Homeರಂಜನೆಕ್ರೀಡೆಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಅಮಿತ್ ಶಾ ಮಗ ಜಯ್ ಶಾ ನೇಮಕ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಅಮಿತ್ ಶಾ ಮಗ ಜಯ್ ಶಾ ನೇಮಕ

- Advertisement -
- Advertisement -

ಗೃಹಮಂತ್ರಿ ಅಮಿತ್ ಶಾ ಅವರ ಮಗ ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ (ACC) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ ಎಂದು ಭಾರತೀಯ ಕ್ರಿಕೆಟ್ ಕೌನ್ಸಿಲ್ (BCCI) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಜಯ್ ಶಾ ಪ್ರಸ್ತುತ BCCI ನ ಗೌರವ ಕಾರ್ಯದರ್ಶಿಗಳಾಗಿದ್ದಾರೆ.

ಈ ಕುರಿತು BCCI ಟ್ವೀಟ್ ಮಾಡಿದೆ.

ಇದನ್ನೂ ಓದಿ: ವಂಶಾಡಳಿತ ರಾಜಕಾರಣವೇ ಪ್ರಜಾಪ್ರಭುತ್ವದ ಅತಿದೊಡ್ಡ ಶತ್ರು: ನರೇಂದ್ರ ಮೋದಿ

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ನಜ್ಮುಲ್ ಹಸನ್ ಅವರಿಂದ ಜಯ್ ಶಾ ಅಧಿಕಾರ ವಹಿಸಿಕೊಳ್ಳಲಿದ್ದು, 32 ವರ್ಷದ ಜಯ್ ಶಾ ಅವರು, ಇದುವರೆಗೂ ACC ಅಧ್ಯಕ್ಷರಾಗಿ ನೇಮಕಗೊಂಡವರಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ ಎಂದು BCCI ವರದಿ ಮಾಡಿದೆ.

ಈ ಕುರಿತು ಮಾತನಾಡಿದ ಜಯ್ ಶಾ, “ಈ ಗೌರವವನ್ನು ನಾನು ಸ್ವೀಕರಿಸುತ್ತೇನೆ. ಜೊತೆಗೆ ಈ ಪ್ರತಿಷ್ಟಿತ ಸ್ಥಾನಕ್ಕೆ ನನ್ನನ್ನು ಅರ್ಹನೆಂದು ಪರಿಗಣಿಸಿದ್ದಕ್ಕಾಗಿ BCCI ನ ಎಲ್ಲಾ ಗೌರವಾನ್ವಿತ ಸಹೋದ್ಯೋಗಿಗಳಿಗೆ ಧನ್ಯವಾದಗಳು” ಎಂದು ಹೇಳಿದರು.

ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಪ್ರತಿಕ್ರಿಯಿಸಿ, “ACC ಯ ಹೊಸ ಅಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕಾಗಿ ಜಯ್ ಶಾ ಅವರನ್ನು ಅಭಿನಂದಿಸುತ್ತೇನೆ. ನಾವು ನಿಕಟವಾಗಿ ಕೆಲಸ ಮಾಡಿದ್ದು, ಕ್ರಿಕೆಟ್ ಅನ್ನು ಅಭಿವೃದ್ಧಿಪಡಿಸುವ ಕುರಿತು ಅವರ ಯೋಜನೆಗಳು ಮತ್ತು ದೂರ ದೃಷ್ಟಿಯ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ. ಚಂಡೀಗಢ, ಉತ್ತರಾಖಂಡ ಮತ್ತು ಈಶಾನ್ಯ ರಾಜ್ಯಗಳಲ್ಲಿ ಕ್ರಿಕೆಟಿಂಗ್ ಮೂಲಸೌಕರ್ಯಗಳನ್ನು ಸ್ಥಾಪಿಸುವಲ್ಲಿ ಅವರ ಉತ್ಸಾಹವನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ. ಹಾಗಾಗಿ ಈ ಕ್ಷೇತ್ರದಲ್ಲಿಯೂ ಉತ್ತಮ ಕೆಲಸಗಳನ್ನು ಮಾಡುತ್ತಾರೆ ಎಂಬ ನಂಬಿಕೆಯಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...