Homeಮುಖಪುಟಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

- Advertisement -
- Advertisement -

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಅಮೆರಿಕದಲ್ಲಿ ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ ಆ ದೇಶದಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿದೆ. ಇದರ ಬೆನ್ನಿಗೆ ಇದೇ ರೀತಿಯ ಮತ್ತೊಂದು ಕಹಿ ಘಟನೆ ಭಾರತದ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ.

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಜೋಧಪುರದ ಪೊಲೀಸರು ಒಬ್ಬ ವ್ಯಕ್ತಿಯನ್ನು ನೆಲದ ಮೇಲೆ ಬೀಳಿಸಿ ತಮ್ಮ ಮೊಣಕಾಲನ್ನು ಕುತ್ತಿಗೆಗೆ ಒತ್ತಿ ಹಿಡಿಯುವುದನ್ನು ಕಾಣಬಹುದಾಗಿದೆ. ಆನಂತರ ಆ ವ್ಯಕ್ತಿಗೆ ಪೊಲೀಸರು ಹಲ್ಲೆ ಮಾಡಿರುವುದು ದಾಖಲಾಗಿದೆ. ಈ ವಿಡಿಯೋವನ್ನು ಇದೀಗ ಜಾರ್ಜ್ ಫ್ಲಾಯ್ಡ್ ಘಟನೆಗೆ ಹೋಲಿಸಿ ಜನ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಘಟನೆಯ ಹಿನ್ನೆಲೆ

ಗುರುವಾರ ಮುಖೇಶ್ ಕುಮಾರ್ ಪ್ರಜಾಪತ್ ಎಂಬ ವ್ಯಕ್ತಿಯೊಬ್ಬ ಜೋಧಪುರ ನಗರದಲ್ಲಿ ಮಾಸ್ಕ್ ಹಾಕಿಕೊಳ್ಳದೆ ಓಡಾಡಿದ್ದಾನೆ. ಈ ಕಾರಣಕ್ಕೆ ಆತನನ್ನು ವಿಚಾರಣೆ ನಡೆಸುವ ವೇಳೆ ಪೊಲೀಸರು ಕಟುವಾಗಿ ವರ್ತಿಸಿದ್ದು ನೆಲಕ್ಕೆ ಬೀಳಿಸಿ ಕತ್ತಿನ ಮೇಲೆ ಮೊಣಕಾಲಿಟ್ಟು ವಿಚಾರಣೆ ನಡೆಸಿದ್ದಾರೆ. ಆದರೆ, ಈ ಘಟನೆ ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ವೀಡಿಯೊವನ್ನು ನೆನಪಿಸುವಂತಿದೆ.

ಪ್ರಕರಣದ ಕುರಿತು ಸ್ಪಷ್ಟಪಡಿಸಿರುವ ದೇವ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೋಮ್ಕರನ್, “ಕೊರೋನಾ ಭೀತಿಯ ನಡುವೆಯೂ ಮುಕೇಶ್ ಕುಮಾರ್ ಎಂಬ ವ್ಯಕ್ತಿ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ತಿರುಗಾಡುತ್ತಿದ್ದ. ಪೊಲೀಸರು ಆತನನ್ನು ವಿಚಾರಣೆ ನಡೆಸುವ ವೇಳೆ ಆತ ಆಕ್ರಮಣಕಾರಿಯಾಗಿ ವರ್ತಿಸಿದ್ದ. ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಸಹ ಬಲವಂತವಾಗಿ ಆತನನ್ನು ಬಂಧಿಸಿದ್ದಾರೆ. ಈ ಘಟನೆ ಗುರುವಾರ ಜೋಧಪುರ ನಗರದಲ್ಲಿ ನಡೆದಿದ್ದು ಜನ ಇದನ್ನು ವಿಡಿಯೋ ಮಾಡಿದ್ದಾರೆ. ಮುಖರ್ಜಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ “ಸಾಂಕ್ರಾಮಿಕ ಕಾಯ್ದೆಯ” ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಆತನನ್ನು ಇಂದು ನ್ಯಾಯಾಲಯಕ್ಕೂ ಹಾಜರುಪಡಿಸಲಾಗಿದೆ” ಎಂದು ತಿಳಿಸಿದ್ದಾರೆ.

ಒಟ್ಟಾರೆ ಜೋಧಪುರದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಪೋಲೀಸ್ ತನ್ನ ಮೊಣಕಾಲಿನಿಂದ ಕುತ್ತಿಗೆಯನ್ನು ಒತ್ತುತ್ತಿದ್ದರೆ, ಇತರ ಇಬ್ಬರು ಪೊಲೀಸರು ಯುವಕನ ಕಾಲುಗಳನ್ನು ಹಿಡಿದಿರುವುದು ಸ್ಪಷ್ಟವಾಗಿದೆ. ಅದೃಷ್ಟವಶಾತ್ ಆತನ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ.

ಜಾರ್ಜ್ ಫ್ಲಾಯ್ಡ್ ಎಂಬ 46 ವರ್ಷದ ಕಪ್ಪು ಜನಾಂಗದ ವ್ಯಕ್ತಿ ಮೇ 25 ರಂದು ಅಮೆರಿಕದ ಮಿನ್ನಿಯಾಪೋಲಿಸ್ ಅಂಗಡಿಯೊಂದರ ಹೊರಗೆ ಪೊಲೀಸರಿಂದ ಬಂಧಿಸಲ್ಪಟ್ಟ. ಆದರೆ, ಪೊಲೀಸರ ಅಮಾನವೀಯ ವರ್ತನೆಯಿಂದಾಗಿ ಆತ ನಡು ರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದ. ಈ ಘಟನೆ ಇದೀಗ ಅಮೆರಿಕದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜೋಧಪುರದಲ್ಲಿ ಘಟನೆ ಸಹ ಸಾಮಾಜಿಕ ಜಾಲತಾನದಲ್ಲಿ ಭಾರೀ ಸದ್ದು ಮಾಡುತ್ತಿದೆ.


ಇದನ್ನೂ ಓದಿ: ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...