Homeಮುಖಪುಟವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ 'ಅಂಬೇಡ್ಕರ್' ಪ್ರತಿಮೆ ಅನಾವರಣ

ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

- Advertisement -
- Advertisement -

ಆಂಧ್ರಪ್ರದೇಶದ ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಶ್ವದ ಅತಿ ದೊಡ್ಡ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಅನಾವರಣಗೊಳಿಸಿದ್ದಾರೆ.

ವಿಜಯವಾಡದ ಬಂದರ್ ರಸ್ತೆಯಲ್ಲಿರುವ ಸ್ವರಾಜ್ ಮೈದಾನದಲ್ಲಿ ‘ಸಾಮಾಜಿಕ ನ್ಯಾಯದ ಪ್ರತಿಮೆ’ ಹೆಸರಿನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸಿಎಂ ಜಗನ್‌ ಮೋಹನ್‌ ರೆಡ್ಡಿ ಅನಾವರಣ ಮಾಡಿದ್ದಾರೆ. ಪ್ರತಿಮೆ ಅನಾವರಣಗೊಳಿಸುವ ಮೊದಲು ಸಾಮಾಜಿಕ ಸಮತಾ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಜಗನ್‌ ಮೋಹನ್‌ ರೆಡ್ಡಿ, ಈ ಪ್ರತಿಮೆಯು ದಲಿತರು ಮತ್ತು ದೇಶದ ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದಂತೆ ಸಮಾಜದ ಇತರ ದೀನದಲಿತ ವರ್ಗಗಳ ಆತ್ಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ವಿಗ್ರಹದ ಎತ್ತರವು 125 ಅಡಿ ಇದ್ದು, 85 ಅಡಿ ಇರುವ ಮೂರ್ತಿ ಪೀಠವನ್ನು ಸೇರಿಸಿದರೆ, ಪ್ರತಿಮೆಯ ಒಟ್ಟಾರೆ ಎತ್ತರವು 206 ಅಡಿಯಾಗಿದೆ. ಸ್ವರಾಜ್ ಮೈದಾನದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯ ಸುತ್ತ ಅನುಭವ ಕೇಂದ್ರ, 2000 ಆಸನ ಸಾಮರ್ಥ್ಯದ ಸಮ್ಮೇಳನ ಸಭಾಂಗಣ, ಉಪಾಹಾರ ಗೃಹ, ಮಕ್ಕಳ ಆಟದ ಆವರಣ, ಕೊಳಗಳು, ಸಂಗೀತ ಕಾರಂಜಿ ಹಾಗೂ ಕಾಲ್ನಡಿಗೆಯ ದಾರಿಯಂತಹ ನಾಗರಿಕ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಹಿಂದೆ ಸ್ವರಾಜ್‌ ಮೈದಾನ ಎಂದು ಕರೆಯಲ್ಪಡುತ್ತಿದ್ದ ಮೈದಾನ ಈಗ ಅಧಿಕೃತವಾಗಿ ಡಾ.ಬಿ.ಆರ್. ಅಂಬೇಡ್ಕರ್ ಸ್ವರಾಜ್ ಮೈದಾನವಾಗಿದೆ. ಇಂದಿನಿಂದ ಸ್ವರಾಜ್ ಮೈದಾನದ ದ್ವಾರಗಳು ತೆರೆಯಲಿದೆ.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ನಿರ್ಮಿಸಲಾಗಿರುವ 125 ಅಡಿ ಎತ್ತರದ ಪ್ರತಿಮೆಯ ವೀಕ್ಷಣೆ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಇದು ಭಾರತೀಯ ಸಂವಿಧಾನದ ಶಿಲ್ಪಿಗೆ ಸಲ್ಲಿಸುವ ಗೌರವವಾಗಿದೆ. ಈ ಪ್ರತಿಮೆಯು ಭಾರತದಲ್ಲಿನ ಅತಿ ಎತ್ತರದ ಧಾರ್ಮಿಕವಲ್ಲದ ಪ್ರತಿಮೆಯಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ವರದಿ ಮಾಡಿದಂತೆ ಇದು ಭಾರತದಲ್ಲೇ ತಯಾರಿಸಿದ ಪ್ರತಿಮೆ ಆಗಿದೆ. ಆಂಧ್ರ ಪ್ರದೇಶ ಸರ್ಕಾರವು ಈ ಪ್ರತಿಮೆ ವೀಕ್ಷಣೆಗೆ ಅವಕಾಶವನ್ನು ಇಂದಿನಿಂದ ಕಲ್ಪಿಸಿದೆ.

