Homeಮುಖಪುಟ‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

‘ಅಮ್ಮಚ್ಚಿ’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ತಪ್ಪೇನು?: ವೈರಲ್ ಚಿತ್ರದ ವಾಸ್ತವವಿದು!

- Advertisement -
- Advertisement -

ಮೃತದೇಹವೊಂದರ ಮುಂದೆ ಕುಟುಂಬಸ್ಥರು ನಗುತ್ತಾ ಗ್ರೂಪ್ ಫೋಟೊ ಕ್ಲಿಕ್ಕಿಸಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ ವೈರಲ್ ಆಗಿದೆ. ಮರಣ ಹೊಂದಿರುವ ಮನೆಯಲ್ಲಿ ಯಾವುದೆ ದುಃಖವಿಲ್ಲದೆ ಹೀಗೆ ನಗುತ್ತಾ ಫೋಟೊ ಕ್ಲಿಕ್ಕಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಟೀಕಿಸಿದರೆ, ಇನ್ನು ಕೆಲವರು ಮೃತಪಟ್ಟವರನ್ನು ನಗುನಗುತ್ತಲೇ ಕಳುಹಿಸಿಕೊಡುವುದು ಕೂಡಾ ಸರಿಯಾದ ನಡೆ ಎಂದು ಕುಟುಂಬವನ್ನು ಬೆಂಬಲಿಸಿದ್ದಾರೆ.

ಕುಟುಂಬವೊಂದರ ಖಾಸಗಿ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಿರೂಪಣೆಯೊಂದಿಗೆ ಹರಿದಾಡಿದ್ದಕ್ಕೆ, ಕುಟುಂಬದ ಸದಸ್ಯರು ಬೇಸರ ವ್ಯಕ್ತಪಡಿಸಿ ಸಮಜಾಯಿಷಿ ನೀಡಿದ್ದಾರೆ. ನಮ್ಮ ‘ಅಮ್ಮಚ್ಚಿ(ಅಮ್ಮ)’ಯನ್ನು ಸಂತೋಷದಿಂದ ಕಳುಹಿಸಿಕೊಟ್ಟಿದ್ದೇವೆ, ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಏನು?

ಕೇರಳದ ಕೊಟ್ಟಾಯಂ ಜಿಲ್ಲೆಯ ಮಲ್ಲಪಲ್ಲಿ ಮೂಲದ ದಿವಂಗತ ರೆವರೆಂಡ್ ಪಿ.ಒ. ವರ್ಗೀಸ್ ಅವರ ಪತ್ನಿ, 95 ವರ್ಷದ ಮರಿಯಮ್ಮ ಅವರು ಇತ್ತೀಚೆಗೆ ಮೃತಪಟ್ಟಿದ್ದರು. ವೈರಲ್ ಚಿತ್ರದಲ್ಲಿ ಕಾಣುತ್ತಿರುವ ವ್ಯಕ್ತಿಗಳು ಅವರ ಕುಟುಂಬದ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

“ಮರಿಯಮ್ಮ ನನ್ನ ತಂದೆಯ ಅಣ್ಣನ ಹೆಂಡತಿ. ವ್ಯಕ್ತಿಯೊಬ್ಬರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರೆ ಎಂಬುವುದಾಗಿದೆ ಕ್ರಿಶ್ಚಿಯನ್ನರ ನಂಬಿಕೆ. ಮರಿಯಮ್ಮ ಎಂಬ ನಮ್ಮ ‘ಅಮ್ಮಚ್ಚಿ’ ಬದುಕಿದ್ದಾಗ ಉತ್ತಮ ರೀತಿಯ ಜೀವನ ನಡೆಸಿದ್ದಾರೆ. ಅಮ್ಮಚ್ಚಿ ಸ್ವರ್ಗಕ್ಕೆ ಹೋದ ಖುಷಿಯಾಗಿದೆ ಅಲ್ಲಿ ಎದ್ದು ಕಾಣುತ್ತಿದ್ದದ್ದು” ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯ, ವೈದ್ಯರಾದ ಉಮ್ಮನ್ ಪಿ. ನೈನಾನ್‌ ಹೇಳಿದ್ದಾರೆ.

“ಹಿಂದಿನ ದಿನ ನಾಲ್ಕು ಗಂಟೆಗೆ ಶವವನ್ನು ಮನೆಗೆ ತರಲಾಯಿತು. ಮರುದಿನ ಮುಂಜಾನೆ 3 ಗಂಟೆ ಸುಮಾರಿಗೆ ಈ ಫೋಟೋ ತೆಗೆಯಲಾಗಿದೆ” ಎಂದು ಅವರು ಹೇಳಿದ್ದಾರೆ.

