Homeಕರ್ನಾಟಕಭಾನುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಆನಂದ್‌ ಸಿಂಗ್‌?

ಭಾನುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಆನಂದ್‌ ಸಿಂಗ್‌?

- Advertisement -
- Advertisement -

ರಾಜ್ಯದಲ್ಲಿ ಹೊಸದಾಗಿ ರಚನೆಯಾದ ಸಚಿವ ಸಂಪುಟದಲ್ಲಿ ತಮಗೆ ನೀಡಲಾಗಿರುವ ಖಾತೆಗಳ ವಿಚಾರದಲ್ಲಿ ಹಲವರ ಭಿನ್ನಾಭಿಪ್ರಾಯ ಇನ್ನೂ ಬಗೆಹರಿದಿಲ್ಲ. ಈ ಪೈಕಿ ಸಚಿವ ಆನಂದ್‌ ಸಿಂಗ್‌ ತಮ್ಮ ಖಾತೆ ಬದಲಿಸಿಕೊಡುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಸಿಎಂ ಬೊಮ್ಮಾಯಿ ಇದಕ್ಕೆ ಮಣೆ ಹಾಕದ ಕಾರಣ, ನಾಳೆ ತಮ್ಮ ಸಚಿವ ಸ್ಥಾನಕ್ಕೆ ಆನಂದ್‌ ಸಿಂಗ್‌ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾತ್ರವಲ್ಲದೆ, ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇದನ್ನೂ ಓದಿ: ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ನಾಳೆ ಸ್ವಾತಂತ್ರ್ಯ ದಿನಾಚರಣೆ ಇರುವುದರಿಂದ ಹೊಸದಾಗಿ ಜಿಲ್ಲೆಯಾಗಿರುವ ವಿಜಯನಗರದ ಕೇಂದ್ರ ಹೊಸಪೇಟೆಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಅವರು ಬೆಂಗಳೂರಿಗೆ ತೆರಳಲಿದ್ದು, ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದ್ದಾರೆ.

ಭೇಟಿಯ ನಂತರ, ಬೊಮ್ಮಾಯಿ ಅವರು ಖಾತೆ ಬದಲಿಸಲು ಒಪ್ಪದಿದ್ದರೆ, ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಆನಂದ್ ಸಿಂಗ್ ಸಚಿವರಾದ ಬಳಿಕ ಇದುವರೆಗೂ ವಿಧಾನಸಭೆಗೆ ಕಾಲಿಟ್ಟಿಲ್ಲ. ಅಲ್ಲದೇ, ವಿಜಯ ನಗರದಲ್ಲಿರುವ ತಮ್ಮ ಶಾಸಕರ ಕಚೇರಿಯನ್ನು ಖಾಲಿ ಮಾಡಿದ್ದು, ಅವರ ಶಾಸಕ ಕಚೇರಿ ಎಂಬ ಬೋರ್ಡನ್ನು ತೆರವುಗೊಳಸಲಾಗಿದೆ. ಜೊತೆಗೆ ಇಲ್ಲಿ ಶಾಸಕರು ಲಭ್ಯವಿಲ್ಲ ಎಂಬ ಬೋರ್ಡ್‌ ಸಹ ಹಾಕಲಾಗಿದೆ.

ಕಾಂಗ್ರೆಸ್‌ಗೆ ಕೈಕೊಟ್ಟು ಬಿಜೆಪಿಗೆ ಸೇರಿದ ಬಳಿಕ ಸಚಿವ ಸ್ಥಾನವನ್ನು ಪಡೆದುಕೊಂಡಿರುವ ಆನಂದ್ ಸಿಂಗ್‌ ಅವರು ಸಚಿವ ಸ್ಥಾನದ ವಿಚಾರದಲ್ಲಿ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟ; ಬಿಡಿ ಚಿತ್ರಗಳಲ್ಲಿ ಸಿಗುವ ಪೂರ್ಣ ಚಿತ್ರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...