Homeಮುಖಪುಟಬುಡಕಟ್ಟು ಮಹಿಳೆಗೆ ಸಂಬಂಧಿಕರು ಥಳಿಸಿದ ಹಳೆಯ ವೀಡಿಯೊ, ಕೋಮು ಸಂಘರ್ಷದ ಸಂದೇಶದೊಂದಿಗೆ ವೈರಲ್

ಬುಡಕಟ್ಟು ಮಹಿಳೆಗೆ ಸಂಬಂಧಿಕರು ಥಳಿಸಿದ ಹಳೆಯ ವೀಡಿಯೊ, ಕೋಮು ಸಂಘರ್ಷದ ಸಂದೇಶದೊಂದಿಗೆ ವೈರಲ್

- Advertisement -
- Advertisement -

ಎರಡು ವರ್ಷಗಳ ಹಿಂದೆ ಯುವಕರ ಗುಂಪೊಂದು ಯುವತಿಯೊಬ್ಬಳನ್ನು ಥಳಿಸಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿತ್ತು. ಆ ಘಟನೆಯ ವೀಡಿಯೊವನ್ನು ಇದೀಗ ‘ಹಿಂದುತ್ವವಾದಿ ಉಗ್ರರು ದಲಿತ ಹುಡುಗಿಯನ್ನು ಥಳಿಸುತ್ತಿರುವುದನ್ನು ತೋರಿಸುತ್ತದೆ’ ಎಂಬ ಸುಳ್ಳು ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿರುವ ಬೂಮ್ ವೆಬ್ಸೈಟ್, ”ಇದು 2021 ರ ಜೂನ್‌ನಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ತಮ್ಮ ಸಂಬಂಧಿಕರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಅವರ ಸಂಬಂಧಿಕರೇ ಥಳಿಸಿದ ಘಟನೆ ವೈರಲ್ ವೀಡಿಯೊದಲ್ಲಿದೆ” ಎಂದು ಹೇಳಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ, ಯುವಕರ ಗುಂಪೊಂದು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದುಕೊಂಡು ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಹೊಡೆಯುತ್ತಿರುವುದನ್ನು ನೋಡಬಹುದು ಮತ್ತು ಆಕೆ ಸುತ್ತಲೂ ನಿಂತಿದ್ದ ಪ್ರೇಕ್ಷಕರಿಂದ ಸಹಾಯಕ್ಕಾಗಿ ಆ ಮಹಿಳೆ ಅಳುತ್ತಿದ್ದಾಳೆ.

ಇದನ್ನೂ ಓದಿ: ಬೇಜವಾಬ್ದಾರಿ ಕೋಮುವಾದಿ ಶಕ್ತಿಗಳು ಧಮ್ಕಿ ಹಾಕಿದ ಕೂಡಲೇ ಸರ್ಕಾರ ಬೆದರುವುದೆಂದರೆ ಏನರ್ಥ?: ಜಸ್ಟಿಸ್ ನಾಗಮೋಹನ್ ದಾಸ್

ಈ ವಿಡಿಯೋ ಹಂಚಿಕೊಂಡಿರುವವರು, “ಹಿಂದೂ ಉಗ್ರಗಾಮಿಗಳ ಗುಂಪು ಮತ್ತು ಹಿಂದುತ್ವ ಉಗ್ರಗಾಮಿ ಸಂಘಟನೆಯ ಸದಸ್ಯರು ದಲಿತ ಬಾಲಕಿಯನ್ನು ಕ್ರೂರವಾಗಿ ಮತ್ತು ನಿರ್ದಯವಾಗಿ ಥಳಿಸಿದ್ದಾರೆ. ಉಗ್ರಗಾಮಿ ಹಿಂದೂ ವಿಭಾಗವು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯ ಎಲ್ಲಾ ವಿಧಾನಗಳನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ದಲಿತರ ವಿರುದ್ಧ ಈಗಲೂ ಮಾಡುತ್ತಿರುವ ವಿಶ್ವದ ಏಕೈಕ ದೇಶ ಭಾರತವಾಗಿದೆ” ಎಂದು ವೀಡಿಯೊದ ಶೀರ್ಷಿಕೆ ಬರೆಯಲಾಗಿದೆ. ಈ ವೀಡಿಯೊವನ್ನು ಟ್ವಿಟರ್‌ನಲ್ಲಿ  ಸುಮಾರು 79.3 ಸಾವಿರ ವೀಕ್ಷಣೆ ಪಡೆದಿದೆ.

