Homeಮುಖಪುಟರಸಗೊಬ್ಬರ ಕಾರ್ಖಾನೆಯಿಂದ ಅಮೋನಿಯಾ ಅನಿಲ ಸೋರಿಕೆ: 25ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!

ರಸಗೊಬ್ಬರ ಕಾರ್ಖಾನೆಯಿಂದ ಅಮೋನಿಯಾ ಅನಿಲ ಸೋರಿಕೆ: 25ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು!

- Advertisement -
- Advertisement -

ಉತ್ತರ ಚೆನ್ನೈನ ಎನ್ನೋರ್‌ನಲ್ಲಿರುವ ರಸಗೊಬ್ಬರ ತಯಾರಿಕಾ ಘಟಕದಿಂದ ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಸುಮಾರು 25ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ 26ರ ರಾತ್ರಿ ಸುಮಾರು 11.45ಕ್ಕೆ ಈ ಘಟನೆ ನಡೆದಿದ್ದು, ಕಾರ್ಖಾನೆಯಿಂದ ಅನಿಲ ಸೋರಿಕೆಯಾದ ನಂತರ, ಕೆಮಿಕಲ್ ವಾಸನೆಯು ನೆರೆಹೊರೆಯಲ್ಲಿ ಹರಡಿತ್ತು ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ರಸಗೊಬ್ಬರ ಉತ್ಪಾದನಾ ಘಟಕದ ಸುತ್ತಮುತ್ತಲಿನ ಪೆರಿಯ ಕುಪ್ಪಂನಂತಹ ವಸತಿ ಪ್ರದೇಶದ ಸುತ್ತಮುತ್ತಲಿನ 25 ಕ್ಕೂ ಹೆಚ್ಚು ಜನರು ಅಮಿಲ ಸೋರಿಕೆಯಿಂದ ಅಸ್ವಸ್ಥರಾಗಿದ್ದು, ಕೆಲವರು ವಾಕರಿಕೆ ಮಾಡಿಕೊಂಡು ಮೂರ್ಛೆ ತಪ್ಪಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅನಿಲ ಸೋರಿಕೆ ಸುದ್ದಿ ಹರಡಿದ ತಕ್ಷಣ, ಜನರು ಗಾಬರಿಯಿಂದ ತಮ್ಮ ಮನೆಗಳಿಂದ ಹೊರಬಂದು ರಸ್ತೆಗಳಲ್ಲಿ ಜಮಾಯಿಸಿದರು. ಸಹಾಯಕ್ಕಾಗಿ ಅಧಿಕಾರಿಗಳ ಮೊರೆ ಹೋದರು.

ಕೂಡಲೇ ಎಚ್ಚೆತ್ತ ರಸಗೊಬ್ಬರ ಘಟಕದ ಸಿಬ್ಬಂದಿಗಳು ತಾಂತ್ರಿಕ ದೋಷವನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕಾರ್ಖಾನೆಯ ತಜ್ಞರು ಸಮಸ್ಯೆ ಪರಿಹರಿಸುತ್ತಿದ್ದಾರೆ ಎಂದು ಜನರಿಗೆ ಮನವರಿಕೆ ಮಾಡಿದ ಪೊಲೀಸರು, ಸ್ಥಳೀಯ ನಿವಾಸಿಗಳನ್ನು ಸಮಾಧಾನಪಡಿಸಿದರು.

ಸ್ಥಳೀಯರಿಂದ ಪ್ರತಿಭಟನೆ:

ಎನ್ನೋರ್‌ ರಸಗೊಬ್ಬರ ಕಾರ್ಖಾನೆ ಪೈಪ್‌ನಲ್ಲಿ ಅಮೋನಿಯಾ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಜನರು ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್‌ನ ಉಪ-ಸಮುದ್ರದ ಪೈಪ್‌ನಿಂದ ಸೋರಿಕೆಯಾಗಿರುವ ಅನಿಲದ ವಾಸನೆಯು ಗಾಳಿಯಲ್ಲಿ ಸೇರಿಕೊಂಡಿದ್ದು, ಸಮುದ್ರ ತೀರದ ಬಳಿ ವಾಸಿಸುವ ನಿವಾಸಿಗಳು ಅಸ್ವಸ್ಥರಾಗಿ, ಉಸಿರಾಟದ ತೊಂದರೆ ಅನುಭವಿಸಿದರು.

‘ಭಯಪಡುವ ಅಗತ್ಯವಿಲ್ಲ. ಸೋರಿಕೆಯನ್ನು ಸ್ಥಿರಗೊಳಿಸಲಾಗಿದೆ. ಇನ್ನು ಎನ್ನೂರಿನಲ್ಲಿ ಗ್ಯಾಸ್ (ಅಮೋನಿಯಾ) ಸೋರಿಕೆಯಾಗುವುದಿಲ್ಲ. ಜನರು ಸಮಾಧಾನಗೊಂಡು ಮನೆಗೆ ಮರಳಿದ್ದಾರೆ. ವೈದ್ಯಕೀಯ ಮತ್ತು ಪೊಲೀಸ್ ತಂಡಗಳು ಸ್ಥಳದಲ್ಲಿ ಹಾಜರಿವೆ’ ಎಂದು ಆವಡಿ ಪೊಲೀಸ್ ಕಮಿಷನರ್ ವಿಜಯಕುಮಾರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ; ತಮಿಳುನಾಡು: ಪೆರಿಯಾರ್ ವಿಶ್ವವಿದ್ಯಾನಿಲಯದ ಉಪಕುಲಪತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...