HomeಅಂಕಣಗಳುKarnataka against SIRಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ -...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

- Advertisement -
- Advertisement -

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ. ಮುಖ್ಯವಾಗಿ ರಾಹುಲ್ ಗಾಂಧಿಯವರು ಈ ವಿಚಾರವಾಗಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸಭೆಗಳಲ್ಲಿ ರೆಸಿಡೆನ್ಸಿಯಲ್ ಡಾಕ್ಯುಮೆಂಟ್ ನೀಡಬೇಕೆಂದು ಮುಖ್ಯಮಂತ್ರಿಗಳು ಈಗಾಗಲೇ ಸೂಚಿಸಿದ್ದಾರೆ ಎಂದು ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು, “ನಾನು ರಾಜಕೀಯಕ್ಕೆ ಬಂದಿರುವುದೇ ಇಂತಹ ಭೇದಭಾವಗಳನ್ನು ತೊಡೆದುಹಾಕಲು. ವಿದ್ಯಾರ್ಥಿ ದೆಸೆಯಿಂದಲೂ ಅನ್ಯಾಯಗಳನ್ನು ಕಂಡಿದ್ದೇನೆ. ದಕ್ಷಿಣ ಭಾರತೀಯರನ್ನು ಮುಂಬೈನಿಂದ ಹೊರಗಿಟ್ಟಿದ್ದು, ನಂತರ ಗುಜರಾತಿಗಳನ್ನು, ಆಮೇಲೆ ಅಲ್ಪಸಂಖ್ಯಾತರನ್ನು ಬಾಂಗ್ಲಾದೇಶಿಗಳೆಂದು ಕರೆದು ಹೊರದೂಡಲು ಮುಂದಾಗಿದ್ದು—ಇವೆಲ್ಲವೂ ವ್ಯವಸ್ಥಿತ ಹುನ್ನಾರಗಳು. ಚುನಾವಣಾ ಬೂತ್‌ಗಳಲ್ಲಿ ದಲಿತರು ಮತ್ತು ತಳಸಮುದಾಯದವರ ಮತಗಳನ್ನು ಅಳಿಸಿ ಹಾಕುತ್ತಿದ್ದ ದೃಶ್ಯಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಹರಿಪ್ರಸಾದ್ ಸ್ಮರಿಸಿದರು.

“ಸಂವಿಧಾನ ವಿರೋಧಿ ಶಕ್ತಿಗಳು ದೇಶದ ಏಕತೆಯನ್ನು ಒಡೆಯಲು ಹೊಂಚು ಹಾಕುತ್ತಿದ್ದಾರೆ. ಇವರೇ ದೇಶಪ್ರೇಮಿಗಳು ಎಂದು ಕಥೆಗಳನ್ನು ಹೆಣೆಯುತ್ತಾರೆ. ಇತಿಹಾಸದ ಉದಾಹರಣೆಗಳನ್ನು ನೀಡುತ್ತಾ, ಅಂದಿನ ಕಾಲದ ರಾಜರು-ಮಂತ್ರಿಗಳು ಶ್ರಮಿಕರನ್ನು ನಿರ್ಲಕ್ಷಿಸಿದ್ದರಿಂದಲೇ ದೇಶ ಲೂಟಿಯಾಯಿತು. ಇಂದು ಅದೇ ತಪ್ಪು ಮರುಕಳಿಸುತ್ತಿದೆ. ಬಿಜೆಪಿಗೆ ನಾನು ಸ್ಪಷ್ಟವಾಗಿ ಹೇಳುತ್ತೇನೆ, ಇಂತಹ ಜನವಿರೋಧಿ ನೀತಿಗಳಿಂದಾಗಿ ನಾಳೆ ದೇಶವನ್ನು ರಕ್ಷಿಸಲು ಜನರೇ ಸಿಗುವುದಿಲ್ಲ. ಪ್ರಧಾನಿ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಇನ್ನೂ ಸಿಕ್ಕಿಲ್ಲ, ಆದರೆ ದೇಶದ ಜನರಿಂದ ಮಾತ್ರ ಪ್ರತಿಯೊಂದು ದಾಖಲೆಯನ್ನು ಇವರು ಕೇಳುತ್ತಿದ್ದಾರೆ” ಎಂದು ಲೇವಡಿ ಮಾಡಿದರು.

“ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳಲ್ಲಿ ಬಲಪಂಥೀಯರೇ ತುಂಬಿದ್ದಾರೆ. ಜ್ಞಾನ ಕುಮಾರ್ ಅಂತಹ ಅಧಿಕಾರಿಗಳು ಜನಪ್ರತಿನಿಧಿಗಳನ್ನೇ ಭೇಟಿಯಾಗುವುದಿಲ್ಲ ಎಂದರೆ ನ್ಯಾಯಯುತ ಮತದಾನವನ್ನು ಇವರಿಂದ ನಿರೀಕ್ಷಿಸಲು ಸಾಧ್ಯವೇ? ಆರ್‌ಎಸ್‌ಎಸ್‌ ಮಂದಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ, ಇವತ್ತು ಸಂವಿಧಾನವನ್ನು ಮೊಟಕುಗೊಳಿಸಲು ಎಲ್ಲಾ ರೀತಿಯ ಷಡ್ಯಂತ್ರಗಳನ್ನು ಮಾಡುತ್ತಿದ್ದಾರೆ. ಈ ಹೋರಾಟ ಕೇವಲ ಮುಖ್ಯಮಂತ್ರಿಗಳೊಬ್ಬರಿಂದ ಸಾಧ್ಯವಿಲ್ಲ, ಇದಕ್ಕಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮವೇ ನಡೆಯಬೇಕಿದೆ” ಎಂದು ಅವರು ಕರೆ ನೀಡಿದರು.

‘ಚುನಾವಣಾ ಆಯೋಗಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಆಗ್ರಹಿಸಿದರು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು.
  3. ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
  4. ಅಪೀಲ್ ಸಲ್ಲಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು ಎಂದು ಒತ್ತಾಯಿಸಿದರು.

‘ರಾಜ್ಯ ಸರಕಾರಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು ಎಂದು ಆಗ್ರಹಿಸಿದರು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು ಎಂದು ಒತ್ತಾಯಿಸಿದರು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...