Homeಮುಖಪುಟವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

- Advertisement -
- Advertisement -

“ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಪಡೆದವರಿಗೆ ಶುಭಾಶಯಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ, ಸ್ವಯಂಸೇವಕರ ಶ್ರಮ, ಸಮರ್ಪಣೆಗೆ ನನ್ನ ಕೃತಜ್ಞತೆಗಳು. ನಾವು ಫಲಿತಾಂಶದಿಂದ ಪಾಠ ಕಲಿಯುತ್ತೇವೆ. ದೇಶದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ” ಎಂದು ಪಂಚರಾಜ್ಯಗಳ ಚುನಾವಣೆಯ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಈ ಹಿಂದೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸೋತಾಗಲೂ ಕಾಂಗ್ರೆಸ್ ನಾಯಕರು ಇದೇ ಮಾತನ್ನು ಆಡಿದ್ದರು. ಮತ್ತೆ ಮತ್ತೆ ಇದೇ ಹೇಳಿಕೆ ಪುನರಾವರ್ತನೆಯಾಗುತ್ತಲೇ ಇದೆ.

ಪಂಜಾಬ್‌ನಲ್ಲಿ ಇದ್ದ ಅಧಿಕಾರವನ್ನೂ ಕಳೆದುಕೊಂಡಿರುವ ಕಾಂಗ್ರೆಸ್‌, ಉತ್ತರ ಪ್ರದೇಶದಲ್ಲಿ ಹೀನಾಯ ಸೋಲುಂಡಿದೆ. ಮಣಿಪುರ, ಉತ್ತರಖಾಂಡ್, ಗೋವಾ ರಾಜ್ಯಗಳಲ್ಲಿಯೂ ಸೋತು ಮುಖಭಂಗ ಅನುಭವಿಸಿದೆ. ಉತ್ತರ ಪ್ರದೇಶದಂತಹ ಬೃಹತ್‌ ರಾಜ್ಯದಲ್ಲಿ ಕಾಂಗ್ರೆಸ್ ಇಷ್ಟು ಕಳಪೆ ಪ್ರದರ್ಶನ ನೀಡಿದ್ದೇಕೆ? ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಾರ್ಟಿ ಗೆದ್ದಿದ್ದು ಹೇಗೆ? ಪಂಚ ರಾಜ್ಯಗಳ ಚುನಾವಣೆಯಿಂದ ಕಾಂಗ್ರೆಸ್ ಏನಾದರೂ ಹೊಸ ಪಾಠವನ್ನು ಕಲಿಯುವುದೇ? ಮುಂಬರುವ ದಿನಗಳಲ್ಲಿ ಕರ್ನಾಟಕ, ಗುಜರಾತ್‌ ರಾಜ್ಯಗಳು ಚುನಾವಣೆಯನ್ನು ಇದುರಿಸಲಿದ್ದು, ಕಾಂಗ್ರೆಸ್‌ ಯಾವ ನಿಟ್ಟಿನಲ್ಲಿ ಹೆಜ್ಜೆ ಇಡಬೇಕಿದೆ? ಅರವತ್ತು ವರ್ಷ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಪಕ್ಷವು ಈಗ ಚುನಾವಣಾ ರಾಜಕಾರಣವನ್ನು ಅರ್ಥ ಮಾಡಿಕೊಳ್ಳುವಲ್ಲಿ ಎಡವುತ್ತಿದೆಯೇ?

“ನಾಗರಿಕ ಸಮಾಜ ಮುನ್ನಲೆಗೆ ತರುತ್ತಿರುವ ವಿಷಯಗಳು ಯಾವುದೇ ರಾಜಕೀಯ ಪಕ್ಷಗಳಿಗೆ ಮುಖ್ಯವಾಗಿ ಕಂಡೇ ಇಲ್ಲ” ಎನ್ನುತ್ತಾರೆ ರಾಜಕೀಯ ವಿಶ್ಲೇಷಕ, ಚಿಂತಕ ಕೆ.ಪಿ.ಸುರೇಶ್.

