Homeಕರ್ನಾಟಕಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ : ಸಿಎಂ...

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟನೆ ಹೊಡಿಸಿರುವ ಅವರು, ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದಿದ್ದಾರೆ.

ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎನ್ನುವುದು ನಮಗೆ ಸ್ಪಷ್ಟವಾಗಿ ಅರ್ಥವಾಗಿದೆ. ಈ ಅನ್ಯಾಯವನ್ನು ತಪ್ಪಿಸಲಿಕ್ಕಾಗಿಯೇ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಹಿಂದಿನ ಎರಡು ಕ್ಷೇತ್ರ ಮರುವಿಂಗಡಣೆಗೆ 1971ರ ಜನಗಣತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗಿತ್ತು. ಕಳೆದ 50 ವರ್ಷಗಳಲ್ಲಿ ದಕ್ಷಿಣದ ರಾಜ್ಯಗಳು ಪರಿಣಾಮಕಾರಿ ಕ್ರಮಗಳ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿರುವುದು ಮಾತ್ರವಲ್ಲ, ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿವೆ. ಇದೇ ವೇಳೆ ಉತ್ತರಪ್ರದೇಶ, ಬಿಹಾರ, ಮಧ್ಯ ಪ್ರದೇಶದಂತಹ ಉತ್ತರದ ರಾಜ್ಯಗಳು ಜನಸಂಖ್ಯೆಯ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ಮಾತ್ರವಲ್ಲ, ಅಭಿವೃದ್ದಿಯ ಹಾದಿಯಲ್ಲಿ ಇನ್ನೂ ಕುಂಟುತ್ತಾ ಸಾಗಿದೆ. ಇದರಿಂದಾಗಿ ಕ್ಷೇತ್ರ ಮರುವಿಂಗಡಣೆಯನ್ನು ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆಯ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆಯ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಒಂದೋ ಕಡಿಮೆಯಾಗಲಿದೆ. ಇಲ್ಲದೆ ಇದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಾರದು. ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳೇ ನಷ್ಟ ಅನುಭವಿಸಲಿದೆ ಎನ್ನುವುದು ಗೃಹಸಚಿವ ಶಾ ಅವರಿಗೆ ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕ್ಷೇತ್ರ ಮರುವಿಂಗಡಣೆಯ ಪರಿಣಾಮಗಳ ಬಗ್ಗೆ ಹಲವಾರು ಅಧ್ಯಯನಗಳು ನಡೆದಿವೆ. ಇವುಗಳ ಪ್ರಕಾರ ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಇದೇ ರೀತಿ ಆಂಧ್ರ ಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 34, ಕೇರಳದ ಸಂಖ್ಯೆ 20ರಿಂದ 12ಕ್ಕೆ, ತಮಿಳುನಾಡಿನ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ. ಇದೇ ವೇಳೆ ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80 ರಿಂದ 91, ಬಿಹಾರದ ಸಂಖ್ಯೆ 40 ರಿಂದ 50, ಮಧ್ಯಪ್ರದೇಶದ ಸಂಖ್ಯೆ 29ರಿಂದ 33ಕ್ಕೆ ಏರಿಕೆಯಾಗಲಿದೆ. ಇದನ್ನು ಅನ್ಯಾಯ ಎನ್ನದೆ ನ್ಯಾಯ ಎನ್ನಲು ಸಾಧ್ಯವೇ? ಎಂದು ಕೇಳಿದ್ದಾರೆ.

ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ. ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಬಾರದೆಂದರೆ ಒಂದೋ 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಜನಸಂಖ್ಯೆಯ ಮಾನದಂಡವನ್ನು ಕೈಬಿಟ್ಟು ಈಗಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಅನುಪಾತಕ್ಕನುಗುಣವಾಗಿ ಹೆಚ್ಚಿಸಬೇಕು. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಅತ್ಯುತ್ಸಾಹವನ್ನು ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಎಂದಿದ್ದಾರೆ.

ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸದೆ ಇದ್ದರೆ ರಾಜ್ಯಕ್ಕೆ ನರೇಂದ್ರ ಮೋದಿ ಅವರ ಆಶೀರ್ವಾದ ಇರುವುದಿಲ್ಲ ಎಂದು ವಿಧಾನಸಭಾ ಚುನಾವಣಾ ಪ್ರಚಾರದ ಕಾಲದಲ್ಲಿ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೀಡಿದ್ದ ಎಚ್ಚರಿಕೆ ನಮ್ಮ ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಒಂದೊಂದು ಕ್ರಮದಲ್ಲಿಯೂ ನಿಜವಾಗುತ್ತಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಮತ್ತು ಪ್ರಕೃತಿ ವಿಕೋಪ ಪರಿಹಾರದಲ್ಲಿ ಅನ್ಯಾಯ, ರಾಜ್ಯಕ್ಕೆ ಕಂಟಕವಾಗಿರುವ ಹೊಸ ಶಿಕ್ಷಣ ನೀತಿ ಮತ್ತು ಯುಜಿಸಿ ನಿಯಮಾವಳಿಗಳಿಗೆ ತಿದ್ದುಪಡಿಯೂ ಸೇರಿದಂತೆ ಕೇಂದ್ರ ಸರ್ಕಾರದ ಪ್ರತಿಯೊಂದು ಕ್ರಮವೂ ರಾಜ್ಯವನ್ನು ಶಿಕ್ಷಿಸುವ ದುರುದ್ದೇಶದಿಂದ ಕೂಡಿದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಎಲ್ಲ ಅನ್ಯಾಯದ ವಿರುದ್ಧ ರಾಷ್ಟ್ರಮಟ್ಟದಲ್ಲಿ ದನಿ ಎತ್ತದಂತೆ ಮಾಡಲು ಸಂಸತ್‌ನಲ್ಲಿ ದಕ್ಷಿಣದ ರಾಜ್ಯಗಳ ದನಿಯನ್ನು ಇನ್ನಷ್ಟು ಕ್ಷೀಣಗೊಳಿಸುವ ದುರುದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಈಗ ಕ್ಷೇತ್ರ ಮರುವಿಂಗಡಣೆಯ ಹೊಸ ಅಸ್ತ್ರವನ್ನು ಎತ್ತಿಕೊಂಡು ಹೊರಟಿದೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನೋಡಿಯೂ ರಾಜ್ಯದಿಂದ ಲೋಕಸಭೆಗೆ ಆರಿಸಿ ಹೋಗಿರುವ ಹದಿನೇಳು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸದಸ್ಯರು ಜೀತದಾಳುಗಳಂತೆ ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ನಡೆಸುತ್ತಾ ಬೀದಿ ಜಗಳದಲ್ಲಿ ಮಗ್ನರಾಗಿದ್ದಾರೆ.
ಇಂತಹ ಸಂದರ್ಭದಲ್ಲಿ ಜಾತಿ-ಧರ್ಮ ಪಕ್ಷ -ಪಂಥಗಳ ಭೇದವನ್ನು ಮರೆತು ಕನ್ನಡಿಗರೆಲ್ಲರೂ ಒಂದಾಗಿ ಒಂದೇ ದನಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ದನಿ ಎತ್ತಬೇಕಾಗಿದೆ. ಈ ಅನ್ಯಾಯದ ವಿರುದ್ದ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಬುಧವಾರ (ಫೆ.26) ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡನೆ ಮಾಡಿದರೆ ರಾಜ್ಯವು 8 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಎಂಬ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹೇಳಿಕೆಯನ್ನು ತಳ್ಳಿ ಹಾಕಿದ್ದಾರೆ. ಕ್ಷೇತ್ರ ಮರು ವಿಂಗಡಣೆಯಿಂದ ತಮಿಳುನಾಡು ಒಂದೇ ಒಂದು ಸಂಸದೀಯ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕ್ಷೇತ್ರಗಳ ಮರುವಿಂಗಡನೆ ನಂತರವೂ, ದಕ್ಷಿಣದ ಯಾವುದೇ ರಾಜ್ಯಗಳ ಲೋಕಸಭಾ ಸ್ಥಾನಗಳು ಕಡಿಮೆಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ” ಎಂದಿದ್ದಾರೆ.

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...