Homeರಾಷ್ಟ್ರೀಯ‘ಗಾಯಗೊಂಡು ಆಸ್ಪತ್ರೆಯ ನೆಲದಲ್ಲಿ ಬಿದ್ದಿರುವ ರೋಗಿ; ಚೆಲ್ಲಿರುವ ರಕ್ತವನ್ನು ನೆಕ್ಕುತ್ತಿರುವ ನಾಯಿ’ - ಉತ್ತರ ಪ್ರದೇಶ!

‘ಗಾಯಗೊಂಡು ಆಸ್ಪತ್ರೆಯ ನೆಲದಲ್ಲಿ ಬಿದ್ದಿರುವ ರೋಗಿ; ಚೆಲ್ಲಿರುವ ರಕ್ತವನ್ನು ನೆಕ್ಕುತ್ತಿರುವ ನಾಯಿ’ – ಉತ್ತರ ಪ್ರದೇಶ!

ದಿನಗಳ ಹಿಂದೆ ಚೇಳು ಕಡಿತವೆಂದು ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾದ ರೋಗಿಗಳಿಗೆ ಮಾಂತ್ರಿಕರು ಚಿಕಿತ್ಸೆ ನೀಡುತ್ತಿರುವ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ಸರ್ಕಾರಿ ಆಸ್ಪತ್ರೆಯೊಳಗೆ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ರೋಗಿಯೊಬ್ಬರ ರಕ್ತವನ್ನು ನಾಯಿಯೊಂದು ನೆಕ್ಕುತ್ತಿರುವ ಅಘಾತಕಾರಿ ವಿಡಿಯೊ ಉತ್ತರ ಪ್ರದೇಶದ ರಾಜ್ಯದ ಕುಶಿನಗರ ಜಿಲ್ಲೆಯಿಂದ ಗುರುವಾರ ಹೊರಹೊಮ್ಮಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಭಾರಿ ಆಕ್ರೋಶ ಹುಟ್ಟು ಹಾಕಿದೆ.

ಜಿಲ್ಲಾ ಆಸ್ಪತ್ರೆಯ ವಾರ್ಡ್‌ ಒಂದರಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿರುವುದು ಮತ್ತು ಆತನ ಗಾಯಗಳಿಂದ ಒಸರುವ ರಕ್ತವನ್ನು ನಾಯಿ ನೆಕ್ಕುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಸ್ಪತ್ರೆಯಲ್ಲಿ ಗಾಯಗೊಂಡು ಬಿದ್ದಿದ್ದರೂ ಅವರಿಗೆ ಚಿಕಿತ್ಸೆ ನೀಡಲು ಅಲ್ಲಿ ಯಾರೂ ಇರುವಂತೆ ವಿಡಿಯೊದಲ್ಲಿ ತೋರುತ್ತಿಲ್ಲ. ವೀಡಿಯೊವನ್ನು ಮಂಗಳವಾರ ಚಿತ್ರೀಕರಿಸಲಾಗಿದ್ದು, ಅದು ಗುರುವಾರ ಬೆಳಕಿಗೆ ಬಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಆಪಾದಿತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಅಧಿಕಾರಿಗಳು ಆಸ್ಪತ್ರೆಯಲ್ಲಿ ನಿಯೋಜಿಸಲಾಗಿದ್ದ ಆರು ಆರೋಗ್ಯ ಸಿಬ್ಬಂದಿಯನ್ನು ವಜಾಗೊಳಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ.

“ಈ ಘಟನೆಯು ಆರೋಗ್ಯ ಇಲಾಖೆಯ ಘನತೆಗೆ ಮಸಿ ಬಳಿದಿದೆ…..ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಕುಶಿನಗರದಲ್ಲಿ ಜಿಲ್ಲಾ ಹಿರಿಯ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ. ಕರ್ತವ್ಯ ನಿರತ ವೈದ್ಯರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ವಿಡಿಯೊ ಮಾಡಿದ ಪತಿ; ಮಹಿಳೆ ಸಾವು

ಕೆಲವೇ ದಿನಗಳ ಹಿಂದೆ ಚೇಳು ಕಡಿತದಿಂದ ಮಹೋಬ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾದ ಇಬ್ಬರು ರೋಗಿಗಳಿಗೆ ‘ಮಾಂತ್ರಿಕರು’ ಚಿಕಿತ್ಸೆ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ದಿನಗಳ ಹಿಂದೆ ವೈರಲ್ ಆಗಿತ್ತು.

ಮಾಂತ್ರಿಕರಲ್ಲಿ ಒಬ್ಬರನ್ನು ಸಂತೋಷ್‌ ಪೂಜಾರಿ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳಿಗೆ ‘ಚಿಕಿತ್ಸೆ’ ನೀಡಿದ್ದಾಗಿ ಎಂದು ಹೇಳಿದ್ದಾರೆ ಮತ್ತು ಧಾರ್ಮಿಕ ಕ್ರಿಯೆಗಳ ನಂತರ ಅವರ ಸ್ಥಿತಿ ಸುಧಾರಿಸಿದೆ ಎಂದು ತಿಳಿಸಿದ್ದಾರೆ. ರೋಗಿಗಳನ್ನು ಅಟೆಂಡ್‌‌ ಮಾಡುವವರು ಅವರ ಸೇವೆಯನ್ನು ಹೆಚ್ಚಾಗಿ ಪಡೆಯುತ್ತಾರೆ ಎಂದು ಮಾಂತ್ರಿಕರು ಹೇಳಿದ್ದಾರೆ. ಈ ಹಿಂದೆಯೂ ಕೂಡ ‘ಮಾಂತ್ರಿಕರು’ ಆಸ್ಪತ್ರೆಯಲ್ಲಿ ರೋಗಿಗಳಿಗೆ ‘ಚಿಕಿತ್ಸೆ’ ಮಾಡಲು ಧಾರ್ಮಿಕ ವಿಧಿಗಳನ್ನು ನಡೆಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ರಕ್ತಸಿಕ್ತ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಪತ್ತೆ- ಅತ್ಯಾಚಾರದ ಶಂಕೆ

ವೀಡಿಯೋಗಳನ್ನು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದು, ವರದಿ ನಿಜವೆಂದು ಕಂಡುಬಂದರೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...