HomeಮುಖಪುಟNDA ಸೇರೋ ವಿಚಾರಕ್ಕೆ ಮತ್ತೆ ಪುಷ್ಠಿ ಕೊಟ್ಟ ಜಗನ್-ಮೋದಿ ಭೇಟಿ

NDA ಸೇರೋ ವಿಚಾರಕ್ಕೆ ಮತ್ತೆ ಪುಷ್ಠಿ ಕೊಟ್ಟ ಜಗನ್-ಮೋದಿ ಭೇಟಿ

ಶಿವಸೇನೆ ಮತ್ತು ಶಿರೋಮಣಿ ಅಕಾಲಿ ದಳ ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಹೊರಬಂದ ನಂತರ ಬಿಜೆಪಿಗೂ ಕೂಡ ಹೆಚ್ಚಿನ ಬೆಂಬಲ ಬೇಕಾಗಿದೆ.

- Advertisement -
- Advertisement -

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಎನ್‌ಡಿಎ ಒಕ್ಕೂಟ ಸೇರುತ್ತಾರೆ ಎಂಬ ಊಹಪೋಹಗಳಿಗೆ ಮತ್ತೆ ಗರಿ ಕಟ್ಟಿದಂತಾಗಿದೆ. ಅದಕ್ಕೆ ಪೂರಕವೆಂಬಂತೆ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಜಗನ್ ಭೇಟಿಯಾಗಿದ್ದಾರೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟಕ್ಕೆ (ಎನ್‌ಡಿಎ) ಸೇರಬಹುದು ಎಂಬ ಅನುಮಾನಗಳು ಮತ್ತೊಮ್ಮೆ ಗಟ್ಟಿಯಾಗಿವೆ. ಕಳೆದ ವಾರ ಸೆಪ್ಟೆಂಬರ್ 23 ಮತ್ತು 24 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಜಗನ್ ಭೇಟಿಯಾಗಿದ್ದರು.

ಆಂಧ್ರಪ್ರದೇಶದ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ ನಾಯಕ ಎನ್.ಚಂದ್ರಬಾಬು ನಾಯ್ಡು, ಜಗನ್ ಮೋಹನ್ ರೆಡ್ಡಿ ತಮ್ಮ ವಿರುದ್ಧದ ಸಿಬಿಐ ಪ್ರಕರಣಗಳನ್ನು ಸುಲಭವಾಗಿ ಪರಿಹರಿಸಿಕೊಳ್ಳಲು ಕೇಂದ್ರದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

ಶಿವಸೇನೆ ಮತ್ತು ಶಿರೋಮಣಿ ಅಕಾಲಿ ದಳ ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಹೊರಬಂದ ನಂತರ ಬಿಜೆಪಿಗೂ ಕೂಡ ಹೆಚ್ಚಿನ ಬೆಂಬಲ ಬೇಕಾಗಿದೆ.

ಆದರೆ, ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಎನ್‌ಡಿಎಗೆ ಸೇರುವ ವಿಚಾರವನ್ನು ನಿರಾಕರಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ರಾಜ್ಯವು ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಮಯದಲ್ಲಿ ಕೇಂದ್ರದೊಂದಿಗೆ ಸ್ನೇಹಯುತವಾಗಿರುವುದು ಅನುಕೂಲಕರವಾಗಿದೆ ಎಂದು ಹಿರಿಯ ನಾಯಕರು ಹೇಳುತ್ತಾರೆ.

ಎನ್‌ಡಿಎಗೆ ಸೇರ್ಪಡೆಗೊಳ್ಳಲು ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡಬೇಕೆಂಬ ಬೇಡಿಕೆಗೆ ಜಗನ್ ಅಂಟಿಕೊಂಡಿದ್ದಾರೆ ಎಂದು ನಂಬಲಾಗಿದೆ. ಏಕೆಂದರೆ ವೈಎಸ್‌ಆರ್‌ಸಿಪಿ  ಮುಖಂಡರು ಈ ಒಂದು ಬೇಡಿಕೆಯನ್ನು ಮುಖ್ಯವಾಗಿಟ್ಟುಕೊಂಡು 2019 ರಲ್ಲಿ ತಮ್ಮ ಇಡೀ ವಿಧಾನಸಭಾ ಚುನಾವಣಾ ಪ್ರಚಾರ ಮಾಡಿದ್ದರು.

ಇದನ್ನೂ ಓದಿ: ಖಾಸಗಿ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ: ಕೊಟ್ಟ ಮಾತು ಉಳಿಸಿಕೊಂಡ ಜಗನ್

ಪ್ರಧಾನಿಯೊಂದಿಗಿನ 40 ನಿಮಿಷಗಳ ಸಭೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಪೋಲವರಂ ನೀರಾವರಿ ಯೋಜನೆಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವುದು ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಕಡಪಾ ಸ್ಟೀಲ್ ಪ್ಲಾಂಟ್‌ನಂತಹ ವಿವಿಧ ಯೋಜನೆಗಳಿಗೆ ಬಾಕಿ ಇರುವ ಬಾಕಿ ಮತ್ತು ಅನುಮೋದನೆಗಳ ಕುರಿತು ಚರ್ಚಿಸಿದ್ದಾರೆ. ಸಭೆಯಲ್ಲಿ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲಾಗಿದೆಯೇ ಎಂದು ತಿಳಿದಿಲ್ಲ  ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ರಾಜ್ಯಕ್ಕೆ ಬಿಡುಗಡೆ ಮಾಡಬೇಕಿರುವ ಬಾಕಿ ಇರುವ ₹ 10,000 ಕೋಟಿ, ಪೋಲವರಂ ಯೋಜನೆಗೆ 3,250 ಕೋಟಿ ಹಣವನ್ನು ಜೊತೆಗೆ ಕರ್ನೂಲ್ ಜಿಲ್ಲೆಯಲ್ಲಿ ಹೈಕೋರ್ಟ್ ಸ್ಥಾಪಿಸುವುದರ ಬಗ್ಗೆ ಮುಖ್ಯಮಂತ್ರಿ ಪಿಎಂ ಮೋದಿಯವರನ್ನು ಕೋರಿದ್ದಾರೆ ಎಂದು ಮೂಲಗಳು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿವೆ.


ಇದನ್ನೂ ಓದಿ: ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಎನ್‌ಡಿಎ ಮೈತ್ರಿಕೂಟ ತೊರೆದ ಪಂಜಾಬ್‌ನ ಅಕಾಲಿ ದಳ!

ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...