Homeಕರ್ನಾಟಕ'ಅಂದವಾದ' ಕ್ಯೂಟ್ ಪ್ರೇಮಕಥೆಯ ಟ್ರೇಲರ್ ಬಿಡುಗಡೆ: ಇದೇ 25ಕ್ಕೆ ಚಿತ್ರ ತೆರೆಗೆ

‘ಅಂದವಾದ’ ಕ್ಯೂಟ್ ಪ್ರೇಮಕಥೆಯ ಟ್ರೇಲರ್ ಬಿಡುಗಡೆ: ಇದೇ 25ಕ್ಕೆ ಚಿತ್ರ ತೆರೆಗೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ಹೊಸಬರ ಚಿತ್ರಗಳು ಹೆಚ್ಚು ಹೆಚ್ಚು ತೆರೆಗೆ ಬರ್ತಿವೆ. ಡಿಫರೆಂಟ್ ಕಥೆ, ಸಿನಿಮಾಟೋಗ್ರಫಿ, ಸಂಕಲನ, ಛಾಯಾಚಿತ್ರ, ನಟನೆ, ಕ್ಯಾಮರಾ, ಸಂಗೀತಗಳ ಮೂಲಕ ಯುವ ಜನತೆಯ ಮನಸ್ಸಿಗೆ ಲಗ್ಗೆಯಿಡುತ್ತಿವೆ. ಈಗ ವಿಭಿನ್ನ ಕಥಾಹಂದರ ಹೊಂದಿರುವ ‘ಅಂದವಾದ’ ಲವ್ ಸ್ಟೋರಿ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದ ಹೆಸರೇ ಹೇಳುವಂತೆ ‘ಅಂದವಾದ’ ಟ್ರೇಲರ್ ಬಿಡುಗಡೆಯಾಗಿದ್ದು, ಮುದ್ದು ಮುದ್ದು ಫೀಲ್ ಕೊಡುತ್ತೆ.

ಮಳೆ ಮತ್ತು ಮಂಜಿನ ವಾತಾವರಣದಲ್ಲಿ ಚಿತ್ರೀಕರಣ ಮಾಡಲಾಗಿದೆ. ಮಲೆನಾಡಿನ ವಿವಿಧ ಭಾಗಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಚಿತ್ರದ ನಾಯಕ, ನಾಯಕಿಯನ್ನು ಚೆಂದವಾಗಿ ತೋರಿಸಲಾಗಿದೆ. ಹೊಸ ನಿರ್ದೇಶಕ ಮತ್ತು ನಟರು ಸೇರಿ ‘ಅಂದವಾದ’ ಚಿತ್ರ ನಿರ್ಮಿಸಿದ್ದು, ಗುರುಕಿರಣ್​ ಯೂಟ್ಯೂಬ್​ ಚಾನೆಲ್​ ನಲ್ಲಿ ಬಿಡುಗಡೆಯಾದ ಟ್ರೇಲರ್ ಹೊಸ ಭರವಸೆ ಮೂಡಿಸಿದೆ.

‘ಅಂದವಾದ’ ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 5 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಚಿತ್ರದ ನಿರೂಪಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಟ್ರೇಲರ್ ನಲ್ಲಿ ನಾಯಕ, ನಾಯಕಿಯ ಪ್ರೇಮಕಥನ ಅನುರಣಿಸುತ್ತದೆ. ಪ್ರೇಮ ಸನ್ನಿವೇಶ, ಮೌನ ಸಂಭಾಷಣೆ ನೋಡುಗರನ್ನು ಸೆಳೆಯುತ್ತದೆ. ಒಟ್ನಲ್ಲಿ ಚಿತ್ರವು ಯುವ ಮನಸ್ಸುಗಳಿಗೆ ಮುದ ನೀಡುತ್ತದೆ ಎಂಬುದನ್ನು ಟ್ರೇಲರ್ ಬಿಚ್ಚಿಡುತ್ತದೆ.

ಚಿತ್ರವನ್ನು ಚಲ ಎಂಬುವವರು ನಿರ್ದೇಶನ ಮಾಡಿದ್ದಾರೆ. ಮಧುಶ್ರೀ ಗೋಲ್ಡನ್​ ಫ್ರೇಮ್ಸ್​ ಸಂಸ್ಥೆಯು ಚಿತ್ರಕ್ಕೆ ಬಂಡವಾಳ ಹೂಡಿದೆ. ವಿಕ್ರಮ್​ ವರ್ಮನ್​ ರಾಗ ಸಂಯೋಜನೆ, ಜೈ ನಾಯಕ, ಅನುಷಾ ರಂಗನಾಥ್​ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶ್ರೀಧರ್​, ಹರೀಶ್​ ರೈ, ಅಮರ್​ ಸಲ್ವಾ ತಾರಾಗಣದಲ್ಲಿದ್ದಾರೆ. ಇದೇ 25ರಂದು ಚಿತ್ರ ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...