“ಸತತವಾಗಿ ಕೋಮುವಾದ, ನಿರುದ್ಯೋಗದ ಬಗ್ಗೆ ಚುನಾವಣಾ ರಾಜಕಾರಣದ ಆಚೆಗಿರುವವರು ಮಾತನಾಡುತ್ತಲೇ ಇದ್ದೇವೆ. ಈ ವಿಷಯಗಳ ಕುರಿತು ಒಂದೆರಡು ಪೋಸ್ಟರ್‌ ಹಾಗೂ ಭಾಷಣ ಮಾಡಿದರೆ ಆಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಂಡಿಲ್ಲ” ಎನ್ನುತ್ತಾರೆ ಸುರೇಶ್.

ಇದನ್ನೂ ಓದಿರಿ: Uttarakhand Election Results | ಉತ್ತರಾಖಂಡ ಮತ್ತೆ ಬಿಜೆಪಿಗೆ; ಕಾಂಗ್ರೆಸ್ ತುಸು ಚೇತರಿಕೆ

ಮುಂದುವರಿದು, “ಕೋಮುವಾದ ಈ ದೇಶದ ಯಾವುದೇ ಪಕ್ಷಕ್ಕೂ ಆತಂಕಕಾರಿ ವಿಷಯವಾಗಿಲ್ಲ. ಆದರೆ ಸಂವಿಧಾನದ ಆಶಯಗಳ ಬಗ್ಗೆ ನಂಬಿಕೆ ಇರುವವರಿಗೆ ಮಾತ್ರ ಈ ಆತಂಕ ಕಾಡುತ್ತಿದೆ. ದಲಿತ ಸಂಘಟನೆಗಳು ಕೋಮುವಾದದ ಬಗ್ಗೆ ದೊಡ್ಡ ಮಟ್ಟದಲ್ಲಿ ಬೀದಿಗಿಳಿಯುತ್ತಿಲ್ಲ. ನಾಮಕಾವಸ್ಥೆಗೆ ಒಂದೆರಡು ಸ್ಟೇಟ್‌ಮೆಂಟ್ ಕೊಡಬಹುದಷ್ಟೇ. ಶೇ. 22ರಷ್ಟಿದ್ದ ಬಿಎಸ್‌ಪಿ ಮತಗಳು ಶೇ. 12ಕ್ಕೆ ಇಳಿಯುತ್ತದೆ ಎಂದರೆ, ಆ ಮತಗಳು ಎಲ್ಲಿಗೆ ಹೋಗಿರಬಹುದು? ಎಸ್‌ಪಿಗಂತೂ ಹೋಗಲು ಸಾಧ್ಯವಿಲ್ಲ. ಯಾಕೆಂದರೆ ಎಸ್‌ಪಿ ಹಾಗೂ ಬಿಎಸ್‌ಪಿಗೆ ಭೀಕರವಾದ ವೈರತ್ವವಿದೆ. ಎಸ್‌ಪಿ ಅಧಿಕಾರದಲ್ಲಿದ್ದಾಗ ಆದ ನೋವುಗಳನ್ನು ಮತ್ತೆ ಮತ್ತೆ ನೆನಪಿಸುವ ಕೆಲಸವನ್ನು ಬಿಜೆಪಿ ಈ ಚುನಾವಣೆಯಲ್ಲಿ ಮಾಡಿತು” ಎಂದು ವಿಶ್ಲೇಷಿಸಿದರು.