“ಅಲ್ಲಿಯವರೆಗೂ ಅಮ್ಮಚ್ಚಿಯ ಜೊತೆ ಮನೆಯವರೆಲ್ಲ ಒಂದೆಡೆ ಸೇರಿ, ಅವರಿಗಾಗಿ ಪ್ರಾರ್ಥಿಸಿದರು. ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬದ ಇತರ ಸದಸ್ಯರು ಅಮ್ಮಚ್ಚಿ ಬದುಕಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಎಲ್ಲರೂ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆಯಲು ಹೊರಟಾಗ ತೆಗೆದ ಫೋಟೋ ಇದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ನಮ್ಮ ಕುಟುಂಬದ ಒಳಗೆ ಸೀಮಿತವಾಗಬೇಕಿದ್ದ ಈ ಖಾಸಗಿ ಚಿತ್ರ ಹೇಗೋ ಹೊರಬಿದ್ದಿದೆ. ನಂತರ ಅದು ವೈರಲ್ ಆಗಿದೆ. ಕೆಲವರು ಅದನ್ನು ಕೆಟ್ಟದಾಗಿ ನಿರೂಪಿಸಿ ಹರಡುತ್ತಿದ್ದಾರೆ. ಅಮ್ಮಚ್ಚಿಯ ಮರಣಾ ನಂತರದ ಜೀವನ ಆಶಾದಾಯಕವಾಗಿ ಇರುತ್ತದೆ ಎಂದು ನಾವು ನಂಬುತ್ತೇವೆ. ಈ ಕಾರಣಕ್ಕಾಗಿಯೆ ನಾವು ಅವರನ್ನು ಖುಷಿಯಿಂದ ಕಳುಹಿಸಿಕೊಟ್ಟಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಮ್ಮಚ್ಚಿ ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದರು. ಅವರಿಗೆ 9 ಮಕ್ಕಳು. ಅವರಲ್ಲಿ ಒಬ್ಬರು ಈ ಹಿಂದೆಯೆ ತೀರಿಕೊಂಡಿದ್ದಾರೆ. ಉಳಿದ ಎಲ್ಲರೂ ಅವರನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅವರನ್ನು ಉತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಇದರಲ್ಲಿ ಅಪಹಾಸ್ಯ ಮಾಡಲು ಏನಿದೆ? ಚಿತ್ರವನ್ನು ಬಳಸಿ ಕೆಟ್ಟದಾಗಿ ಪ್ರಚಾರ ಮಾಡುವವರ ಮನಸ್ಥಿತಿ ಇದರಲ್ಲಿ ಬಯಲಾಗಿದೆ. ಸತ್ತಾಗ ಮಾತ್ರ ಅಳಬೇಕು ಎನ್ನುವವರಿಗೆ ಏನು ಹೇಳಬೇಕು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

“ಕುಟುಂಬದ ಸದಸ್ಯನಾಗಿ ಒಂದು ಅಪೇಕ್ಷೆಯೇನೆಂದರೆ, ದಯವಿಟ್ಟು ಈ ಚಿತ್ರವನ್ನು ಮತ್ತಷ್ಟು ಹರಡಬೇಡಿ. ಇನ್ನೊಬ್ಬರನ್ನು ಗೇಲಿ ಮಾಡುವುದರಿಂದ ಅವರಿಗೆ ಸಿಗುವ ಖುಷಿಯಾದರೂ ಏನು? ನಮ್ಮನ್ನು ಅನೇಕರು ಬೆಂಬಲಿಸಿದ್ದಾರೆ ಎಂದು ತಿಳಿದು ತುಸು ನಿರಾಳವಾಗಿದ್ದೇವೆ” ಎಂದು ಹೇಳಿದ್ದಾರೆ.

ಕುಟುಂಬಸ್ಥರನ್ನು ಗೇಲಿ ಮಾಡುವವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪಾಠವನ್ನು ಮಾಡಿದ್ದಾರೆ. ಮೃತಪಟ್ಟವರನ್ನು ಖುಷಿಯಿಂದ ಡ್ಯಾನ್ಸ್‌ ಮಾಡುತ್ತಾ ಕಳುಹಿಸಿಕೊಡುವ ಸಂಸ್ಕೃತಿ ತಮಿಳುನಾಡು, ಸೇರಿದಂತೆ ಕರ್ನಾಟಕದಲ್ಲಿ ಈ ಹಿಂದಿನಿಂದಲೂ ಇವೆ ಎಂದು ನೆನಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...