Homeಮುಖಪುಟಬಾಂಗ್ಲಾ ಪ್ರಜೆಗಳಿಗೆ ನಿವಾಸಿ ಪ್ರಮಾಣಪತ್ರ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ ಬಂಧನ

ಬಾಂಗ್ಲಾ ಪ್ರಜೆಗಳಿಗೆ ನಿವಾಸಿ ಪ್ರಮಾಣಪತ್ರ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ ಬಂಧನ

- Advertisement -
- Advertisement -

ಬಾಂಗ್ಲಾದೇಶದ ಪ್ರಜೆಗಳಿಗೆ ನಿವಾಸಿ ಪ್ರಮಾಣಪತ್ರಗಳನ್ನು ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್‌ರನ್ನು ಬಂಧಿಸಲಾಗಿದೆ. ಇದು ಮತದಾರರ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಸಾ ಅವಧಿ ಮುಗಿದಿದ್ದರೂ ಬಾಂಗ್ಲಾದೇಶದ ನಯಾನ್ ಸರ್ಕಾರ್ ಮತ್ತು ಅವರ ಕುಟುಂಬ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ನಿವಾಸಿ ಪ್ರಮಾಣಪತ್ರಗಳನ್ನು ನೀಡಿದ್ದರು. ಈ ನಿವಾಸಿ ಪ್ರಮಾಣಪತ್ರಗಳು ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಸಹಾಯ ಮಾಡಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್

ಸರಿಯಾದ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವಾಸ್ತವ್ಯ ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್‌ರನ್ನೂ ಕೂಡ ಬಂಧಿಸಲಾಗಿದೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶಿಗರು ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿದ್ದರೆ, ಆ ಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿ ಮಾಡಿದ್ದಾರೆ. ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದೂ ಅವರು ಭರವಸೆ ನೋಡಿದ್ದಾರೆ. ಪೊಲೀಸರು ದೂರವಾಣಿ ಸಂಖ್ಯೆ ಮತ್ತು ಈ-ಮೇಲ್ ಐಡಿ ನೀಡಿ ಮಾಹಿತಿ ನೀಡಲು ಕೋರಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅಕ್ರಮವಾಗಿ ವಲಸೆ ಬಂದವರನ್ನು ಕಳೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...