“ರೈತ ಚಳವಳಿ ನಡೆದಾಗ ರೈತರ ಜೊತೆಗೆ ಪ್ರತಿಪಕ್ಷಗಳು ನಿಲ್ಲಲಿಲ್ಲ. ಉದಾಹರಣೆಗೆ ಮೈಸೂರಿನ ರಂಗಾಯಣದಲ್ಲಿ ನಡೆಯುತ್ತಿರುವ ಘಟನೆಗಳನ್ನೇ ನೋಡಿ. ಇಲ್ಲಿನ ನಿರ್ದೇಶಕರಾದ ಅಡ್ಡಡ್ಡ ಸಿ.ಕಾರ್ಯಪ್ಪನವರ ಕೋಮುವಾದಿ ಕಾರ್ಯಸೂಚಿಗೆ ಬೆಂಬಲವಾಗಿ ಬಿಜೆಪಿಯ ಸಣ್ಣಸಣ್ಣ ವಿಭಾಗಗಳೂ ನಿಲ್ಲುತ್ತವೆ. ಕೋಮುವಾದಿ ರಾಜಕಾರಣ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದರೆ ಕಾಂಗ್ರೆಸ್‌ನ ಒಬ್ಬ ನಾಯಕನೂ ಬರುವುದಿಲ್ಲ. ಈ ವಿಷಯದಲ್ಲಿ ನಾವೇಕೆ ಗುರುತಿಸಿಕೊಳ್ಳಬೇಕೆಂದು ದೂರ ಉಳಿಯುತ್ತಾರೆ” ಎಂದು ವಿಷಾದಿಸಿದರು.

“ಕರ್ನಾಟಕದಲ್ಲಿನ ಜೆಡಿಎಸ್‌ನಂತೆ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಕೆಲಸ ಮಾಡುತ್ತಿದೆ. ಜೆಡಿಎಸ್‌ಗೆ ಕಾಂಗ್ರೆಸ್ ವೈರಿಯಾದರೆ, ಬಿಎಸ್‌ಪಿಗೆ ನೇರವಾಗಿ ಸಿಟ್ಟಿರುವುದು ಸ್ಥಳೀಯ ರಾಜಕೀಯ ಪಕ್ಷವಾದ ಎಸ್‌ಪಿ ಮೇಲೆ. ಪ್ರಾದೇಶಿಕ ರಾಜಕೀಯ ಪಕ್ಷಗಳೆಲ್ಲವೂ ಹೀಗೆಯೇ ವರ್ತಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವು ಯುವಕರನ್ನು ಪಕ್ಷ ಕಟ್ಟುವ ಕೆಲಸಕ್ಕೆ ನೇಮಿಸಿಕೊಳ್ಳುವ ಅಗತ್ಯವಿದೆ” ಎಂದರು.

ಜಾತಿ ಸಮೀಕರಣ, ಸಂಪನ್ಮೂಲಗಳ ಕ್ರೋಢೀಕರಣ ಚುನಾವಣೆಗೆ ಅಗತ್ಯ: ಸಿ.ಎಸ್.ದ್ವಾರಕನಾಥ್‌

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಸಿ.ಎಸ್.ದ್ವಾರಕನಾಥ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸೋಲಿನ ಪರಾಮರ್ಶೆ ಮಾಡಿದರು. “ಕಾಂಗ್ರೆಸ್ ಪಕ್ಷ ಅಸಂಘಟಿತ ಸಮುದಾಯಗಳ ಮೇಲೆ ಗಮನ ಹರಿಸಬೇಕಿದೆ. ಉತ್ತರ ಪ್ರದೇಶದಲ್ಲಿ ಅತಿ ಹಿಂದುಳಿದ ವರ್ಗಗಳನ್ನು ಬಿಜೆಪಿ ಬಹಳ ಗಂಭೀರವಾಗಿ ಪರಿಗಣಿಸಿತು. ಕಾಂಗ್ರೆಸ್‌ ಆ ಕಡೆ ಗಮನ ಹರಿಸಲಿಲ್ಲ. ಅತಿ ಹಿಂದುಳಿದ ವರ್ಗಗಳು ಶೇ. 12ರಷ್ಟಿದ್ದಾರೆ. ಈ ಸಮುದಾಯದ ಅರ್ಧದಷ್ಟು ಮತಗಳು ಬಂದರೆ ಸಾಕಲ್ಲವೇ? ಈ ಸತ್ಯವನ್ನು ಕಾಂಗ್ರೆಸ್ ತಿಳಿದುಕೊಳ್ಳಲಿಲ್ಲ” ಎಂದು ಹೇಳಿದರು.

