Homeಚಳವಳಿರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

ರೈತ ಮಹಿಳೆಗೆ ಪರಿಹಾರ ವಿಳಂಬ: ನ್ಯಾಯಾಂಗ ನಿಂದನೆ ಆರೋಪದಲ್ಲಿ ಆಂಧ್ರದ IAS ಅಧಿಕಾರಿಗಳಿಗೆ ಜೈಲು

- Advertisement -
- Advertisement -

ರೈತ ಮಹಿಳೆಗೆ ಪರಿಹಾರ ನೀಡುವಂತೆ ಫೆಬ್ರವರಿ 10, 2017 ರ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಉದ್ದೇಶಪೂರ್ವಕವಾಗಿ ಅಸಹಕಾರ ನೀಡಿ, ನ್ಯಾಯಾಂಗ ನಿಂದನೆ ಮಾಡಿದ ಆರೋಪದಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಮತ್ತು ಒಬ್ಬ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ.

ಇದೇ ವೇಳೆ ಮುಖ್ಯ ಕಾರ್ಯದರ್ಶಿ ಆದಿತ್ಯ ನಾಥ್ ದಾಸ್ ಸೇರಿದಂತೆ ಇತರ ಮೂವರು ಐಎಎಸ್ ಅಧಿಕಾರಿಗಳ ಮೇಲಿನ ಆರೋಪವನ್ನು ವಜಾಗೊಳಿಸಲಾಗಿದೆ.

ಶಿಕ್ಷೆಗೊಳಗಾದ ಐಎಎಸ್ ಅಧಿಕಾರಿಗಳಲ್ಲಿ ಪ್ರಧಾನ ಹಣಕಾಸು ಕಾರ್ಯದರ್ಶಿ ಶಂಶೀರ್ ಸಿಂಗ್ ರಾವತ್, ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ರೇವು ಮುತ್ಯಾಲ ರಾಜು, ನೆಲ್ಲೂರು ಜಿಲ್ಲಾಧಿಕಾರಿ ಕೆವಿಎನ್ ಚಕ್ರಧರಾ ಬಾಬು ಮತ್ತು ಮಾಜಿ ಕಲೆಕ್ಟರ್ ಎಂ.ವಿ ಶೇಷಗಿರಿ ಬಾಬು ಸೇರಿದ್ದಾರೆ.

ಮುತ್ಯಾಲ ರಾಜು ಈ ಹಿಂದೆ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಜಿಲ್ಲಾಧಿಕಾರಿ ಆಗಿಯೂ ಸೇವೆ ಸಲ್ಲಿಸಿದ್ದರು. 2017 ರಲ್ಲಿ ಆಗಿನ ಪ್ರಧಾನ ಕಾರ್ಯದರ್ಶಿ (ಕಂದಾಯ) ಆಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಮನಮೋಹನ್ ಸಿಂಗ್ ಕೂಡ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ಪ್ರಕರಣವೇನು…?

ತಮ್ಮ ಮೂರು ಎಕರೆ ಭೂಮಿಯನ್ನು ಕಂದಾಯ ಅಧಿಕಾರಿಗಳು ಯಾವುದೇ ಸೂಚನೆ ಅಥವಾ ಪರಿಹಾರ ನೀಡದೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಗೆ ಮಂಜೂರು ಮಾಡಿದ್ದಾರೆ ಎಂದು ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು 2017 ರಲ್ಲಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಡಿಸೆಂಬರ್ 2016 ರಲ್ಲಿ, ಕಂದಾಯ ಅಧಿಕಾರಿಗಳು ಮೂರು ಎಕರೆ ಭೂಮಿಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು ಮತ್ತು ಅದನ್ನು ಲೋಕಾಯುಕ್ತಕ್ಕೆ ವರದಿ ಮಾಡಲಾಗಿತ್ತು ಎಂದು ರೈತ ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದರು.

ಹೈಕೋರ್ಟ್‌ನ ನ್ಯಾಯಮೂರ್ತಿ ಎ ರಾಜಶೇಖರ್ ರೆಡ್ಡಿ, ಫೆಬ್ರವರಿ 10, 2017 ರಂದು ಅರ್ಜಿದಾರರ ಪರವಾಗಿ ತೀರ್ಪು ನೀಡಿದ್ದರು. ಮೂರು ತಿಂಗಳಲ್ಲಿ ಆಕೆಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದರು.

2018 ರಲ್ಲಿ ಕಂದಾಯ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ನಂತರ ರೈತ ಮಹಿಳೆ ತಲ್ಲಪಕ ಸಾವಿತ್ರಮ್ಮ ಅವರು ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

ರೈತ ಮಹಿಳೆಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಟ್ಟು ದೇವಾನಂದ್ ಅವರು ಐಎಎಸ್ ಅಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.

ಶಂಶೀರ್ ಸಿಂಗ್ ರಾವತ್ ಮತ್ತು ಮನಮೋಹನ್ ಸಿಂಗ್ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ಇತರರಿಗೆ ಎರಡು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರತಿಯೊಬ್ಬರಿಗೂ 1,000 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಈ ವರ್ಷದ ಜೂನ್ ತಿಂಗಳಲ್ಲಿ ನ್ಯಾಯಮೂರ್ತಿ ದೇವಾನಂದ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸುವಾಗ, ಕಂದಾಯ ವಿಭಾಗೀಯ ಅಧಿಕಾರಿಯು ಜುಲೈ 6, 2020 ರಂದು ಖಾತೆಗಳ ಕಚೇರಿಗೆ ಬಿಲ್ಲುಗಳನ್ನು ಸಲ್ಲಿಸಿದ್ದನ್ನು ಗಮನಿಸಿದ್ದರು. ಜೊತೆಗೆ ಅವುಗಳನ್ನು ಮಾರ್ಚ್ 30, 2021 ರವರೆಗೆ ತೆರವಾಗಿಲ್ಲ ಎಂಬುದನ್ನು ತೀರ್ಪು ನೀಡುವಾಗ ಗಣನೆಗೆ ತೆಗೆದುಕೊಂಡಿದ್ದಾರೆ.

“ಬಿಲ್ಲುಗಳನ್ನು ತೆರವುಗೊಳಿಸಲು ಮತ್ತು ಅರ್ಜಿದಾರರಿಗೆ ಪರಿಹಾರವನ್ನು ಪಾವತಿಸಲು ಪ್ರಧಾನ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಎಂಟು ತಿಂಗಳು ವಿಳಂಬವಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ” ಎಂದು ನ್ಯಾಯಮೂರ್ತಿ ಎ.ರಾಜಶೇಖರ್ ರೆಡ್ಡಿ ತಿಳಿಸಿದ್ದಾರೆ.


ಇದನ್ನೂ ಓದಿ: ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ – ಯುವ ಕಾಂಗ್ರೆಸ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತರಹದ ಶಿಕ್ಷೆಗಳನ್ನು ನೀಡಿದಾಗಲೇ, ಅಧಿಕಾರಿಗಳ ಎಮ್ಮೆ ಚರ್ಮ; ಮನುಷ್ಯ ಚರ್ಮವಾಗುವುದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...