Homeಮುಖಪುಟದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ದೊರೆಸ್ವಾಮಿಯವರ ವಿಚಾರವಾಗಿ ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ.

- Advertisement -
- Advertisement -

ಮಾನ್ಯ ಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ

ವಂದನೆಗಳು

ನಿಮ್ಮ ಇ-ಮೇಲ್ ಐಡಿ nimmasuresh (ನಿಮ್ಮ ಸುರೇಶ್) ಎಂದಿದೆ. ನೀವು ನಮ್ಮ ಸುರೇಶ್ ಅಂದುಕೊಂಡಿದ್ದರಿಂದಲೇ ತಮಗೆ ಈ ಪತ್ರ ಬರೆಯುತ್ತಿದ್ದೇನೆ. ನಿಮ್ಮ ಹೇಳಿಕೆ, “ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ”-ನೋಡಿ ನನಗೆ ಶಾಕ್ ಆಯಿತು.

ಶ್ರೀ ಎಚ್.ಎಸ್.ದೊರೆಸ್ವಾಮಿಯವರು ಕಳೆದ ಚುನಾವಣೆಯ ಹಿಂದಿನ ದಿನ ಯಾರಿಗೆ ಮತನೀಡಬೇಕೆಂದು ಕರೆ ನೀಡುತ್ತಾ, ಮೋದಿಯವರ ವೈಫಲ್ಯಗಳನ್ನು ಹಾಗೂ ಸರ್ವಾಧಿಕಾರಿ ಪ್ರವೃತ್ತಿಯನ್ನು ವಿವರಿಸುತ್ತಾ, “ಆತ ಮಾತು ಕೊಟ್ಟಿದ್ದನ್ನು ಉಳಿಸಿಕೊಂಡಿಲ್ಲ. ಯಾವ ಕೆಲಸ ಮಾಡಿಲ್ಲ. ಕರ್ನಾಟಕವನ್ನು ತೆಗೆದುಕೊಂಡು ಬಿಟ್ರೆ ಇಡೀ ದೇಶವನ್ನು ತಗೋಬಹುದು ಎನ್ನುವ ಆಲೋಚನೆ ಇದೆ. ಆದ್ದರಿಂದ ಈಗ ನಾವು ಆತನನ್ನು ಮುಗಿಸಬೇಕು. ಆತನನ್ನು ಸೋಲಿಸಬೇಕು” ಎಂದು ಹೇಳುತ್ತಾರೆ. ಇದರ ಅರ್ಥ ಸಾಯಿಸಬೇಕು ಎಂದಾಗುವುದೇ? ಅವರ ಮಾತುಗಳಲ್ಲಿ ಎತ್ತಿದ ಸಮಸ್ಯೆಗಳತ್ತ ಕಣ್ಣೆತ್ತೂ ನೋಡುವ ಧೈರ್ಯವಿಲ್ಲದೆ, ಅದನ್ನು ಅಪಾರ್ಥ ಮಾಡಿ, ನೂರು ವರ್ಷಕ್ಕೂ ಮಿಗಿಲಾಗಿ ಅಹಿಂಸೆಯ ವ್ರತ ಪಾಲಿಸಿಕೊಂಡು, ಯಾವುದೋ ಯುಗದ ಮನುಷ್ಯನೊಬ್ಬ ನಮ್ಮ ನಡುವೆ ಬದುಕಿರುವ ಸೋಜಿಗ ಕಾಣದೆ ಸದೆಬಡಿಯುವುದಾದರೆ ನಾವು ಲಿಲ್ಲಿ ಪುಟ್ಟರಂತಾಗಿಬಿಡುತ್ತೇವೆ.

ಸ್ಪಷ್ಟತೆಗಾಗಿ ಒಂದು ಉದಾಹರಣೆ ನೋಡೋಣ: ಇಂದಿನ ಓಲೈಕೆ, ಅವಕಾಶವಾದಿ ರಾಜಕಾರಣದಲ್ಲಿ ಇದೇ ಶ್ರೀ ಬಸವನಗೌಡ ಯತ್ನಾಳ್, ಶ್ರೀ ಈಶ್ವರಪ್ಪ ಅಥವಾ ಮತ್ತಾರೋ ಮೋದಿಯವರ ವಿರೋಧಿಗಳಾಗಿದ್ದರೆ ಅವರು ತಮ್ಮ ಸ್ವಭಾವಕ್ಕೆ ತಕ್ಕಂತೆ ಏನು ಹೇಳುತ್ತಿದ್ದರು? ಮೋದಿಯವರ ತಲೆಗೆ ಹತ್ತಿಪ್ಪತ್ತು ಕೋಟಿ ಫತ್ವಾ ಹೊರಡಿಸುತ್ತಿದ್ದರೇನೋ! ಇಂಥವರು ದೊರೆಸ್ವಾಮಿ ಅವರನ್ನು “ನಕಲಿ ಸ್ವಾತಂತ್ರ್ಯ ಹೋರಾಟಗಾರ” ಎನ್ನುತ್ತಾರೆ! ಅಂದರೆ, ರಾಜಕಾರಣವೆಂಬುದು ಅದೇನು ಜಾದೂ, ಕಣ್ಕಟ್ಟು ವಿದ್ಯೆಯೇ? ಅಸಲಿಯನ್ನು ನಕಲಿ ಮಾಡುವುದಕ್ಕೆ, ನಕಲಿಯನ್ನು ಅಸಲಿ ಮಾಡುವುದಕ್ಕೆ? ದೊರೆಸ್ವಾಮಿ ಅವರನ್ನು “ಪಾಕ್ ಏಜೆಂಟ್” ಎನ್ನುವುದಕ್ಕೆ ಇವರ ನಾಲಿಗೆ ಹೇಗೆ ಹೊರಳಿತು? ಇಂದಿನ ನಮ್ಮ ಬಹುತೇಕ ರಾಜಕಾರಣಿಗಳಲ್ಲಿ ಕೆಲವರಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಕಾರು ನಾಲಿಗೆಗಳು. ಇಲ್ಲಿದ್ದಾಗ ಮಾತನಾಡಲು ಒಂದು, ಇನ್ನೊಂದು ಕಡೆ ಹೋದಾಗ ಮತ್ತೊಂದು, ನುಂಗಲು ಮಗದೊಂದು-ಹೀಗೆ.

