ರಾಜ್ಯದ 40% ಕಮಿಷನ್ ಭ್ರಷ್ಟಾಚಾರಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ರವರು ಅಧಿಕೃತ ಒಪ್ಪಿಗೆಯ ಮುದ್ರೆಯೊತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಪಿಎಸ್‌ಐ ಹಗರಣದಲ್ಲಿ ಸರ್ಕಾರ, ಮಂತ್ರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ. ಸುಮಾರು ರೂ. 300 ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ. ಆದ್ದರಿಂದ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವುದಿಲ್ಲ ಹಾಗಾಗಿ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು” ಎಂದು ಒತ್ತಾಯಿಸಿದರು.
ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರ ಸಂಘದವರು, ಸ್ವಾಮೀಜಿಗಳು ಹೇಳಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಕಮಿಷನ್ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಶಾಲೆಯ ಮೇವು ಖರೀದಿಗೆ, ಬಿಬಿಎಂಪಿ ಕಾಮಗಾರಿಗಳಿಗೂ 40% ಕಮಿಷನ್ ಕೊಡಬೇಕು. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಮೋದಿಯವರು ಕಳೆದ ಚುನಾವಣೆ ಸಮಯದಲ್ಲಿ ನಮ್ಮ ಸರ್ಕಾರವನ್ನು ಹತ್ತು ಪರ್ಸೆಂಟ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದರು. 7/6/2021 ರಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪತ್ರ ಬರೆದಿದ್ದಾರೆ. ಇದಾಗಿ ಸುಮಾರು ಹತ್ತು ತಿಂಗಳಾದ್ರೂ ಈ ವರೆಗೆ ಮೋದಿ ಅವರು ತನಿಖೆಯನ್ನು ನಡೆಸಿಲ್ಲ, ರಾಜ್ಯ ಸರ್ಕಾರದಿಂದ ವರದಿ ಪಡೆಯುವ ಕೆಲಸವನ್ನು ಮಾಡಿಲ್ಲ. ಈಗ ಪ್ರಧಾನಿಗಳು ಈ ಸರ್ಕಾರಕ್ಕೆ 40% ಕಮಿಷನ್ ಪಡೆಯಲು ಪರವಾನಗಿ ಕೊಟ್ಟಿದ್ದಾರ? “ನ ಖಾವೂಂಗಾ, ನ ಖಾನೇದೂಂಗ” ಎಂದು ಹೇಳಿ ಜನರ ಕಣ್ಣೊರೆಸುತ್ತಾ, ಭ್ರಷ್ಟಾಚಾರಕ್ಕೆ ಪ್ರಧಾನಿಗಳು ಬೆಂಬಲವಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ: ಬಿ.ಕೆ ಹರಿಪ್ರಸಾದ್ ಆರೋಪ
ಪಿಎಸ್‌ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡು ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುವುದಾಗಿ ಹೇಳಿದೆ. ಸರ್ಕಾರ ಭಾಗಿಯಾಗದೆ ಇಂಥದ್ದೊಂದು ಭ್ರಷ್ಟಾಚಾರ ಮಾಡಲು ಸಾಧ್ಯವಾಗಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಶ್ವಥ್ ನಾರಾಯಣ ಅವರ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪರೀಕ್ಷೆಯಲ್ಲಿ 5 ನೇ ರ್ಯಾಂಕ್ ಬಂದಿರುವ ದರ್ಶನ್ ಗೌಡ ಹಾಗೂ 10ನೇ ರ್ಯಾಂಕ್ ಬಂದಿರುವ ನಾಗೇಶ್ ಗೌಡ ಎಂಬುವವರು ಅಶ್ವಥ್ ನಾರಾಯಣ ಅವರ ಸಂಬಂಧಿಕರು. ಈ ಇಬ್ಬರನ್ನು ವಿಚಾರಣೆಗೆ ಕರೆದು ಬಿಟ್ಟು ಕಳಿಸಿದ್ದಾರೆ. ಉಳಿದವರ ಬಂಧನವಾಗಿದೆ, ಈ ಇಬ್ಬರ ಬಂಧನ ಯಾಕೆ ಆಗಿಲ್ಲ? ಅಶ್ವಥ್ ನಾರಾಯಣ ಅವರ ಮೇಲೆ ಭ್ರಷ್ಟಾಚಾರದ ತೂಗುಗತ್ತಿ ನೇತಾಡುತ್ತಿದೆ. ಕೂಡಲೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.



ಭಾಜಪ ಅಂದ್ರೆ ಭ್ರಷ್ಟಾಚಾರ ಜನತಾ ಪಾರ್ಟಿ…. ಇನ್ನೇನು ಹೇಳಲು ಸಾಧ್ಯ…
Ayyo… Rasma Raama… Hindu.. Hindu… Antha helikonde… Janarannu thappu daarigeledu sarkaaravannu darode maadtha ideyalla swami….!…. Yellaru seri kitthogeyabekaagide brastarannu.