Homeಕರ್ನಾಟಕಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಪ್ರಕರಣ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಪ್ರಕರಣ: ಮೃತರ ಸಂಖ್ಯೆ 13ಕ್ಕೆ ಏರಿಕೆ

- Advertisement -
- Advertisement -

ಬೆಂಗಳೂರಿನ ಅತ್ತಿಬೆಲೆ ಬಳಿ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಪಟಾಕಿಗಳ ಸ್ಫೋಟ ನಡೆದ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ  ತೆರಳಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಲಾಜಿ ಕ್ರಾಕರ್ಸ್ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕ್ಯಾಂಟರ್‌ನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಬೆಂಕಿ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸುಮಾರು ಇಪ್ಪತ್ತು ಮಂದಿ ಕಾರ್ಮಿಕರು ಘಟನೆ ನಡೆಯುವ ವೇಳೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಎಲ್ಲರೂ ತಮಿಳುನಾಡು ಮೂಲದ ಕಾರ್ಮಿಕರು ಎಂಬ ಬಗ್ಗೆ ಮಾಹಿತಿ ಇದೆ. ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಘಟನೆ ಹೇಗಾಯಿತು? ಏನೆಲ್ಲಾ ಲೋಪ ಇದೆ ಎಂಬುವುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಗೋಡೌನ್‌ಗೆ ಪರ್ಮಿಷನ್ ಇರಲಿಲ್ಲ. ಅಂಗಡಿಗೆ ಪರ್ಮಿಷನ್ ಇತ್ತು ಎಂಬ ಮಾಹಿತಿ ಇದೆ. ಸದ್ಯ ಇದರ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್‌ ಅವರು ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು  ಹೇಳಿದ ಡಿಕೆ ಶಿವಕುಮಾರ್, ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಟಾಕಿ ಅಂಗಡಿಗಳು, ಗೋಡೌನ್ ಗಳಲ್ಲಿ ಅಗ್ನಿ ಅನಾಹುತ ನಿಯಂತ್ರಣ ನಿಯಮಗಳ ಪಾಲನೆ ಬಗ್ಗೆ ಮುಂಜಾಗರೂಕತೆಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರ: ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...