Homeಕರ್ನಾಟಕತುಮಕೂರು | ವೃದ್ಧ ದಂಪತಿಯನ್ನು ತೋಟದಲ್ಲಿ ಕೂಡಿ ಹಾಕಿ ದೌರ್ಜನ್ಯ : ಆರೋಪ

ತುಮಕೂರು | ವೃದ್ಧ ದಂಪತಿಯನ್ನು ತೋಟದಲ್ಲಿ ಕೂಡಿ ಹಾಕಿ ದೌರ್ಜನ್ಯ : ಆರೋಪ

ಬಂಧಮುಕ್ತಗೊಳಿಸಿದ ಅಧಿಕಾರಿಗಳು

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬೆಲ್ಲದಮಡಗು ಗ್ರಾಮದ ತೋಟವೊಂದರಲ್ಲಿ ವೃದ್ಧ ದಂಪತಿಯನ್ನು ಕೂಡಿ ಹಾಕಿ, ಮಾಲೀಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಕಳೆದ ಒಂದು ವರ್ಷದಿಂದ ಬಂಧನದಲ್ಲಿದ್ದ ದಂಪತಿಯನ್ನು ಅಧಿಕಾರಿಗಳು ಬಂಧಮುಕ್ತಗೊಳಿಸಿದ್ದಾರೆ.

ದಬ್ಬೇಘಟ್ಟ ಗ್ರಾಮದ ಹನುಮಂತರಾಯಪ್ಪ ಮತ್ತು ರಾಮಕ್ಕ ದಂಪತಿಯನ್ನು ಬೆಲ್ಲದಮಡಗು ಗ್ರಾಮದಲ್ಲಿರುವ ಲಕ್ಷ್ಮಿನಾರಾಯಣ ಎಂಬವರ ತೋಟದಲ್ಲಿ ಕೂಡಿ ಹಾಕಿ, ಕೆಲಸ ಮಾಡಿಸಲಾಗುತ್ತಿತ್ತು ಎಂದು ವರದಿಯಾಗಿದೆ.

ವೃದ್ಧ ದಂಪತಿಯನ್ನು ಕೂಡಿ ಹಾಕಿ ದೌರ್ಜನ್ಯ ಎಸಗುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಡಾ.ಬಿ ಆರ್ ಅಂಬೇಡ್ಕರ್ ದಂಡು ತುಮಕೂರು ಜಿಲ್ಲಾಧ್ಯಕ್ಷ ಎನ್‌ ಕುಮಾರ್ ತೋಟಕ್ಕೆ ಹೋಗಿ ನೋಡಿದಾಗ ತೋಟದ ಗೇಟಿಗೆ ಬೀಗ ಹಾಕಿರುವುದು ಕಂಡು ಬಂದಿದೆ. ಕುಮಾರ್ ಅವರಲ್ಲಿ ದಂಪತಿ ತಮ್ಮ ನೋವು ತೋಡಿಕೊಂಡಿದ್ದಾರೆ.

ದಂಪತಿಯ ಅಳಲು ಆಲಿಸಿದ ಕುಮಾರ್ ಮತ್ತು ಸಂಘಟನೆಯ ಇತರ ಪದಾಧಿಕಾರಿಗಳು, ತೋಟದ ಮಾಲೀಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಗ್ರಾಮಸ್ಥರೂ ಅಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ದೂರು ಬಂದ ತಕ್ಷಣ ಮಧುಗಿರಿ ತಹಶೀಲ್ದಾರ್ ಶಿರಿನ್ ತಾಜ್, ಸಿಡಿಪಿಒ ಕಮಲಾ, ಸಮಾಜ ಕಲ್ಯಾಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ದಿನೇಶ್ ಬುಧವಾರ ತೋಟಕ್ಕೆ ತೆರಳಿ ದಂಪತಿಯನ್ನು ಬಂಧಮುಕ್ತಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

“ತಿಂಗಳಿಗೆ ತಲಾ 14 ಸಾವಿರ ಸಂಬಳ ನೀಡುವುದಾಗಿ ತೋಟದ ಕೆಲಸಕ್ಕೆ ಕರೆಸಿಕೊಳ್ಳಲಾಗಿತ್ತು. ಆದರೆ, ಕೊಡುತ್ತಿರುವುದು ತಲಾ 7 ಸಾವಿರ ರೂ. ಕಳೆದ ಎರಡು ತಿಂಗಳಿನಿಂದ ಅದನ್ನೂ ಕೊಟ್ಟಿಲ್ಲ. ತೋಟದ ಗೇಟ್‌ಗೆ ಬೀಗ ಹಾಕಲಾಗಿದೆ. ಒಳಗೆ ಇರುವ ಶೆಡ್‌ಗೂ ಬೀಗ ಜಡಿಯಲಾಗಿದೆ. ಇಲ್ಲಿ ಕುಡಿಯಲು ನೀರು, ತಿನ್ನಲು ಏನೂ ಇಲ್ಲ. ಈಗ ಒಬ್ಬರಿಗೆ ಮಾತ್ರ ಸಂಬಳ ಕೊಡುವುದು, ಇಬ್ಬರಿಗೆ ಕೊಡಲು ಆಗಲ್ಲ” ಎನ್ನುತ್ತಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಗಳು ಮತ್ತು ಅಧಿಕಾರಿಗಳ ಮುಂದೆ ದಂಪತಿ ಅಳಲು ತೋಡಿಕೊಂಡಿದ್ದಾರೆ.

ಪ್ರಸ್ತುತ ದಂಪತಿ ಬಂಧಮುಕ್ತರಾಗಿದ್ದಾರೆ. ಅವರಿಗೆ ಜೀತಮುಕ್ತ ಪತ್ರ ನೀಡಲಾಗಿದೆ. ತೋಟದ ಮಾಲೀಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆ ಅಧಿಕಾರಿಗಳಿಗೆ ಒತ್ತಾಯಿಸಿದೆ.

ಇದನ್ನೂ ಓದಿ : ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...