Homeಮುಖಪುಟ’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

’ಅಮಿತಾಬ್, ಅಕ್ಷಯ್‌ಗೆ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಧೈರ್ಯವಿಲ್ಲವೇ?’

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ಒಂದು ಕಾಲದಲ್ಲಿ ಟೀಕಿಸಿದ್ದ ಸೆಲೆಬ್ರಿಟಿಗಳು, ಹಿಂದಿಗಿಂತಲೂ ಈಗ ದರ ಹೆಚ್ಚಾಗಿದ್ದರೂ ಮೌನ ವಹಿಸಿರುವವರ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಗುರುವಾರ (ಫೆ.18) ಕಠಿಣ ನಿಲುವು ತೆಗೆದುಕೊಂಡಿದೆ.

ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ನಟರನ್ನು ಒಳಗೊಂಡ ಚಲನಚಿತ್ರಗಳ ಪ್ರದರ್ಶನ ಮತ್ತು ಚಲನಚಿತ್ರಗಳ ಚಿತ್ರೀಕರಣವನ್ನು ಮಹಾರಾಷ್ಟ್ರದಲ್ಲಿ ನಿಲ್ಲಿಸುವುದಾಗಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಎಚ್ಚರಿಕೆ ನೀಡಿದ್ದಾರೆ.

“ಮನಮೋಹನ್ ಸಿಂಗ್ ಅವಧಿಯಲ್ಲಿ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಅವರಂತಹ ಜನರು ಇಂಧನ ಬೆಲೆಗಳ ಬಗ್ಗೆ ಟ್ವೀಟ್ ಮಾಡುತ್ತಿದ್ದರು. ಈಗ ಹೆಚ್ಚುತ್ತಿರುವ ಇಂಧನ ಬೆಲೆಗಳು ಸಾಮಾನ್ಯ ಜನರನ್ನು ಹಿಂಸಿಸುತ್ತಿವೆ. ಆದರೆ ಇಂದು ಈ ನಟರೆಲ್ಲಾ ಮೌನವಾಗಿದ್ದಾರೆ. “ಸರ್ವಾಧಿಕಾರಿ ಮೋದಿ ಸರ್ಕಾರ”ದ ವಿರುದ್ಧ ಮಾತನಾಡಲು ಅವರಿಗೆ ಧೈರ್ಯವಿಲ್ಲವೇ?” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸದ್ಯ ಮುಂಬೈಯಲ್ಲಿ ಪೆಟ್ರೋಲ್‌ಗೆ ಲೀಟರ್‌ಗೆ. 96.32 ರೂಪಾಯಿ ಮತ್ತು ಡೀಸೆಲ್ 87.32 ರೂಪಾಯಿಗೆ ಏರಿದೆ.

“ಮಹಾರಾಷ್ಟ್ರದಲ್ಲಿ, ಅಮಿತಾಬ್ ಬಚ್ಚನ್ ಅಥವಾ ಅಕ್ಷಯ್ ಕುಮಾರ್ ಒಳಗೊಂಡ ಚಿತ್ರಗಳ ಚಿತ್ರೀಕರಣಕ್ಕೆ ನಾವು ಅವಕಾಶ ನೀಡುವುದಿಲ್ಲ. ಒಂದೋ ನೀವು ನರೇಂದ್ರ ಮೋದಿ ಸರ್ಕಾರದ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮಾತನಾಡಿ ಇಲ್ಲವಾದರೇ ನಿಮ್ಮ ಚಲನಚಿತ್ರಗಳ ಚಿತ್ರೀಕರಣವನ್ನು ಅನ್ನು ನಾವು ನಿಲ್ಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ಪಕ್ಷ ಹೊರಡಿಸಿರುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ನಟರಿಗೆ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಆತ್ಮವು ಸರ್ವಾಧಿಕಾರವಾಗಿದ್ದು, ಅದು ಪ್ರಜಾಪ್ರಭುತ್ವದ ಮುಖವಾಡವನ್ನು ಧರಿಸಿತ್ತು. ಕಾಂಗ್ರೆಸ್ ಕಚೇರಿ ಅಕ್ಬರ್ ರಸ್ತೆಯಲ್ಲಿರುವುದರಿಂದ, ಅವರು ಅಕ್ಬರ್‌ನ ಹಾದಿಯಲ್ಲಿ ಮಾತ್ರ ನಡೆಯುತ್ತಾರೆ. ಅಮಿತಾಬ್ ಬಚ್ಚನ್ ಅವರ ಬೆದರಿಕೆಗಳ ಬಗ್ಗೆ ಚಿಂತಿಸಬೇಕಾಗಿಲ್ಲ. ಶೋಲೆ ಚಿತ್ರದಲ್ಲಿ ಗಬ್ಬರ್ ಸಿಂಗ್ ಅವರಿಂದ ಇದೇ ರೀತಿಯ ಬೆದರಿಕೆಗಳನ್ನು ಅವರು ಎದುರಿಸಿದ್ದರು” ಎಂದು ಮುಂಗಂತಿವಾರ್ ಹೇಳಿದ್ದಾರೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...