರೋನ ವೈರಸ್ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸರ್ವಪಕ್ಷ ಸಭೆಯಲ್ಲಿ ದೆಹಲಿಯ ಪ್ರತಿಯೊಬ್ಬರ ಕೋವಿಡ್ ಪರೀಕ್ಷೆ ನಡೆಸಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಸಭೆಯಲ್ಲಿ ಭಾಗವಹಿಸಿದ ರಾಜಕೀಯ ನಾಯಕರಲ್ಲಿ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಕುಮಾರ್, ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಕುಮಾರ್ ಗುಪ್ತಾ ಮತ್ತು ಆಪ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಕುಮಾರ್, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಪ್ರತಿನಿಧಿಗಳು ಸೇರಿದ್ದಾರೆ.

ಕೋವಿಡ್ -19 ಪರೀಕ್ಷೆಯನ್ನು ಎಲ್ಲರಿಗೂ ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷವು ಒತ್ತಾಯಿಸಿದೆ. ಇದು ಎಲ್ಲರ ಹಕ್ಕು ಎಂದು ಪ್ರತಿಪಾದಿಸಿರುವ ಕಾಂಗ್ರೆಸ್‌, ಕಂಟೈನ್‌ಮೆಂಟ್‌ ಝೋನ್‌ನಲ್ಲಿರುವ ಅಥವಾ ಸೋಂಕಿತ ಪ್ರತಿ ಕುಟುಂಬಕ್ಕೆ ನೇರ 10,000 ರೂ. ಪಾವತಿಸಬೇಕೆಂದು ಒತ್ತಾಯಿಸಿದೆ.

ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯ ಒದಗಿಸಲು ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಾತ್ಕಾಲಿಕ ನಿವಾಸಿ ವೈದ್ಯರಾಗಿ ಬಳಸಬೇಕೆಂದು ಕಾಂಗ್ರೆಸ್ ಶಿಫಾರಸ್ಸು ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೂನ್ 20 ರ ವೇಳೆಗೆ ದೆಹಲಿ ಸರ್ಕಾರವು ದಿನಕ್ಕೆ 18,000 ಕೋವಿಡ್‌- 19 ಪರೀಕ್ಷೆಗಳನ್ನು ನಡೆಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಕುಮಾರ್ ಗುಪ್ತಾ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ನಂತರ ತಿಳಿಸಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಬಿಜೆಪಿ 50% ಶುಲ್ಕವನ್ನು ಪರೀಕ್ಷೆಯಲ್ಲಿ ಮನ್ನಾ ಮಾಡಬೇಕೆಂದು ಒತ್ತಾಯಿಸಿತು. ಈ ಬೇಡಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮೋದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೋವಿಡ್ -19 ರ ನಿರ್ವಹಣೆಯಲ್ಲಿ ದೆಹಲಿ ಸರ್ಕಾರಕ್ಕೆ ಸಹಾಯ ಮಾಡಲು ನಾಲ್ಕು ಐಎಎಸ್ ಅಧಿಕಾರಿಗಳನ್ನು ತಕ್ಷಣ ವರ್ಗಾಯಿಸಲು ಷಾ ನಿರ್ದೇಶನ ನೀಡಿದ್ದರು. ಅದರಂತೆ ಅಂಡಮಾನ್ ಮತ್ತು ನಿಕೋಬಾರ್‌ನ ಇಬ್ಬರು ಅಧಿಕಾರಿಗಳನ್ನು ಮತ್ತು ಅರುಣಾಚಲ ಪ್ರದೇಶದ ಇಬ್ಬರು ಅಧಿಕಾರಿಗಳನ್ನು ನವದೆಹಲಿಗೆ ಮರು ನಿಯೋಜಿಸಲಾಗಿದೆ.


ಇದನ್ನೂ ಓದಿ: ಇಸ್ಲಾಮಾಬಾದ್‌ನಲ್ಲಿ ಇಬ್ಬರು ಭಾರತೀಯ ಹೈಕಮಿಷನ್ ಅಧಿಕಾರಿಗಳು ಕಾಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...