“ಅತಿ ಹಿಂದುಳಿದ ವರ್ಗಗಳನ್ನು ಗಂಭೀರವಾಗಿ ಪರಿಗಣಿಸುವ ರಾಜಕಾರಣವನ್ನು ಕಾನ್ಶೀರಾಮ್‌ ಅವರು ಮಾಡಿದ್ದರು. ಅದನ್ನು ಬಿಜೆಪಿ ಮುಂದುವರಿಸಿತು. ಈ ವಿಷಯವನ್ನು ಕಾಂಗ್ರೆಸ್‌ ಗಮನಿಸಲಿಲ್ಲ. ಇವತ್ತಿನ ಸೋಲಿಗೆ ಈ ವರ್ಗವನ್ನು ಕಡೆಗಣಿಸಿದ್ದೂ ಒಂದು ಕಾರಣವಾದರೆ, ನಾವು ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಬಗ್ಗೆ ಮಾತನಾಡಿದರೂ, ಅಭಿವೃದ್ಧಿ ಮಾಡಿದರೂ ಅದನ್ನು ಜನ ಗಮನಿಸುವುದಿಲ್ಲ. ಕೋಮುವಾದವನ್ನು ಪ್ರಚೋದಿಸಿದರೆ ಸಾಕು, ನಿಮ್ಮ ಸಾವಿರಾರು ಕೋಟಿ ಅಭಿವೃದ್ಧಿ ನೀರುಪಾಲಾಗುತ್ತದೆ” ಎಂದು ದ್ವಾರಕನಾಥ್‌ ವಿಷಾದಿಸಿದರು.

ಇದನ್ನೂ ಓದಿರಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ಪಂಜಾಬ್‌ ಫಲಿತಾಂಶದ ಕುರಿತು ಮಾತನಾಡಿದ ಅವರು, “ಪಂಜಾಬ್‌ನಲ್ಲಿ ಸ್ವಯಂಕೃತ ಅಪರಾಧ ಮಾಡಿದ್ದೇವೆ. ಚುನಾವಣೆ ಬಂದಿದೆ ಎನ್ನುವಾಗ ಮುಖ್ಯಮಂತ್ರಿಯನ್ನು ಬದಲಾಯಿಸಲಾಯಿತು. ದಲಿತ ಮುಖ್ಯಮಂತ್ರಿ ಪ್ರಯೋಗ ಯಶಸ್ಸು ತರಲಿಲ್ಲ. ನವಜೋತ್‌ ಸಿಂಗ್ ಸಿಧು ಹಾಗೂ ಅಮರಿಂದರ್‌ ಸಿಂಗ್‌ ನಡುವಿನ ಕಿತ್ತಾಟ ಹೆಚ್ಚಾಗಿ ಪಕ್ಷ ಒಡೆದು ಹೋಯಿತು. ಜೊತೆಗೆ ಎಎಪಿ ಮೊದಲಿನಿಂದಲೂ ಪಂಜಾಬ್‌ ಮೇಲೆ ಗಮನ ಹರಿಸಿತ್ತು. ಹೀಗಾಗಿ ಗೆಲುವು ಪಡೆಯಿತು” ಎಂದರು.

ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬರುವ ಚುನಾವಣೆಗೆ ಕಾಂಗ್ರೆಸ್ ಇಡಬೇಕಾಗಿರುವ ಹೆಜ್ಜೆಯ ಕುರಿತು ವಿವರಿಸಿದ ಅವರು, “ಬಿಜೆಪಿ ಒಂದು ಸಾವನ್ನಿಟ್ಟುಕೊಂಡು ರಾಜಕಾರಣ ಮಾಡಿಬಿಡುತ್ತದೆ. ಆದರೆ ಕಾಂಗ್ರೆಸ್‌ ಅಭಿವೃದ್ಧಿ ಬಗ್ಗೆ ಮಾತನಾಡುತ್ತದೆ. ಜನ ಅಭಿವೃದ್ಧಿ ಬಗ್ಗೆ ಯೋಚಿಸುವುದಿಲ್ಲ. ಬೆಲೆ ಏರಿಕೆ ಬಗ್ಗೆ ಮಾತನಾಡಿದರೂ ಅದರ ಬಗ್ಗೆ ಜನ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಪರಿಸ್ಥಿತಿಯಲ್ಲಿದ್ದೇವೆ ನಾವಿದ್ದೇವೆ. ಈ ಸಂದರ್ಭದಲ್ಲಿ ಅಸಂಘಟಿತ ಸಮುದಾಯಗಳ ಮೇಲೆ ನಾವು ಗಮನ ಹರಿಸಬೇಕಿದೆ. ನನ್ನ ಪ್ರಕಾರ ಚುನಾವಣೆ ಎಂದರೆ ಜಾತಿಗಳ ಸಮೀಕರಣ ಮತ್ತು ಸಂಪನ್ಮೂಲಗಳ ಕ್ರೋಢೀಕರಣ. ಈ ಎರಡೂ ಸರಿಯಾಗಿ ಆಗಬೇಕಿದೆ. ಕಾಂಗ್ರೆಸ್‌ನವರೂ ಕೋಮುವಾದಿ ಹೇಳಿಕೆಗಳನ್ನು ನೀಡಬೇಕೆಂದು ಹೇಳುತ್ತಿಲ್ಲ. ಆದರೆ ಸಮುದಾಯಗಳಿಗೆ ಸರಿಯಾದ ಶಿಕ್ಷಣವನ್ನು ನೀಡಬೇಕು. ಬಿಜೆಪಿಯವರು ಮಾಡುತ್ತಿರುವುದೇನು? ಹೇಗೆ ಸುಳ್ಳುಗಳನ್ನು ಹೇಳುತ್ತಿದೆ? ಹಿಂದುಳಿದ ವರ್ಗಗಳನ್ನು ಹೇಗೆ ಪ್ರಚೋದನೆ ಮಾಡುತ್ತಿದೆ ಎಂಬುದನ್ನು ನಾವು ಸರಿಯಾಗಿ ಮನವರಿಕೆ ಮಾಡಿಕೊಡಬೇಕಿದೆ. ನಮಗಿರುವುದು ಇದೊಂದು ಮಾರ್ಗ” ಎಂದು ಅಭಿಪ್ರಾಯಪಟ್ಟರು.

ಪರ್ಯಾಯ ಮಾಧ್ಯಮಗಳನ್ನು ಬೆಳೆಸಬೇಕಿದೆ: ಸೂರ್ಯ ಮುಕುಂದರಾಜ್‌

ಕಾಂಗ್ರೆಸ್‌ ಮುಖಂಡರಾದ ಸೂರ್ಯ ಮುಕುಂದರಾಜ್ ಮಾತನಾಡಿ, “ಪಂಜಾಬ್‌ನಲ್ಲಿ ಮಾತ್ರ ನಮ್ಮ ಅಧಿಕಾರವಿತ್ತು. ಗೋವಾ ಹಾಗೂ ಉತ್ತರಖಾಂಡ್‌ನಲ್ಲಿ ನಮ್ಮ ಶಾಸಕರನ್ನೇ ಸೆಳೆದುಕೊಂಡು ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಲಖಿಂಪುರ್‌ಖೇರಿ ಹತ್ಯಾಕಾಂಡ, ಕೋವಿಡ್ ನಿರ್ವಹಣೆ ವೈಫಲ್ಯ ಹಾಗೂ ರೈತ ಚಳವಳಿಯನ್ನು ಜನ ಪರಿಗಣನೆಗೆ ತೆಗೆದುಕೊಳ್ಳುತ್ತಾರೆಂದು ಭಾವಿಸಿದ್ದೆವು. ಬೆಲೆ ಏರಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದನ್ನು ಜನರು ತೋರಿಸಿಕೊಟ್ಟಿದ್ದಾರೆ. ನಮ್ಮ ತಪ್ಪುಗಳಿಂದಾಗಿ ಪಂಜಾಬ್‌ ಕಳೆದುಕೊಂಡಿದ್ದೇವೆ. ಮತ್ತೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಸೈದ್ಧಾಂತಿಕವಾಗಿ ಪಕ್ಷವನ್ನು ಗಟ್ಟಿ ಮಾಡಬೇಕಿದೆ. ಯುವ ತಲೆಮಾರಿಗೆ ಟಿಕೆಟ್ ಕೊಡಬೇಕಿದೆ. ಇಲ್ಲವಾದರೆ ಕಾಂಗ್ರೆಸ್ ಸಿದ್ಧಾಂತ ಹೊಸ ತಲೆಮಾರುಗಳಿಗೆ ದಾಟುವುದೇ ಇಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.