ಇಂದು ಜನಪ್ರತಿನಿಧಿಗಳು ತಮ್ಮನ್ನು ಜನಪ್ರತಿನಿಧಿಗಳು ಅಂದುಕೊಂಡಿಲ್ಲ. ಶಾಸಕರು ಶಾಸಕ ಅಂದುಕೊಂಡಿಲ್ಲ. ಯಾರೂ ತಮ್ಮ ಸ್ಥಾನಕ್ಕೆ ಹೊಣೆಗಾರರಾಗಿಲ್ಲ. ಇದು ಇಂದಿನ ಸಮಸ್ಯೆಯಾಗಿದೆ. ಉದಾಹರಣೆಗೆ, ಶ್ರೀ ಯತ್ನಾಳ್ ಅವರ ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಾ ಅದು ‘ಗುಳೆ ಜಿಲ್ಲೆ’ ಎನ್ನಿಸಿಕೊಂಡುಬಿಟ್ಟಿದೆ. ಯತ್ನಾಳರನ್ನು ಆಯ್ಕೆ ಮಾಡಿದ ‘ಮತದಾರ ಪ್ರಭುಗಳು’ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಕೆಲಸ ಅರಸುತ್ತಾ ಗೋವಾ, ಮಹಾರಾಷ್ಟ್ರದ ಕಡೆಗೆ ಗುಳೆ ಹೋಗುವುದು ದಿನೇದಿನೇ ಹೆಚ್ಚುತ್ತಿದೆ. ಅದೇ ವಿಜಯಪುರದಲ್ಲಿ ಒಂದು ದೊಡ್ಡದಾದ ಕೈಗಾರಿಕಾ ಪ್ರದೇಶವಿದೆ. ಆದರೆ, ಆ ಕೈಗಾರಿಕಾ ಪ್ರದೇಶವು ವಿದ್ಯುತ್ ಮತ್ತಿತರ ಮೂಲಸೌಲಭ್ಯಗಳಿಲ್ಲದೆ ನೊಣ ಹೊಡೆಯುತ್ತಿದೆ. ಇಂತಹ ಕಡೆ ಶಾಸಕನಾದವನು ಮಾತಾಡಲೂ ಪುರುಸೊತ್ತಿಲ್ಲದವನಂತೆ ಆ ಕೈಗಾರಿಕಾ ಕ್ಷೇತ್ರಕ್ಕೆ ವಿದ್ಯುತ್ ಮತ್ತಿತರ ಸೌಲಭ್ಯ ಕಲ್ಪಿಸಲು ಕಾರ್ಯಪ್ರವೃತ್ತನಾಗಿರಬೇಕಿತ್ತು. ಆದರೇನಾಗಿದೆ? ಜನಪ್ರತಿನಿಧಿಗಳು ಹೊಣೆಗೇಡಿಯಾಗಿದ್ದಾರೆ. ಜನಪ್ರತಿನಿಧಿಗಳನ್ನು ಎಚ್ಚರಿಸಬೇಕಿರುವ ಜನರು ಅವಜ್ಞೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವ ಪಕ್ಷದಲ್ಲೇ ಇರಲಿ ತಮ್ಮಂಥವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದು ತಪ್ಪಲ್ಲ ಎಂದುಕೊಂಡಿದ್ದೇನೆ.

ತುಂಬಾ ಹೆಚ್ಚಾಗಿ ಬರೆದುಬಿಟ್ಟೆ. ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿಕೊಂಡಾಗ ಅವೂ ಕೆಡಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ನನ್ನೊಳಗೆ ಸುಳಿದಾಡಿತು. ಅದಕ್ಕಾಗಿ ಈ ಪತ್ರ. ಕ್ಷಮೆ ಇರಲಿ.

ನಿಮ್ಮ ವಿಶ್ವಾಸಿ

ದೇವನೂರ ಮಹಾದೇವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...