Homeದಲಿತ್ ಫೈಲ್ಸ್ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

- Advertisement -
- Advertisement -

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ವಾಗ್ದಾಳಿ ನಡೆಸಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ನರಸಿಪಟ್ಟಣದಿಂದ ಏಳು ಬಾರಿ ಶಾಸಕರಾಗಿರುವ ಪ್ರಬಲ ಜಾತಿಯ (ಕೊಪ್ಪುಲ ವೆಲಮ) ನಾಯಕ ಅಯ್ಯಣ್ಣ, ತನ್ನ ಕಾಲು ತುಳಿದ ಕಾರಣಕ್ಕೆ ದಲಿತ ವ್ಯಕ್ತಿ (ಮಾದಿಗ ಜಾತಿ)ಗೆ ಕಪಾಳಮೋಕ್ಷ ಮಾಡಿದ್ದರು. ಆಕ್ರೋಶದ ನಂತರ ಮಾತನಾಡಿದ ದಲಿತ ವ್ಯಕ್ತಿ, “ಅಯ್ಯಣ್ಣನನ್ನು ಕ್ಷಮಿಸಿಬಿಡಿ, ತನ್ನ ಜಾತಿ ಗುರುತನ್ನು ಈ ವಿಷಯವನ್ನು ರಾಜಕೀಯಗೊಳಿಸಲು ಬಳಸಲಾಗುತ್ತಿದೆ” ಎಂದು ಹೇಳಿ ವೀಡಿ ಬಿಡುಗಡೆ ಮಾಡಿದ್ದರು.

“ನನ್ನ ಬಾಲ್ಯದಿಂದಲೂ ಅಯ್ಯಣ್ಣ ಪಾತ್ರುಡು ನನಗೆ ತಿಳಿದಿದೆ. ಶುಕ್ರವಾರ, ಅವರ ಗಾಯಗೊಂಡ ಕಾಲು ತುಳಿದಿದ್ದು ನನ್ನ ತಪ್ಪು. ಈ ವಿಷಯವನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ” ಎಂದು ಆ ವ್ಯಕ್ತಿ ಶನಿವಾರ ಏಪ್ರಿಲ್ 4 ರಂದು ಹೇಳಿದರು.

ಅಯ್ಯಣ್ಣ ಪಾತ್ರುಡು ಅಥವಾ ಟಿಡಿಪಿಯ ಯಾವುದೇ ನಾಯಕರಿಂದ ಈ ವಿಷಯದ ಬಗ್ಗೆ ಯಾವುದೇ ಸ್ಪಷ್ಟೀಕರಣ ಬಂದಿಲ್ಲ.

ಈ ಕುರಿತು ಮಾತನಾಡಿದ ವೈಎಸ್‌ಆರ್‌ಸಿಪಿ ವಕ್ತಾರ ಟಿಜೆಆರ್ ಸುಧಾಕರ್ ಬಾಬು, ಅಯ್ಯಣ್ಣ ಪಾತ್ರುಡು ಅವರ ಕಪಾಳಮೋಕ್ಷವು ಟಿಡಿಪಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಜಾತಿವಾದದ ಮತ್ತೊಂದು ಪುರಾವೆಯಾಗಿದೆ ಎಂದು ಹೇಳಿದರು.

“ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಲಾಗಿದೆ ಎಂದು ವೀಡಿಯೊ ಸ್ಪಷ್ಟವಾಗಿ ತೋರಿಸುತ್ತದೆ. ಇದಕ್ಕೆ ಹೆಚ್ಚುವರಿಯಾಗಿ, ಅವರು ಬಲಿಪಶುವನ್ನೇ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ. ಇದು ಅಧಿಕಾರದ ಸಂಪೂರ್ಣ ದುರುಪಯೋಗವಾಗಿದೆ. ಆದರ್ಶಪ್ರಾಯವಾಗಿ ಅಯ್ಯಣ್ಣ ಪಾತ್ರುಡು ಅವರೇ ಕ್ಷಮೆಯಾಚಿಸಬೇಕಿತ್ತು” ಎಂದು ಸುಧಾಕರ್ ಹೇಳಿದರು.

“ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ಘಟನೆಯನ್ನು ಗಮನಿಸಿ ಸ್ಪೀಕರ್ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಜಾತೀಯತೆಗೆ ಇರುವ ಏಕೈಕ ದೀರ್ಘಕಾಲೀನ ಪರಿಹಾರವೆಂದರೆ ಚಂದ್ರಬಾಬು ನಾಯ್ಡು ಇನ್ನು ಮುಂದೆ ಮುಖ್ಯಮಂತ್ರಿಯಾಗದಂತೆ ನೋಡಿಕೊಳ್ಳುವುದು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...