Homeಮುಖಪುಟತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ಮಾಡದಂತೆ ಅಮುಲ್‌ಗೆ ನಿರ್ದೇಶನ ನೀಡಬೇಕು: ಅಮಿತ್ ಶಾಗೆ ಸ್ಟಾಲಿನ್ ಪತ್ರ

- Advertisement -
- Advertisement -

ಗುಜರಾತ್ ಮೂಲದ ಡೈರಿ ಅಮುಲ್‌ಗೆ ತಮಿಳುನಾಡಿನಲ್ಲಿ ರಾಜ್ಯದಲ್ಲಿ ಹಾಲು ಸಂಗ್ರಹಣೆ ಮಾಡದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒತ್ತಾಯಿಸಿ ಪತ್ರ ಬರೆದಿದ್ದಾರೆ.

ಕರ್ನಾಟಕ ರಾಜ್ಯ ಚುನಾವಣಾ ಪೂರ್ವದಲ್ಲಿ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು, ಹಾಲು ಸಹಕಾರ ಸಂಘಗಳ ಸಹಯೋಗದ ಬಗ್ಗೆ ಮಾತನಾಡಿದ್ದರು. ಅದಕ್ಕೆ ಕಾಂಗ್ರೆಸ್‌ನವರು ಕರ್ನಾಟಕದ ಹಾಲು ಸಹಕಾರಿ ಸಂಸ್ಥೆಯಾದ ನಂದಿನಿಯನ್ನು “ಕತ್ತು ಹಿಸುಕಲು” ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರು. ಇದಾದ ಬಳಿಕ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.

ಈ ಬಗ್ಗೆ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ”ತಮಿಳುನಾಡು ಹಾಲಿನ ಶೆಡ್ ಪ್ರದೇಶದಲ್ಲಿ ಕೈರಾ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಅಮುಲ್) ಹಾಲು ಸಂಗ್ರಹಣೆಯಿಂದ ಸಮಸ್ಯೆಗಳ ಉದ್ಭವಿಸುತ್ತವೆ” ಬಗ್ಗೆ ತಿಳಿಸಿದ್ದಾರೆ.

”ಇತ್ತೀಚಿಗೆ ಅಮುಲ್ ತನ್ನ ಬಹು-ರಾಜ್ಯ ಸಹಕಾರಿ ಪರವಾನಗಿಯನ್ನು ಕೃಷ್ಣಗಿರಿ ಜಿಲ್ಲೆಯಲ್ಲಿ ಶೀತಲೀಕರಣ ಕೇಂದ್ರಗಳು ಹಾಗೂ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಬಳಸಿಕೊಂಡಿರುವುದು ರಾಜ್ಯ ಸರಕಾರದ ಗಮನಕ್ಕೆ ಬಂದಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಅಲ್ಲದೆ, ”ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್, ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಎಫ್‌ಪಿಒಗಳು ಹಾಗೂ ಸ್ವಸಹಾಯ ಸಂಘಗಳ ಮೂಲಕ ಹಾಲನ್ನು ಸಂಗ್ರಹಿಸಲು ಅಮುಲ್ ಯೋಜಿಸಿದೆ” ಎಂದು ನಮಗೆ ತಿಳಿದಿದೆ ಎಂದಿದ್ದಾರೆ.

”ಭಾರತದಲ್ಲಿ ಸಹಕಾರಿ ಸಂಸ್ಥೆಗಳು ಪರಸ್ಪರರ ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸದೆ ಅಭಿವೃದ್ಧಿ ಹೊಂದಲು ಅವಕಾಶ ನೀಡುವುದು ರೂಢಿಯಾಗಿದೆ. ಈ ರೀತಿ ಹಾಲು ಸಂಗ್ರಹಣೆಯು ‘ಆಪರೇಷನ್ ವೈಟ್ ಫಡ್’ನ ಮನೋಭಾವಕ್ಕೆ ವಿರುದ್ಧವಾಗಿದೆ ಹಾಗೂ ಚಾಲ್ತಿಯಲ್ಲಿರುವ ಹಾಲಿನ ಕೊರತೆಯ ಸನ್ನಿವೇಶದಲ್ಲಿ ಗ್ರಾಹಕರಿಗೆ ಸಮಸ್ಯೆಗಳನ್ನು ಉಲ್ಬಣಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