ಅದೇ ವೀಡಿಯೊವನ್ನು @jatt0935 ಟ್ವಿಟ್ಟರ್ ಖಾತೆಯಿಂದ ಹಂಚಿಕೊಂಡಿದ್ದು, ”ನದಿಯಲ್ಲಿ ಸ್ನಾನ ಮಾಡಿದ್ದಕ್ಕಾಗಿ ದಲಿತ ಮಹಿಳೆಯನ್ನು ಥಳಿಸಲಾಗಿದೆ” ಎಂಬ ಮತ್ತೊಂದು ತಪ್ಪು ಹೇಳಿಕೆಯೊಂದಿಗೆ ಅದೇ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. “ಎಚ್ಚರಿಕೆ…. ನದಿಯಲ್ಲಿ ಸ್ನಾನ ಮಾಡಿ ನೀರನ್ನು ಕಲುಷಿತಗೊಳಿಸಿದ್ದಕ್ಕಾಗಿ ಈ ದಲಿತ ಬಾಲಕಿಯನ್ನು ನಿರ್ದಯವಾಗಿ ಥಳಿಸಲಾಗುತ್ತಿದೆ. 75 ವರ್ಷಗಳ ಸ್ವತಂತ್ರ ಭಾರತ, ಅಲ್ಲಿ ಮಹಿಳೆಯರಿಗಿಂತ ನೀರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ” ಎಂದು ಟ್ವೀಟ್ ಮಾಡಿದೆ.

ಸತ್ಯ-ಪರಿಶೀಲನೆ
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಇಬ್ಬರು ಸಹೋದರಿಯರನ್ನು ಅವರ ಸಂಬಂಧಿಕರು ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಥಳಿಸಿದ ಜೂನ್ 2021ರ ಘಟನೆಯ ವವೀಡಿಯೊ ಇದೀಗ ಬೇರೆ ಆಯಾಮದಲ್ಲಿ ವೈರಲ್ ಆಗಿದೆ ಎಂದು BOOM ಕಂಡುಹಿಡಿದಿದೆ.

ಬುಡಕಟ್ಟು ಮಹಿಳೆಗೆ ಅವರ ಕುಟುಂಬ ಸದಸ್ಯರು ಸಾರ್ವಜನಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ. ಏಕೆಂದರೆ ಅವರು ತಮ್ಮ ತಾಯಿಯ ಸೋದರಸಂಬಂಧಿಗಳೊಂದಿಗೆ ಕುಟುಂಬವನ್ನು ಕೆರಳಿಸುವಂತೆ ಸ್ಪಷ್ಟವಾಗಿ ಮಾತನಾಡುತ್ತಿದ್ದರು ಎಂದು ಜುಲೈ 4, 2021 ರಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಘಟನೆಯು ಪಿಪಲ್ವಾ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಾಂಡಾದಲ್ಲಿ ನಡೆದಿರುವ ಈ ಘಟನೆಯನ್ನು ಅಲ್ಲಿ ಅನೇಕರು ಕಣ್ಣಾರೆ ನೋಡಿದ್ದಾರೆ ಮತ್ತೆ ಕೆಲವರು ವೀಡಿಯೊಗಳನ್ನು ಸಹ ರೆಕಾರ್ಡ್ ಮಾಡಿದ್ದಾರೆ.

ಈ ಘಟನೆ ಬಗ್ಗೆ  ಜುಲೈ 5, 2021 ರಂದು ಟೈಮ್ಸ್ ಆಫ್ ಇಂಡಿಯಾ ಕೂಡ ವರದಿ ಮಾಡಿದ್ದು, ”ಆರಂಭದಲ್ಲಿ ಕುಟುಂಬಸ್ಥರ ವಿರುದ್ಧ ದೂರು ನೀಡಲು ಬಾಲಕಿಯರು ಹಿಂದೇಟು ಹಾಕಿದ್ದರು ಆದರೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ನಂತರ ಪೊಲೀಸ್ ಠಾಣೆಯಲ್ಲಿ ಹೇಳಿಕೆ ನೀಡಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ತಾಂಡಾ ಪೊಲೀಸ್ ಠಾಣೆಯ ಇನ್‌ಚಾರ್ಜ್ ವಿಜಯ್ ವಾಸ್ಕಲೆ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...