Homeಮುಖಪುಟಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ...

ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

- Advertisement -
- Advertisement -

ಇಂಗ್ಲಿಷ್ ಭಾಷೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಗಳನ್ನು ಕೇರಳ ಸಚಿವರಾದ ಆರ್. ಬಿಂದು ಮತ್ತು ವಿ. ಶಿವನ್‌ಕುಟ್ಟಿ ಶುಕ್ರವಾರ ಟೀಕಿಸಿದ್ದಾರೆ. ಇಂಗ್ಲಿಷ್ ಭಾಷೆಯ ವಿರುದ್ಧದ ಅವರ ಹೇಳಿಕೆ “ನಿರ್ಬಂಧಿತ ಮತ್ತು ಸಂಕುಚಿತ ಮನಸ್ಸಿನ” ರಾಜಕೀಯ ದೃಷ್ಟಿಕೋನವನ್ನು ಸೂಚಿಸುತ್ತದೆ ಮತ್ತು “ಇದು ಖಂಡನೀಯ” ಎಂದು ಕೇರಳ ಸಚಿವರು ಹೇಳಿದ್ದಾರೆ. ಅಮಿತ್ ಶಾ ಇಂಗ್ಲಿಷ್

ಪರಸ್ಪರ ಮತ್ತು ಅಂತರ್ಜಾಲದಲ್ಲಿ ಸಂವಹನ ನಡೆಸಲು ಪ್ರಪಂಚದಾದ್ಯಂತ ಇಂಗ್ಲಿಷ್ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಭಾಷೆಯಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವೆ ಬಿಂದು ಹೇಳಿದ್ದಾರೆ. “ಮಕ್ಕಳು ಇಂಗ್ಲಿಷ್ ಕಲಿಯಬಾರದು ಅಥವಾ ಅದರಿಂದ ಮುಜುಗರಕ್ಕೊಳಗಾತ್ತೇವೆ ಎಂಬ ದೃಷ್ಟಿಕೋನವು ಅವರ ಜಗತ್ತು ಹೆಚ್ಚು ನಿರ್ಬಂಧಿತವಾಗಲು ಕಾರಣವಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಇದಲ್ಲದೆ, ಭಾರತವು ವಿಶ್ವದಿಂದ ಪ್ರತ್ಯೇಕವಾದ ದ್ವೀಪವಲ್ಲ. ಆದ್ದರಿಂದ, ಇಂಗ್ಲಿಷ್ ಕಲಿಯುವುದು ಅಗತ್ಯವಾಗುತ್ತಿದೆ” ಎಂದು ಅವರು ಅಮಿತ್‌ ಶಾ ಅವರ ಹೇಳಿಕೆಗಳ ಕುರಿತು ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೇಳಿದ್ದಾರೆ.

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುವಂತೆ ಆಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದರು ಎಂದು ವರದಿಯಾಗಿದೆ.

ಸಚಿವೆ ಬಿಂದು ಅವರ ಹೇಳಿಕೆಯ ರೀತಿಯಲ್ಲೆ ಮಾತನಾಡಿದ ರಾಜ್ಯ ಸಾಮಾನ್ಯ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ, ಅಮಿತ್‌ ಶಾ ಅವರ ಹೇಳಿಕೆಗಳನ್ನು “ಖಂಡನೀಯ” ಎಂದು ಕರೆದಿದ್ದಾರೆ. “ಯಾವುದೇ ಭಾಷೆ ಇನ್ನೊಂದು ಭಾಷೆಗಿಂತ ಉನ್ನತವಲ್ಲ ಅಥವಾ ಕೀಳಲ್ಲ” ಎಂದು ಹೇಳಿದ್ದಾರೆ.

“ಪ್ರತಿಯೊಂದು ಭಾಷೆಗೂ ತನ್ನದೇ ಆದ ಪ್ರಾಮುಖ್ಯತೆ ಇದೆ. ಅಂತರರಾಷ್ಟ್ರೀಯ ಭಾಷೆಯಾಗಿ ಇಂಗ್ಲಿಷ್ ಜ್ಞಾನ ಮತ್ತು ಸಂವಹನದ ಪ್ರಮುಖ ಸಾಧನವಾಗಿದೆ. ಅದು ಮಾತ್ರ ದೇಶದ ಪ್ರಗತಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇರಳ ಸರ್ಕಾರವು ಎಲ್ಲಾ ಭಾಷೆಗಳನ್ನು ಉತ್ತೇಜಿಸಲು ಮತ್ತು ವಿದ್ಯಾರ್ಥಿಗಳು ತಾವು ಅಧ್ಯಯನ ಮಾಡಲು ಬಯಸುವ ಭಾಷೆಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಹೊಂದುವಂತೆ ನೋಡಿಕೊಳ್ಳಲು ಬದ್ಧವಾಗಿದೆ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

“ಭಾಷಾ ವೈವಿಧ್ಯತೆಯು ನಮ್ಮ ದೇಶದ ಶಕ್ತಿಯಾಗಿದೆ ಮತ್ತು ಅದನ್ನು ರಕ್ಷಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಸಚಿವೆ ಬಿಂದು, “ಸಂವಿಧಾನದ ಎಂಟನೇ ವೇಳಾಪಟ್ಟಿಯಲ್ಲಿ 22 ಅಧಿಕೃತ ಭಾಷೆಗಳಿವೆ. ಭಾರತದಲ್ಲಿನ ಈ ಭಾಷೆಗಳ ವೈವಿಧ್ಯತೆಯು ಒಂದು ನಿಧಿಯಾಗಿದೆ ಮತ್ತು ಅದನ್ನೆಲ್ಲ ಒಂದು ಭಾಷೆಗೆ ಇಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಒಂದು, ಇಂಗ್ಲಿಷ್ ಕಲಿಯಬೇಡಿ ಎಂದು ಹೇಳುವ ಮೂಲಕ ಯುವ ಪೀಳಿಗೆಯ ಜಗತ್ತನ್ನು ನಿರ್ಬಂಧಿಸಲು ಅವರು ಉದ್ದೇಶಿಸಿದ್ದಾರೆ. ಇನ್ನೊಂದು ಬದಿ ಹಿಂದಿ ಹೇರಿಕೆ. ಇದೆಲ್ಲವೂ ನಿರ್ಬಂಧಿತ ಮತ್ತು ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ. ಅಮಿತ್ ಶಾ ಇಂಗ್ಲಿಷ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ ಗವಾಯಿ ಹೇಳಿಕೆ

ಕಾರ್ಯಾಂಗ ಏಕಕಾಲದಲ್ಲಿ ನ್ಯಾಯಾಧೀಶ, ತೀರ್ಪುಗಾರ ಮತ್ತು ಶಿಕ್ಷೆ ಜಾರಿಗೊಳಿಸುವವರಾಗಲು ಅಸಾಧ್ಯ: ಬುಲ್ಡೋಜರ್ ನ್ಯಾಯ ಉಲ್ಲೇಖಿಸಿ ಸಿಜೆಐ ಗವಾಯಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...