Homeಮುಖಪುಟಅಲಿಗಢ ಮುಸ್ಲಿಂ ವಿವಿ 'ಅಲ್ಪಸಂಖ್ಯಾತ ಸ್ಥಾನಮಾನ' ಯಾರು ಸ್ಥಾಪಿಸಿದರು ಎಂಬುದರ ಮೇಲೆ ನಿರ್ಧರಿಸಲಾಗುತ್ತದೆ : ಸುಪ್ರೀಂ...

ಅಲಿಗಢ ಮುಸ್ಲಿಂ ವಿವಿ ‘ಅಲ್ಪಸಂಖ್ಯಾತ ಸ್ಥಾನಮಾನ’ ಯಾರು ಸ್ಥಾಪಿಸಿದರು ಎಂಬುದರ ಮೇಲೆ ನಿರ್ಧರಿಸಲಾಗುತ್ತದೆ : ಸುಪ್ರೀಂ ಕೋರ್ಟ್

- Advertisement -
- Advertisement -

ಅಲಿಗಢ ಮುಸ್ಲಿಂ ವಿಶ್ವ ವಿದ್ಯಾನಿಲಯ (ಎಎಂಯು)ದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠ ಇಂದು (ನ.8) 4:3 ಬಹುಮತದ ತೀರ್ಪು ನೀಡಿದ್ದು, 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾದ ತೀರ್ಪನ್ನು ರದ್ದುಗೊಳಿಸಿದೆ.

ಎಎಂಯು ‘ಅಲ್ಪಸಂಖ್ಯಾತ ಸ್ಥಾನಮಾನ’ ಅದನ್ನು ಯಾರು ಸ್ಥಾಪಿಸಿದರು ಎಂಬುವುದರ ಮೇಲೆ ನಿರ್ಧರಿಸಲಾಗುತ್ತದೆ ಎಂದು ಹೇಳಿದೆ.

ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಿದವರು ಯಾರು ಮತ್ತು ಅದರ ಹಿಂದಿನ ಕರ್ತೃ ಯಾರು ಎಂಬುವುದನ್ನು ನ್ಯಾಯಾಲಯವು ಪರಿಶೀಲಿಸಬೇಕು. ಪರಿಶೀಲನೆಯಲ್ಲಿ ಅಲ್ಪಸಂಖ್ಯಾತ ಸಮುದಾಯ ಸ್ಥಾಪಿಸಿರುವುದು ಬಯಲಾದರೆ, ಸಂಸ್ಥೆಯು 30ನೇ ವಿಧಿಯ ಪ್ರಕಾರ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಎಎಂಯು ಕಾನೂನಿನಿಂದ ರಚಿಸಲ್ಪಟ್ಟಿರುವುದರಿಂದ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಲು ಸಾಧ್ಯವಿಲ್ಲ ಎಂದು 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಅದನ್ನು ಈಗ ತಳ್ಳಿಹಾಕಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪರವಾಗಿ ಬಹುಮತದ ತೀರ್ಪು ಬರೆದಿರುವ ಸಿಜೆಐ ಚಂದ್ರಚೂಡ್ ಅವರು, ಅಝೀಝ್ ಬಾಷಾ vsಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪನ್ನು ತಳ್ಳಿ ಹಾಕಿದೆ. ಆದರೆ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತಾ ಮತ್ತು ಎಸ್‌ಸಿ ಶರ್ಮಾ ಅವರು ಭಿನ್ನಾ ತೀರ್ಪುಗಳನ್ನು ಬರೆದಿದ್ದಾರೆ.

ಎಎಂಯು ಅಲ್ಪಸಂಖ್ಯಾತ ಸಂಸ್ಥೆಯೇ? ಎಂಬ ವಿಷಯವನ್ನು ನಿರ್ಧರಿಸಲು ಸಾಮಾನ್ಯ ಪೀಠಕ್ಕೆ ಅವಕಾಶ ನೀಡಲಾಗಿದೆ. ಈ ತೀರ್ಪಿನ ಪ್ರಕಾರ, ಎಂಎಂಯು ಅಲ್ಪಸಂಖ್ಯಾತ ಸ್ಥಾನಮಾನದ ಮೌಲ್ಯಮಾಪನ ಮಾಡಲು ಮತ್ತು 2006ರ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಮರುಮೌಲ್ಯಮಾಪನ ಮಾಡಲು ಮುಖ್ಯ ನ್ಯಾಯಾಧೀಶರು ಹೊಸ ಪೀಠವನ್ನು ರಚಿಸಲಿದ್ದಾರೆ.

ಎಎಂಯು ಕೇಂದ್ರೀಯ ಕಾನೂನು ಮೂಲಕ ಸ್ಥಾಪಿತಗೊಂಡಿರುವುದರಿಂದ, ಅದನ್ನು ಅಲ್ಪಸಂಖ್ಯಾತರ ಸಂಸ್ಥೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು 1967ರಲ್ಲಿ ತೀರ್ಪು ನೀಡಿತ್ತು. 1981ರಲ್ಲಿ ಸಾಂವಿಧಾನಿಕ ತಿದ್ದುಪಡಿ ಮೂಲಕ ಅಂದಿನ ಕೇಂದ್ರ ಸರ್ಕಾರ ಎಎಂಯುಗೆ ‘ಅಲ್ಪಸಂಖ್ಯಾತ’ ಸ್ಥಾನಮಾನ ನೀಡಿತ್ತು. ಅಲಹಾಬಾದ್ ಹೈಕೋರ್ಟ್ ಈ ಸ್ಥಾನಮಾನವನ್ನು ರದ್ದುಪಡಿಸಿ 2006ರಲ್ಲಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಯುಪಿಎ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಇದನ್ನೂ ಓದಿ : ರಾಜಿ ಮಾಡಿಕೊಂಡ ಕಾರಣಕ್ಕೆ ಲೈಂಗಿಕ ಕಿರುಕುಳ ಪ್ರಕರಣ ರದ್ದಾಗದು : ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...