“ಅನೇಕ ವಿಷಯಗಳಲ್ಲಿ ಚದುರಿ ಹೋಗುವ ಬದಲು ಒಂದು ವಿಚಾರದ ಮೇಲೆ ಕಾಂಗ್ರೆಸ್ ಗಮನ ಹರಿಸಬೇಕು. ಮಾಧ್ಯಮಗಳು ನಮ್ಮ ಪರವಾಗಿಲ್ಲ ಎಂದು ದೂಷಿಸುವ ಬದಲು ಜಾತ್ಯತೀತ ಆಲೋಚನೆ ಇರುವ ಮಾಧ್ಯಮಗಳನ್ನು ಬೆಳೆಸಬೇಕು. ಬಿಜೆಪಿ ಆಸ್ತಿ ಐದು ಸಾವಿರ ಕೋಟಿ ರೂ. ಇದೆ. ಕಾಂಗ್ರೆಸ್ ಆಸ್ತಿ 600 ಕೋಟಿ ರೂ. ಮಾತ್ರ ಇದೆ. ಬಿಜೆಪಿ ತನ್ನ ಪೂರ್ಣಾವಧಿ ಕಾರ್ಯಕರ್ತರಿಗೆ ಸಂಬಳ ಕೊಡುತ್ತಿದೆ. ಉಳಿದುಕೊಳ್ಳಲು ವಸತಿ ವ್ಯವಸ್ಥೆ ಮಾಡುತ್ತದೆ. ದಿನದ ಇಪತ್ತುನಾಲ್ಕು ಗಂಟೆಯೂ ರಾಜಕಾರಣದ ಬಗ್ಗೆಯೇ ಯೋಜನೆ ಮಾಡುತ್ತದೆ. ಬಿಜೆಪಿ ಒಂದು ಕಾರ್ಪೊರೇಟಸ್‌ ಸಂಸ್ಥೆಯಾಗಿ ಬೆಳೆದಿದೆ. ಬಿಜೆಪಿ ಜೊತೆಗೆ ಅದರ ಮೂವತ್ತು ಅಂಗ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಇದನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಕಾಂಗ್ರೆಸ್ ಬಿಟ್ಟು ಬೇರೆ ಅಂಗಸಂಸ್ಥೆಗಳಿಲ್ಲ. ಪ್ರಗತಿಪರ ಸಂಘಟನೆಗಳಿಗೆ ಕಾಂಗ್ರೆಸ್‌ ಶಕ್ತಿ ತುಂಬಬೇಕು. ಆಗ ಮಾತ್ರ ಪಕ್ಷ ಮರುಹುಟ್ಟು ಪಡೆಯಬಹುದು” ಎಂದು ವಿವರಿಸಿದರು.


ಇದನ್ನೂ ಓದಿರಿ: Goa Election Results | ಗೋವಾ ಅತಂತ್ರ; ಆದರೆ ಬಿಜೆಪಿಗೆ ಸುಲಭದ ತುತ್ತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಬರೀ ಕೊಮುವಾದಾನ್ನುತ್ತೀರಲ್ಲ ಎಲ್ಲಿದೆ ಕೋಮುವಾದ ಅದರ ಅರ್ಥವೇ ನಿಮಗೆ ಗೊತ್ತಿಲ್ಲ ಕಾಶ್ಮಿರದಲ್ಲಿ ಸಂಪೂರ್ಣ ಪಂಡಿತರನ್ನು ಸರ್ವನಾಶ ಮಾಡಿದವರು ಯಾರು. ದೇಶದಲ್ಲಿ ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ಮಾಡತ್ತಿರವರು ಈ ಬಗ್ಗೆ ನೀವು ಮೊದಲು ಯೋಚಿಸಿರಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...