Homeಮುಖಪುಟಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ಮಾನವಹಕ್ಕುಗಳ ರಕ್ಷಕ ಅಮ್ನೆಸ್ಟಿ ಸಂಸ್ಥೆಯ ಹಣ ಮುಟ್ಟುಗೋಲು: ಭಾರತ ಸರ್ಕಾರ ಕಿರುಕುಳ ನೀಡುತ್ತಿದೆ ಎಂದಿದ್ದ ಸಂಸ್ಥೆ

ದೆಹಲಿ ಗಲಭೆ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಭಾರತ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿ, ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಕೋರಿದ್ದೆವು- ಅಮ್ನೆಸ್ಟಿ

- Advertisement -
- Advertisement -

ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಜಾಗತಿಕ ಮಾನವ ಹಕ್ಕುಗಳ ರಕ್ಷಕ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಸುಮಾರು 17.66 ಕೋಟಿ ರೂ.ಗಳ ಬ್ಯಾಂಕ್ ಠೇವಣೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ಹೇಳಿದೆ.

ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಎಐಐಪಿಎಲ್)ಪಿಎಂಎಲ್‌ಎ ಹಾಗೂ ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಟ್ರಸ್ಟ್ (ಐಎಐಟಿ)ನ ಬ್ಯಾಂಕ್ ಖಾತೆಯನ್ನು ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ) ಅಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಹಿಂದೆ ಖ್ಯಾತ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಭಾರತದಲ್ಲಿನ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಘೋಷಿಸಿತ್ತು. ತನ್ನ ವರದಿಗಳನ್ನು ಸಹಿಸದ ಸರ್ಕಾರ ನಿರಂತರವಾಗಿ ದುರುದ್ದೇಶಪೂರಿತ ದಾಳಿ ನಡೆಸುತ್ತಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅಮ್ನೆಸ್ಟಿ ಆರೋಪಿಸಿತ್ತು.

ಇದನ್ನೂ ಓದಿ: ಸರ್ಕಾರದ ದುರುದ್ದೇಶಪೂರಿತ ದಾಳಿ ಆರೋಪ: ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಿದೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್

ಇತ್ತೀಚೆಗೆ ನಡೆದ ದೆಹಲಿ ಗಲಭೆ ಮತ್ತು ಕಾಶ್ಮೀರದ ಸ್ವಾಯುತ್ತ ಸ್ಥಾನಮಾನ ರದ್ದುಗೊಳಿಸಿದ ನಂತರ ಅಮ್ನೆಸ್ಟಿ ಈ ವಿಷಯಗಳಲ್ಲಿ ಗಂಭೀರ ಮಾನವ ಹಕ್ಕು ಉಲ್ಲಂಘನೆಯಾಗಿದೆ ಎಂದು ತನ್ನ ವರದಿಗಳನ್ನ ಬಿಡುಗಡೆಗೊಳಿಸಿತ್ತು. ಇದರ ಪರಿಣಾಮವಾಗಿ ಸರ್ಕಾರ ತನ್ನ ಮೇಲೆ ಮುಗಿಬಿದ್ದಿದೆ ಎಂದು ಅಮ್ನೆಸ್ಟಿ ಆರೋಪಿಸಿತ್ತು.

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ)ಯ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಕಾನೂನುಬಾಹಿರವಾಗಿ ವಿದೇಶಿ ದೇಣಿಗೆಗಳನ್ನು ಪಡೆಯಲಾಗಿದೆ ಎಂಬ ಆರೋಪದಡಿಯಲ್ಲಿ ಕೆಲವು ವರ್ಷಗಳಿಂದ ಭಾರತದ ಹಲವು ತನಿಖಾ ಸಂಸ್ಥೆಗಳು ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಅನ್ನು ತನಿಖೆಗೊಳಪಡಿಸಿದ್ದವು.

ಇದನ್ನೂ ಓದಿ: ಭಾರತ ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ದೇಶ: ಸಮೀಕ್ಷಾ ವರದಿ

ಆದರೆ, ಸಂಸ್ಥೆಯು ತನ್ನ ಪತ್ರಿಕಾ ಹೇಳಿಕೆಯಲ್ಲಿ, “ಇದು ಆಧಾರ ರಹಿತ ಮತ್ತು ದುರುದ್ದೇಶ ಪ್ರೇರಿತ ಆರೋಪ. ಭಾರತ ಸರ್ಕಾರವು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಡೆಹಿಡಿದಿದೆ. ಇದು ಸಂಸ್ಥೆಯ ಎಲ್ಲಾ ಕೆಲಸಗಳ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿನ ಸಿಬ್ಬಂದಿಯನ್ನು ಕೆಲಸದಿಂದ ಕೈಬಿಟ್ಟು, ತನ್ನ ಎಲ್ಲಾ ಸಂಶೋಧನಾ ಕಾರ್ಯಗಳನ್ನು ನಿಲ್ಲಿಸುವಂತೆ ಒತ್ತಾಯಿಸಲಾಗಿದೆ. ಆದರೆ ನಾವು ಭಾರತೀಯ ಮತ್ತು ಅಂತರಾಷ್ಟ್ರೀಯ ಎಲ್ಲಾ ಕಾನೂನುಗಳನ್ನು ಪಾಲಿಸಿದ್ದೇವೆ” ಎಂದು ಹೇಳಿತ್ತು.

“ಕಳೆದ 2 ವರ್ಷಗಳಿಂದ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾದ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿ ಮತ್ತು ಇತ್ತೀಚೆಗೆ ಬ್ಯಾಂಕ್ ಖಾತೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವುದು ಆಕಸ್ಮಿಕವೇನಲ್ಲ. ಇತ್ತೀಚೆಗೆ ನಡೆದ ದೆಹಲಿ ಗಲಭೆ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಭಾರತ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನಿಸಿ, ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಕೋರಿದ್ದಕ್ಕಾಗಿ, ಜಾರಿ ನಿರ್ದೇಶನಾಲಯ ಸೇರಿದಂತೆ ಇತರೆ ಸರ್ಕಾರಿ ಸಂಸ್ಥೆಗಳು ನಮಗೆ ಕಿರುಕುಳ ನೀಡುತ್ತಿವೆ” ಎಂದು ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅವಿನಾಶ್ ಹೇಳಿದ್ದರು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...