Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

- Advertisement -
- Advertisement -

ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಚೇರಿಯನ್ನು ಆಂಧ್ರ ಪ್ರದೇಶ ರಾಜಧಾನಿ ಪ್ರದೇಶಾಭಿವೃದ್ದಿ ಪ್ರಾಧಿಕಾರ (ಎಪಿಸಿಆರ್‌ಡಿಎ) ಹಾಗೂ ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು ಶನಿವಾರ ಮುಂಜಾನೆ ಬುಲ್ಡೋಝರ್‌ಗಳ ಮೂಲಕ ಕೆಡವಿದ್ದಾರೆ.

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸದಿಂದ ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿತ್ತು. ಕಟ್ಟಡ ಧ್ವಂಸವನ್ನು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರವಾಗಿ ಖಂಡಿಸಿದ್ದು, “ಇದು ಚಂದ್ರಬಾಬು ನಾಯ್ಡು ಅವರ ಸರ್ವಾಧಿಕಾರ, ಆಡಳಿತಾರೂಢ ಟಿಡಿಪಿಯ ವಿನಾಶಕಾರಿ ಸೇಡಿನ ರಾಜಕಾರಣ” ಎಂದಿದ್ದಾರೆ.

ಇಂದು (ಜೂನ್ 22) ಮುಂಜಾನೆ ಐದು ಗಂಟೆ ಸುಮಾರಿಗೆ ಪುರಸಭೆ ಅಧಿಕಾರಿಗಳು ಬುಲ್ಡೋಝರ್‌ಗಳ ಮೂಲಕ ಕಟ್ಟಡ ಕೆಡವಿದ್ದಾರೆ. ಕೇವಲ ಎರಡು ಗಂಟೆಗಳಲ್ಲಿ ಧ್ವಂಸ ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ವೇಳೆ ವೈಎಸ್‌ಆರ್ ಕಾಂಗ್ರೆಸ್‌ ಕಾರ್ಯಕರ್ತರು ಸ್ಥಳಕ್ಕೆ ಬಾರದಂತೆ ತಡೆಯಲು ಬ್ಯಾರಿಕೇಡ್‌ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕಟ್ಟಡ ಧ್ವಂಸದಿಂದ ತಾಡೇಪಲ್ಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕಟ್ಟಡ ಕೆಡವುದನ್ನು ಪ್ರಶ್ನಿಸಿ ಇತ್ತೀಚೆಗೆ ವೈಎಸ್‌ಆರ್‌ ಕಾಂಗ್ರೆಸ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು. ಕಾನೂನನ್ನು ಮೀರದಂತೆ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಿತ್ತು. ಕೋರ್ಟ್‌ ಸೂಚನೆಯನ್ನು ವೈಎಸ್‌ಆರ್‌ ಕಾಂಗ್ರೆಸ್‌ ಪರ ವಕೀಲರು, ಪಾಲಿಕೆ ಆಯುಕ್ತರ ಗಮನಕ್ಕೆ ತಂದಿದ್ದರು.

ಆದರೆ, ಈ ನಡುವೆ ಕಟ್ಟಡವನ್ನು ಕೆಡವಲಾಗಿದ್ದು, ಪಾಲಿಕೆ ಅಧಿಕಾರಿಗಳು ಹೈಕೋರ್ಟ್‌ ನಿರ್ದೇಶನವನ್ನು ನಿರ್ಲಕ್ಷಿಸಿದ್ದಾರೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಿಸಿದೆ. ಯಾವುದೇ ನೋಟಿಸ್‌ಗಳನ್ನು ನೀಡಿಲ್ಲ. ಈ ಕ್ರಮಗಳು ನ್ಯಾಯಾಂಗ ನಿಂದನೆಯಾಗಿದೆ ಎಂದು ಪಕ್ಷವು ಹೇಳಿದೆ. ಅಧಿಕಾರಿಗಳ ನಡೆಯನ್ನು ಕೋರ್ಟ್‌ ಗಮನಕ್ಕೆ ತರುವುದಾಗಿ ತಿಳಿಸಿದೆ.

ಅಧಿಕಾರಿಗಳು ವೈಎಸ್‌ಆರ್‌ ಕಾಂಗ್ರೆಸ್‌ ಆರೋಪಗಳನ್ನು ತಿರಸ್ಕರಿಸಿದ್ದು, “ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಾಣವಾಗುತ್ತಿದೆ. ಹಿಂದಿನ ಜಗನ್ ಸರ್ಕಾರವು ಬೋಟ್ ಯಾರ್ಡ್ ಆಗಿ ಬಳಸಲಾಗಿದ್ದ ಭೂಮಿಯನ್ನು ವೈಎಸ್‌ಆರ್‌ ಕಾಂಗ್ರೆಸ್‌ನ ಕಚೇರಿಗೆ ಕಡಿಮೆ ವೆಚ್ಚದಲ್ಲಿ ಗುತ್ತಿಗೆಗೆ ಮಂಜೂರು ಮಾಡಿತ್ತು. ಇದು ಅಕ್ರಮ ನಿರ್ಮಾಣವಾಗಿದ್ದು, ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಬಳಿಕ, ಕಟ್ಟಡವನ್ನು ಕೆಡವಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಒಡಿಶಾ ಕಾಂಗ್ರೆಸ್ ಕಚೇರಿಗೆ ದಾಳಿ: ರಾಜ್ಯಾಧ್ಯಕ್ಷರ ಮೇಲೆ ಮಸಿ ಎರಚಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....