Homeಮುಖಪುಟಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

ಆಕ್ಸಿಜನ್ ಪೂರೈಕೆ ವ್ಯತ್ಯಯವಾಗಿ ಆಂಧ್ರದಲ್ಲಿ 11 ಕೊರೊನಾ ರೋಗಿಗಳ ಸಾವು

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಪೂರೈಕೆ ಅಸ್ತವ್ಯಸ್ತಗೊಂಡಿದ್ದರಿಂದ ಐಸಿಯುನಲ್ಲಿದ್ದ 11 ಕೊರೊನಾ ಸೋಂಕಿತ ರೋಗಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ಆಂಧ್ರಪ್ರದೇಶದ ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದ್‌ಊ, ದೇಶವೇ ಇದರ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ, ವೈದ್ಯಕೀಯ ಆಮ್ಲಜನಕದ ಕೊರತೆಯು ಪ್ರಮುಖ ಸವಾಲಾಗಿ ಹೊರಹೊಮ್ಮಿದೆ.

ಎಸ್‌ವಿಆರ್ ರುಯಾ ಆಸ್ಪತ್ರೆಯಲ್ಲಿ ಐಸಿಯು ವಾರ್ಡ್‌ ಒಳಗೆ ವೈದ್ಯಕೀಯ ಸಿಬ್ಬಂದಿ ಜೀವ ಉಳಿಸಲು ಪ್ರಯತ್ನಿಸುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸುಮಾರು 25 ರಿಂದ 45 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ ಎಂದು ಮೃತ ರೋಗಿಗಳ ಕುಟುಂಬಸ್ಥರು ಆರೋಪಿಸುತ್ತಿದ್ದರೂ, ಚಿತ್ತೂರು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡಿದ ಆರೋಪ: ಪ್ರಕಾಶ್ ಬೆಳವಾಡಿ ವಿರುದ್ಧ ದೂರು ಸಲ್ಲಿಸಿದ ವಕೀಲ

“ಆಮ್ಲಜನಕ ಸಿಲಿಂಡರ್ ಮರು ಜೋಡಿಸುವಲ್ಲಿ ಐದು ನಿಮಿಷಗಳು ವಿಳಂಬವಾಗಿದೆ, ಇದರಿಂದ ರ್ದುಘಟನೆ ನಡೆದಿದೆ” ಎಂದು ಜಿಲ್ಲಾಧಿಕಾರಿ ಎಂ.ಹರಿನಾರಾಯಣನ್ ಹೇಳಿದ್ದಾರೆ.

“ಐದು ನಿಮಿಷಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಪುನಃಸ್ಥಾಪಿಸಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ನಾವು ಬೃಹತ್ ಸಿಲಿಂಡರ್‌ಗಳನ್ನು ಸಂಪರ್ಕಿಸಿದ್ದೇವೆ, ಚಿಂತೆ ಮಾಡಲು ಯಾವುದೇ ಕಾರಣವಿಲ್ಲ. ವೈದ್ಯಕೀಯ ಸಿಬ್ಬಂದಿಯ ತ್ವರಿತ ಕ್ರಮದಿಂದಾಗಿ ಒಂದು ದೊಡ್ಡ ಅನಾಹುತ ತಪ್ಪಿದೆ. ಘಟನೆ ನಡೆದ ತಕ್ಷಣ ಸುಮಾರು 30 ವೈದ್ಯರು ತಕ್ಷಣ ಐಸಿಯುಗೆ ಹೋಗಿ ರೋಗಿಗಳನ್ನು ಉಪಚರಿಸಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತಮಿಳುನಾಡಿನ ಶ್ರೀಪೆರುಂಬುದೂರಿನಿಂದ ಆಮ್ಲಜನಕ ಟ್ಯಾಂಕರ್ ಬರುವುದು ವಿಳಂಬವಾಗಿದ್ದರಿಂದ ತೊಂದರೆಯಾಗಿದೆ ಎಂದರು. ರುಯಾ ಆಸ್ಪತ್ರೆಯು 1,100 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದ್ದು, ಐಸಿಯುನಲ್ಲಿ 100 ಕ್ಕೂ ಹೆಚ್ಚು ರೋಗಿಗಳು ಮತ್ತು 400 ಆಮ್ಲಜನಕ ಸಂಪರ್ಕಿತ ಹಾಸಿಗೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಘಟನೆ ಕುರಿತು ಸಂತಾಪ ಸೂಚಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೇರಳಕ್ಕೆ ಆಕ್ಸಿಜನ್ ಅವಶ್ಯಕತೆ ಇದೆ, ಬೇರೆ ರಾಜ್ಯಗಳಿಗೆ ನೀಡಲಾಗದು- ಪಿಣರಾಯಿ ವಿಜಯನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. 77 ಜನ ಎಮ್ ಎಲ್ ಎ ಗಳಿಗೆ ಕೇಂದ್ರ ಬದ್ರತೆ ಕೊಡಲು ಕಾರಣವೇನು ಅಷ್ಟೆಲ್ಲಾ ರಿಸ್ಕ್ ಇದ್ದರೆ ಎಲ್ಲರೂ ರಾಜಿನಾಮೆ ಕೊಟ್ಟು ಮನೆಗೆ ಹೋಗಿ. ಅದನ್ನ ಬಿಟ್ಟು ಇವರಿಗೆ ಅದರ ಖರ್ಚು ಕೊಡೋರು ಜನರೇ ಮೋದಿಗೆ ಗೊತ್ತಿರಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...