ಈ ಯೋಜನೆಯನ್ನು ನೊಯ್ಡಾ ಮೂಲದ ಡಿಸೈನ್ ಅಸೋಸಿಯೇಟ್ಸ್ ಸಂಸ್ಥೆಗೆ ವಹಿಸಲಾಗಿತ್ತು. ಅನುಭವ ಕೇಂದ್ರವು ಕಾಲಚಕ್ರ ಮಹಾ ಮಂಟಪದ ಕಟ್ಟಡದಲ್ಲಿದೆ. ಇದು ಡಾ. ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೀತಿಗಳ ಬಗ್ಗೆ ಸ್ಫೂರ್ತಿ ನೀಡುತ್ತದೆ. ಗ್ರಂಥಾಲಯವನ್ನು ಕೂಡ ಅಲ್ಲಿ ನಿರ್ಮಿಸಲಾಗಿದೆ. ಕಂಚಿನ ಪ್ರತಿಮೆಯನ್ನು ದೆಹಲಿಯಲ್ಲಿ ಸಿದ್ಧಪಡಿಸಲಾಗಿದ್ದು. ಅದನ್ನು ಭಾಗಗಳಾಗಿ ವಿಜಯವಾಡಕ್ಕೆ ಸ್ಥಳಾಂತರಿಸಿ ನಿಯಮಿತ ರೀತಿಯಲ್ಲಿ ಸ್ಮೃತಿವನದಲ್ಲಿ ಸ್ಥಾಪಿಸಿ ಸುಂದರವಾಗಿ ಅಲಂಕರಿಸಲಾಗಿದೆ.

ನೆಲ ಮಹಡಿಯಲ್ಲಿ ನಾಲ್ಕು ಸಭಾಂಗಣಗಳಿದ್ದು, ಪ್ರತಿಯೊಂದೂ ನಾಲ್ಕು ಸಾವಿರ ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಅವುಗಳಲ್ಲಿ ಒಂದು ಸಿನಿಮಾ ಹಾಲ್ ಮತ್ತು ಉಳಿದ ಮೂರು ಹಾಲ್‌ಗಳಲ್ಲಿ ಅಂಬೇಡ್ಕರ್ ಅವರ ಇತಿಹಾಸವನ್ನು ಹೇಳುವ ಡಿಜಿಟಲ್ ಮ್ಯೂಸಿಯಂ ಇರುತ್ತದೆ.

ಈ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು,  ಪ್ರತಿಮೆ ಸ್ಥಾಪನೆ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರವು ವಿಜಯವಾಡದಲ್ಲಿ ಸ್ಥಾಪಿಸಿರುವ ಅಂಬೇಡ್ಕರ್ ಅವರ 206 ಅಡಿ ಮಹಾಶಿಲ್ಪವು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೆ ಕೂಡ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಈ ಪ್ರತಿಷ್ಠಿತ ಯೋಜನೆಯನ್ನು 2020ರಲ್ಲಿ 268 ಕೋಟಿಗಳ ಅಂದಾಜು ಬಜೆಟ್‌ನೊಂದಿಗೆ ಪ್ರಾರಂಭಿಸಿತು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಜೂನ್ 2020ರಲ್ಲಿ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು.

 

ಇದನ್ನು ಓದಿ: ಇಂದೋರ್‌: ಅನಾಥಾಶ್ರಮದಲ್ಲಿ ಮಕ್ಕಳ ಮೇಲೆ ದೌರ್ಜನ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...