Homeಮುಖಪುಟಮಧ್ಯಪ್ರದೇಶ: ಕುಡಿದ ಮತ್ತಿನಲ್ಲಿ ವೃದ್ದ ಪೋಷಕರನ್ನು ಅಮಾನವೀಯವಾಗಿ ಥಳಿಸಿದ ಯೋಧ!

ಮಧ್ಯಪ್ರದೇಶ: ಕುಡಿದ ಮತ್ತಿನಲ್ಲಿ ವೃದ್ದ ಪೋಷಕರನ್ನು ಅಮಾನವೀಯವಾಗಿ ಥಳಿಸಿದ ಯೋಧ!

- Advertisement -
- Advertisement -

ಪ್ರಭು ಸೂರ್ಯವಂಶಿ ಎಂಬ ಯೋಧನೊಬ್ಬ ತನ್ನ ವೃದ್ಧ ತಂದೆ ತಾಯಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಕಳೆದ ಭಾನುವಾರ ಮಧ್ಯಪ್ರದೇಶದ ಬೆತುಲ್‌ನ ಮುಲ್ತಾಯ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ತಮ್ಮ ಮಗನ ವರ್ತನೆಯಿಂದ ಪೋಷಕರು ಆಘಾತಕ್ಕೊಳಗಾಗಿದ್ದು, ಆತ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಮಾತ್ರವಲ್ಲದೆ, ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದಾರೆ. ಆರೋಪಿ ಪ್ರಭು ಸೂರ್ಯವಂಶಿ ಕುಡಿದ ಮತ್ತಿನಲ್ಲಿ ಪೋಷಕರನ್ನು ನಿಂದಿಸಿ, ಅಮಾನುಷವಾಗಿ ದೊಣ್ಣೆಯಿಂದ ಹೊಡೆದಿದ್ದಾನೆ.

ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೇನೆಯಲ್ಲಿ ಕೆಲಸ ಮಾಡುತ್ತಿರುವ ಪ್ರಭು ಸೂರ್ಯವಂಶಿ, ಡಿಸೆಂಬರ್ 10 ರಂದು ರಜೆಯ ಮೇಲೆ ಊರಿಗೆ ಬಂದಿದ್ದರು. ಘಟನೆ ಬಗ್ಗೆ ವಿವರಿಸಿರುವ ಗಾಯಾಳು ತಂದೆ ‘ರಾತ್ರಿ ಸಂಪೂರ್ಣವಾಗಿ ಕುಡಿದು ನಮ್ಮನ್ನು ನಿಂದಿಸಲು ಪ್ರಾರಂಭಿಸಿದ. ನಾವು ಅವನ ಜಗಳವನ್ನು ವಿರೋಧಿಸಿದಾಗ, ಅವನು ನಿಂದಿಸಲು ಪ್ರಾರಂಭಿಸಿದ, ನಮ್ಮಿಬ್ಬರನ್ನೂ ಕೋಲಿನಿಂದ ಅಮಾನವೀಯವಾಗಿ ಥಳಿಸಿದ; ಮೂತ್ರ ಕುಡಿಯುವಂತೆ ನಮ್ಮನ್ನು ಒತ್ತಾಯಿಸಿದ’ ಎಂದು ಹೇಳಿದ್ದಾರೆ.

ಈ ಅಮಾನವೀಯ ಘಟನೆಗೆ ಗ್ರಾಮದ ನೆರೆಯ ನಿವಾಸಿಗಳು ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ ಎಂದು ಯೋಧನ ತಾಯಿ ತಿಳಿಸಿದ್ದಾರೆ. ಆರೋಪಿ ಪ್ರಭು ಸೂರ್ಯವಂಶಿ ವಿರುದ್ಧ ಐಪಿಸಿ ಸೆಕ್ಷನ್ 323, 294, 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‘ಬಲವಂತವಾಗಿ ಮೂತ್ರ ಕುಡಿಯುವುದಕ್ಕೆ ಒತ್ತಾಯಿಸಿರುವುದು ಸಾಬೀತಾದದೆ ಆರೋಪಿಯ ವಿರುದ್ಧ ಹೆಚ್ಚುವರಿ ಸೆಕ್ಷನ್‌ಗಳನ್ನು ಸಹ ಹಾಕಬಹುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ಜನವರಿ ಮೊದಲ ವಾರದಲ್ಲಿ ‘ಕೈ’ ಹಿಡಿಯಲಿರುವ ವೈಎಸ್ಆರ್ ಪುತ್ರಿ! ದೆಹಲಿ ರಾಜಕಾರಣಕ್ಕೆ ಶರ್ಮಿಳಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...