Homeಮುಖಪುಟ“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ...

“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

- Advertisement -
- Advertisement -

ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ‘ಇಂಡಿಯಾ’ (INDIA) ಒಕ್ಕೂಟ ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ‘ವೋಟ್ ಬಚಾವೋ, ದೇಶ್ ಬಚಾವೋ’ ರ‍್ಯಾಲಿಯಲ್ಲಿ ಭಾಗವಹಿಸುವ ಮುನ್ನ ತೆಲಂಗಾಣ ಭವನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಆಡಳಿತಾರೂಢ ಬಿಜೆಪಿಯ ಚುನಾವಣಾ ತಂತ್ರಗಾರಿಕೆಗಳ ವಿರುದ್ಧ ಕಟು ಭಾಷೆಯಲ್ಲಿ ವಾಗ್ದಾಳಿ ನಡೆಸಿದರು.

ತಮ್ಮ ಭಾಷಣದಲ್ಲಿ ಪೌರಾಣಿಕ ಉಲ್ಲೇಖಗಳನ್ನು ಬಳಸಿದ ರೇವಂತ್ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಶೈಲಿ ಹಾಗೂ ಚುನಾವಣಾ ತಂತ್ರಗಳನ್ನು ತೀವ್ರವಾಗಿ ವಿಮರ್ಶಿಸಿ “ಜಾತಿ, ಧರ್ಮ, ಭಾಷೆ ಮತ್ತು ಪ್ರಾದೇಶಿಕತೆಯ ಹೆಸರಿನಲ್ಲಿ ದೇಶದ ಜನರನ್ನು ವಿಭಜಿಸಿ ಪ್ರಧಾನಿ ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಶ್ರೀರಾಮನಿಗೆ ಸಾಥ್ ನೀಡಿ ರಾವಣನನ್ನು ಸಂಹಾರ ಮಾಡಲು ವಾನರ ಸೇನೆ ಲಂಕೆಗೆ ತೆರಳಿದ್ದಂತೆ, ಪ್ರಜಾಪ್ರಭುತ್ವ ವಿರೋಧಿಯಾದ ಮೋದಿ ಎಂಬ ರಾವಣನನ್ನು ಮಟ್ಟಹಾಕಲು ತೆಲಂಗಾಣದಿಂದ ಕಾಂಗ್ರೆಸ್‌ನ ವಾನರ ಸೇನೆ ನವದೆಹಲಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿದರು.

ತಮ್ಮ ಸುದೀರ್ಘ ಭಾಷಣದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಗಂಭೀರ ಆರೋಪಗಳನ್ನು ಮಾಡಿದ ರೇವಂತ್ ರೆಡ್ಡಿ, ಚುನಾವಣಾ ಆಯೋಗವು ಪ್ರಸ್ತುತ ಜಾರಿಗೊಳಿಸುತ್ತಿರುವ ಕಾಯ್ದೆಯು ಬಡವರು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಮತದಾನದ ಹಕ್ಕನ್ನು ಕಸಿಯುವ ಯೋಜಿತ ಸಂಚು ಎಂದು ಬಣ್ಣಿಸಿದರು. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಈಗಾಗಲೇ ಸುಮಾರು 13.50 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ವಿಲೇವಾರಿ ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಈ ಸಂಖ್ಯೆ 20 ಕೋಟಿಗೆ ತಲುಪುವ ಭೀತಿಯಿದೆ ಎಂದು ತಿಳಿಸಿದರು. ಈ ಹಿಂದೆ ಬಿಹಾರ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರಗಳಲ್ಲಿ ಇದೇ ರೀತಿಯಲ್ಲಿ ಮತಗಳನ್ನು ಕಡಿತಗೊಳಿಸುವ ಮೂಲಕ ಬಿಜೆಪಿ ಚುನಾವಣಾ ಲಾಭ ಪಡೆದುಕೊಂಡಿತ್ತು ಎಂದು ಅವರು ಆರೋಪಿಸಿದರು.

2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸಂವಿಧಾನ ಪರಿಷ್ಕರಣೆ ಮಾಡಲು ಯೋಜಿಸಿದ್ದ ಬಿಜೆಪಿಯ ಯತ್ನವನ್ನು ದೇಶದ ಜನತೆ ಬಹುಮತ ನೀಡದೆ ವಿಫಲಗೊಳಿಸಿದ್ದಾರೆ ಎಂದ ಸಿಎಂ, ಆ ಸೋಲಿನ ಆಕ್ರೋಶದಿಂದ ಈಗ ಬಡ ಮತದಾರರ ಹೆಸರುಗಳನ್ನು ವಜಾಗೊಳಿಸುವ ಕೆಲಸ ನಡೆಯುತ್ತಿದೆ ಎಂದು ದೂರಿದರು.

ದೆಹಲಿಯಲ್ಲಿ ನಡೆಯುವ ಈ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಲು ತೆಲಂಗಾಣದಿಂದ ಸುಮಾರು 15000 ಕಾರ್ಯಕರ್ತರು ಬರಬೇಕಿತ್ತಾದರೂ, ಕೊನೆಯ ಕ್ಷಣದಲ್ಲಿ ರೈಲ್ವೆ ಇಲಾಖೆಯು ವಿಶೇಷ ರೈಲು ಬುಕಿಂಗ್ ಸೌಲಭ್ಯವನ್ನು ರದ್ದುಗೊಳಿಸಿ ತಡೆಯೊಡ್ಡಲು ಯತ್ನಿಸಿತು ಎಂದು ರೇವಂತ್ ರೆಡ್ಡಿ ಕಿಡಿಕಾರಿದರು. ಆದರೆ ಇಂತಹ ಆಡಳಿತಾತ್ಮಕ ತಡೆಗೋಡೆಗಳಿಂದ ಕಾರ್ಯಕರ್ತರ ಹಠ ಹಾಗೂ ಪ್ರಜಾಪ್ರಭುತ್ವ ರಕ್ಷಣೆಯ ಸಂಕಲ್ಪವನ್ನು ತಡೆಯಲು ಸಾಧ್ಯವಿಲ್ಲ ಎಂದ ಅವರು, ರಾಮ್‌ಲೀಲಾ ಮೈದಾನದಿಂದ ಆರಂಭಗೊಂಡಿರುವ ಈ ಚಳವಳಿಯು ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರುಸ್ಥಾಪನೆಯಾಗುವವರೆಗೆ ಮುಂದುವರಿಯಲಿದೆ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ವಿಡಿಯೋ ಅಪ್‌ಲೋಡ್‌ಗೆ ಬಳಸಿದ ಫೋನ್ ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಹಸ್ತಾಂತರ: ಬೆಂಗಳೂರು ಪೊಲೀಸ್ ಆಯುಕ್ತರ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ವೈರಲ್ ಆಗಿದ್ದ ವಿವಾದಾತ್ಮಕ ‘ಸ್ಟಿಂಗ್ ಆಪರೇಷನ್’ ವಿಡಿಯೊವನ್ನು ಅಪ್‌ಲೋಡ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ...

‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ...

‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...