Homeಮುಖಪುಟಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

ಸರ್ಕಾರದ 40% ಕಮಿಷನ್ ಭ್ರಷ್ಟಾಚಾರಕ್ಕೆ ಅಮಿತ್ ಶಾ ಅಧಿಕೃತ ಒಪ್ಪಿಗೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

ರಾಜ್ಯದ 40% ಕಮಿಷನ್ ಭ್ರಷ್ಟಾಚಾರಕ್ಕೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ರವರು ಅಧಿಕೃತ ಒಪ್ಪಿಗೆಯ ಮುದ್ರೆಯೊತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಪಿಎಸ್‌ಐ ಹಗರಣದಲ್ಲಿ ಸರ್ಕಾರ, ಮಂತ್ರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ. ಸುಮಾರು ರೂ. 300 ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ. ಆದ್ದರಿಂದ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವುದಿಲ್ಲ ಹಾಗಾಗಿ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು” ಎಂದು ಒತ್ತಾಯಿಸಿದರು.

ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರ ಸಂಘದವರು, ಸ್ವಾಮೀಜಿಗಳು ಹೇಳಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಕಮಿಷನ್ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಶಾಲೆಯ ಮೇವು ಖರೀದಿಗೆ, ಬಿಬಿಎಂಪಿ ಕಾಮಗಾರಿಗಳಿಗೂ 40% ಕಮಿಷನ್ ಕೊಡಬೇಕು. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಮೋದಿಯವರು ಕಳೆದ ಚುನಾವಣೆ ಸಮಯದಲ್ಲಿ ನಮ್ಮ ಸರ್ಕಾರವನ್ನು ಹತ್ತು ಪರ್ಸೆಂಟ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದರು. 7/6/2021 ರಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪತ್ರ ಬರೆದಿದ್ದಾರೆ. ಇದಾಗಿ ಸುಮಾರು ಹತ್ತು ತಿಂಗಳಾದ್ರೂ ಈ ವರೆಗೆ ಮೋದಿ ಅವರು ತನಿಖೆಯನ್ನು ನಡೆಸಿಲ್ಲ, ರಾಜ್ಯ ಸರ್ಕಾರದಿಂದ ವರದಿ ಪಡೆಯುವ ಕೆಲಸವನ್ನು ಮಾಡಿಲ್ಲ. ಈಗ ಪ್ರಧಾನಿಗಳು ಈ ಸರ್ಕಾರಕ್ಕೆ 40% ಕಮಿಷನ್ ಪಡೆಯಲು ಪರವಾನಗಿ ಕೊಟ್ಟಿದ್ದಾರ? “ನ ಖಾವೂಂಗಾ, ನ ಖಾನೇದೂಂಗ” ಎಂದು ಹೇಳಿ ಜನರ ಕಣ್ಣೊರೆಸುತ್ತಾ, ಭ್ರಷ್ಟಾಚಾರಕ್ಕೆ ಪ್ರಧಾನಿಗಳು ಬೆಂಬಲವಾಗಿ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ: ಬಿ.ಕೆ ಹರಿಪ್ರಸಾದ್ ಆರೋಪ

ಪಿಎಸ್‌ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡು ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುವುದಾಗಿ ಹೇಳಿದೆ. ಸರ್ಕಾರ ಭಾಗಿಯಾಗದೆ ಇಂಥದ್ದೊಂದು ಭ್ರಷ್ಟಾಚಾರ ಮಾಡಲು ಸಾಧ್ಯವಾಗಲ್ಲ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಶ್ವಥ್ ನಾರಾಯಣ ಅವರ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪರೀಕ್ಷೆಯಲ್ಲಿ 5 ನೇ ರ್ಯಾಂಕ್ ಬಂದಿರುವ ದರ್ಶನ್ ಗೌಡ ಹಾಗೂ 10ನೇ ರ್ಯಾಂಕ್ ಬಂದಿರುವ ನಾಗೇಶ್ ಗೌಡ ಎಂಬುವವರು ಅಶ್ವಥ್ ನಾರಾಯಣ ಅವರ ಸಂಬಂಧಿಕರು. ಈ ಇಬ್ಬರನ್ನು ವಿಚಾರಣೆಗೆ ಕರೆದು ಬಿಟ್ಟು ಕಳಿಸಿದ್ದಾರೆ. ಉಳಿದವರ ಬಂಧನವಾಗಿದೆ, ಈ ಇಬ್ಬರ ಬಂಧನ ಯಾಕೆ ಆಗಿಲ್ಲ? ಅಶ್ವಥ್ ನಾರಾಯಣ ಅವರ ಮೇಲೆ ಭ್ರಷ್ಟಾಚಾರದ ತೂಗುಗತ್ತಿ ನೇತಾಡುತ್ತಿದೆ. ಕೂಡಲೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾಜಪ ಅಂದ್ರೆ ಭ್ರಷ್ಟಾಚಾರ ಜನತಾ ಪಾರ್ಟಿ…. ಇನ್ನೇನು ಹೇಳಲು ಸಾಧ್ಯ…

  2. Ayyo… Rasma Raama… Hindu.. Hindu… Antha helikonde… Janarannu thappu daarigeledu sarkaaravannu darode maadtha ideyalla swami….!…. Yellaru seri kitthogeyabekaagide brastarannu.

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...