”ಅಮುಲ್‌ನ ಈ ಕಾರ್ಯವು ಆವಿನ್‌ನ (ಟಿಎನ್ ಕೋ- ಆಪರೇಟಿವ್ ಹಾಲು ಉತ್ಪಾದಕರ ಫೆಡರೇಶನ್) ಹಾಲಿನ ಶೆಡ್ ಪ್ರದೇಶವನ್ನು ಉಲ್ಲಂಘಿಸುತ್ತದೆ. ಇದು ದಶಕಗಳಿಂದ ನಿಜವಾದ ಸಹಕಾರ ಮನೋಭಾವದಿಂದ ಪೋಷಿಸಲ್ಪಟ್ಟಿದೆ. ಅಮುಲ್‌ನ ಈ ಕ್ರಮವು ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ ಸಹಕಾರಿಗಳ ನಡುವೆ ಅನಾರೋಗ್ಯಕರ ಸ್ಪರ್ಧೆಯನ್ನು ಸೃಷ್ಟಿಸುತ್ತದೆ” ಎಂದು ಸ್ಟಾಲಿನ್ ಪತ್ರದಲ್ಲಿ ಬರೆದಿದ್ದಾರೆ.

”ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ಮತ್ತು ರಾಜ್ಯ ಸರ್ಕಾರದ ಒಡೆತನದ ಆವಿನ್ ಸಹಕಾರಿ ಅಡಿಯಲ್ಲಿ ಗ್ರಾಮೀಣ ಹಾಲು ಉತ್ಪಾದಕರು ಮತ್ತು ಗ್ರಾಹಕರ ಅನುಕೂಲಕ್ಕಾಗಿ 9,673 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

”ಅವರು ಸುಮಾರು 4.5 ಲಕ್ಷ ಸುರಿಯುವ ಸದಸ್ಯರಿಂದ 35 LLPD ಹಾಲನ್ನು ಸಂಗ್ರಹಿಸುತ್ತಾರೆ” ಎಂದು ಸ್ಟಾಲಿನ್ ಹೇಳಿದರು. ಈ ವ್ಯವಸ್ಥೆಯಲ್ಲಿ ಹಾಲು ಉತ್ಪಾದಕರಿಗೆ ವರ್ಷವಿಡೀ ಲಾಭದಾಯಕ ಮತ್ತು ಏಕರೂಪದ ಬೆಲೆಗಳ ಭರವಸೆ ಇದೆ” ಎಂದು ಅವರು ಹೇಳಿದ್ದಾರೆ

”ಆವಿನ್ ಜಾನುವಾರು ಆಹಾರ, ಮೇವು, ಖನಿಜ ಮಿಶ್ರಣ, ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ಹಾಲು ಉತ್ಪಾದಕರ ಪ್ರಾಣಿಗಳಿಗೆ ತಳಿ ಸೇವೆಗಳನ್ನು ಒದಗಿಸುತ್ತದೆ ಎಂದು ಸ್ಟಾಲಿನ್ ಬರೆದಿದ್ದಾರೆ. ಇದಲ್ಲದೆ, ಇದು ನಮ್ಮ ದೇಶದಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳ ಪೂರೈಕೆ ಮಾಡುತ್ತದೆ. ಹೀಗಾಗಿ, ಗ್ರಾಮೀಣ ಹಾಲು ಉತ್ಪಾದಕರ ಜೀವನೋಪಾಯವನ್ನು ಸುಧಾರಿಸುವಲ್ಲಿ ಮತ್ತು ಗ್ರಾಹಕರ ಪೌಷ್ಟಿಕಾಂಶದ ಅಗತ್ಯವನ್ನು ಪೂರೈಸುವಲ್ಲಿ ಆವಿನ್ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಸ್ಟಾಲಿನ್ ಅವರು ಶಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

0
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯ್ಕೆ ಅಸಿಂಧುಗೊಳಿ, ಮರು ಚುನಾವಣೆ ನಡೆಸಲು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಸಕಾರಣವಿಲ್ಲದೆ ತನ್ನ ನಾಮಪತ್ರ...