Homeಮುಖಪುಟಆಂಧ್ರ ವಿಧಾನಸಭೆ ಚುನಾವಣೆ: ಕಡಿಮೆ ಬೆಲೆಗೆ ಗುಣಮಟ್ಟದ ಮದ್ಯ ನೀಡುವ ಭರವಸೆ ಕೊಟ್ಟ ಚಂದ್ರಬಾಬು ನಾಯ್ಡು

ಆಂಧ್ರ ವಿಧಾನಸಭೆ ಚುನಾವಣೆ: ಕಡಿಮೆ ಬೆಲೆಗೆ ಗುಣಮಟ್ಟದ ಮದ್ಯ ನೀಡುವ ಭರವಸೆ ಕೊಟ್ಟ ಚಂದ್ರಬಾಬು ನಾಯ್ಡು

- Advertisement -
- Advertisement -

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಗೆ ಮುನ್ನ, ಮತದಾರರ ಓಲೈಕೆಗೆ ವಿಶಿಷ್ಟ ಭರವಸೆ ನೀಡಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು, ‘ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಮದ್ಯ’ ನೀಡುವ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರವಾದ ಕುಪ್ಪಂನಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ಚಂದ್ರಬಾಬು ನಾಯ್ಡು ಅವರು ಭರವಸೆ ನೀಡಿದರು.

“40 ದಿನಗಳ ನಂತರ (ಟಿಡಿಪಿ ಸರ್ಕಾರ ರಚನೆಯಾದ) ನಾನು ನಿಮಗೆ ಹೇಳುತ್ತಿದ್ದೇನೆ, ಗುಣಮಟ್ಟದ ಮದ್ಯ ಮಾತ್ರವಲ್ಲ, ಬೆಲೆಗಳನ್ನು ಕಡಿಮೆ ಮಾಡುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷವು ದಕ್ಷಿಣ ರಾಜ್ಯದಲ್ಲಿ ಮದ್ಯವನ್ನು ನಿಷೇಧಿಸುವ 2019ರ ಚುನಾವಣಾ ಭರವಸೆಯಿಂದ ಹಿಂದೆ ಸರಿದಿದ್ದಕ್ಕಾಗಿ ಅವರು ಈ ಹೇಳಿಕೆ ನೀಡಿದ್ದಾರೆ.

ಕುಪ್ಪಂನಲ್ಲಿ ತಮ್ಮ ಭಾಷಣದಲ್ಲಿ ಚಂದ್ರಬಾಬು ನಾಯ್ಡು ಅವರು, ಮದ್ಯದ ಬೆಲೆಯನ್ನು ಕಡಿತಗೊಳಿಸುವುದು ನಮ್ಮ ಕಿರಿಯ ಸಹೋದರರ ಬೇಡಿಕೆಯಾಗಿದೆ. ಮದ್ಯದ ದರಗಳು ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಗಳು ವಿಪರೀತವಾಗಿ ಏರಿವೆ, ಅವುಗಳು ಏರುತ್ತಲೇ ಇವೆ. ನಾನು ಮದ್ಯದ ಬಗ್ಗೆ ಹೇಳಿದಾಗ ನಮ್ಮ ಕಿರಿಯ ಸಹೋದರರು ಹುರಿದುಂಬಿಸುತ್ತಾರೆ. ಅವರು ಮದ್ಯದ ಬೆಲೆಯನ್ನು ಕಡಿಮೆ ಮಾಡಬೇಕೆಂದು ಬಯಸುತ್ತಾರೆ. ಅವರು ₹60 ರೂ.ನಿಂದ ₹100 ಮತ್ತು 2100 ಕ್ಕೆ ಏರಿಸಿದ್ದಾರೆ ಎಂದರು.

ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸರ್ಕಾರವು 2019-20ರಲ್ಲಿ ₹17,000 ಕೋಟಿಗಿಂತ ಹೆಚ್ಚು 2022-23 ರಲ್ಲಿ ಅಬಕಾರಿ ಆದಾಯದ ಮೂಲಕ ಸುಮಾರು ₹24,000 ಕೋಟಿ ಸಂಗ್ರಹಿಸಿದೆ. ಆಂಧ್ರಪ್ರದೇಶದಲ್ಲಿ ಸರ್ಕಾರಿ ಸ್ವಾಮ್ಯದ ಮಳಿಗೆಗಳ ಮೂಲಕ ಮದ್ಯ ಮಾರಾಟ ಮಾಡಲಾಗುತ್ತದೆ.

ಚಂದ್ರಬಾಬು ನಾಯ್ಡು ಅವರು ಹಲವು ಸಂದರ್ಭಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರವು ಕಳಪೆ ಗುಣಮಟ್ಟದ ಮದ್ಯವನ್ನು ಸರಬರಾಜು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ. ಬೆಲೆ ಏರಿಕೆಯಿಂದ ಲಾಭ ಗಳಿಸಿ ಸಾವಿರಾರು ಕೋಟಿ ರೂಪಾಯಿ ಸಂಪಾದಿಸಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ಬಿಜೆಪಿ-ಟಿಡಿಪಿ-ಜನಸೇನಾ ಪಕ್ಷವು ಆಂಧ್ರಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಬಿಜೆಪಿ ಆರು ಲೋಕಸಭೆ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಈ ಮಧ್ಯೆ ಟಿಡಿಪಿಗೆ 17 ಲೋಕಸಭೆ ಮತ್ತು 144 ವಿಧಾನಸಭೆ ಸ್ಥಾನಗಳನ್ನು ನೀಡಲಾಗಿದೆ. ಜನಸೇನಾ ಪಕ್ಷಕ್ಕೆ ಎರಡು ಲೋಕಸಭೆ ಮತ್ತು 21 ವಿಧಾನಸಭಾ ಕ್ಷೇತ್ರಗಳನ್ನು ನೀಡಲಾಗಿದೆ.

ಇದನ್ನೂ ಓದಿ; ಕರ್ನಾಟಕ-ಆಂಧ್ರ ಗಡಿ: ಜಿಲೆಟಿನ್ ಸ್ಟಿಕ್, ಡಿಟೋನೇಟರ್‌ ಸೇರಿದಂತೆ ಅಪಾರ ಪ್ರಮಾಣದ ಸ್ಫೋಟಕ ವಶಕ್ಕೆ ಪಡೆದ ರಾಜ್ಯ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...