Homeದಲಿತ್ ಫೈಲ್ಸ್ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ

ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಂಗಾಧರ ನೆಲ್ಲೂರು ಕ್ಷೇತ್ರದ ಶ್ರೀರಂಗರಾಜಪುರಂನ ಎರ್ರಿಕೊಂಟಾದಲ್ಲಿ ಬಡವರು ನಿರ್ಮಿಸಿರುವ ಮನೆಗಳ ಮೇಲೆ ಸಮ್ಮಿಶ್ರ ಸರ್ಕಾರದ ನಾಯಕರು ಮತ್ತು ಸರ್ಕಾರಿ ಶಾಲಾ ಶಿಕ್ಷಕಿಯ ದೃಷ್ಟಿ ನೆಟ್ಟಿದ್ದು, ಅವರ ಕುಟುಂಬದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ದೌರ್ಜನ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ.

ಈ  ಬಗ್ಗೆ ತೆಲುಗಿನ ‘ಸಾಕ್ಷಿ’ ನ್ಯೂಸ್‌ ಪೋರ್ಟಲ್‌ ವರದಿ ಮಾಡಿದೆ. ಸ್ಥಳೀಯರ ಪ್ರಕಾರ, ದಲಿತರಿಗೆ ಮನೆಗಳಿಲ್ಲದ ಕಾರಣ ಕಳೆದ 20 ವರ್ಷಗಳಿಂದ ಎರ್ರಿಕೊಂಟಾದಲ್ಲಿ 10 ಕುಟುಂಬಗಳು ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಸರ್ಕಾರಿ ಶಿಕ್ಷಕಿ ದಿನಾವತಿ ಮತ್ತು ಟಿಡಿಪಿ ನಾಯಕ ಎತ್ತಿರಾಜುಲು ನಾಯ್ಡು ಈ ಭೂಮಿಯ ಮೇಲೆ ದೃಷ್ಟಿ ನೆಟ್ಟಿದ್ದಾರೆ. ಅವರು, 20 ಜನ ಸಮ್ಮಿಶ್ರ ಸರ್ಕಾರದ ನಾಯಕರೊಂದಿಗೆ ಶುಕ್ರವಾರ ರಾತ್ರಿ ಜೆಸಿಬಿ ಬಳಸಿ ದಲಿತರು ನಿರ್ಮಿಸಿರುವ ಮನೆಗಳನ್ನು ಕೆಡವಲು ಪ್ರಯತ್ನಿಸಿದ್ದಾರೆ.

ಬಲವಂತದ ತೆರವು ಕಾರ್ಯಾಚರಣೆಯನ್ನು ದಲಿತ ಕುಟುಂಬಗಳು ವಿರೋಧಿಸಿದಾಗ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜಾತಿ ಹೆಸರಿಡಿದು ಅವರನ್ನು ನಿಂದಿಸಿದರು. ನಾಳೆಯೊಳಗೆ ಮನೆ ಖಾಲಿ ಮಾಡದಿದ್ದರೆ ನಿದ್ರೆಯಲ್ಲಿಯೇ ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಲಿತರು ಸ್ಥಳೀಯ ಪೊಲೀಸ್ ಠಾಣೆ ಮತ್ತು ತಹಶೀಲ್ದಾರ್‌ಗೆ ದೂರು ನೀಡಿ, ತಮಗೆ ಜೀವ ಬೆದರಿಕೆ ಇದೆ ಮತ್ತು ಸರ್ಕಾರ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಮನೆ ಹಕ್ಕುಪತ್ರ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದರೂ ಪ್ರಬಲ ಜಾತಿ ಗುಂಪಿನ ಮುಖಂಡರು ಅಡ್ಡಿಪಡಿಸುತ್ತಿದ್ದಾರೆ ಎಂದು ಸಂತ್ರಸ್ತರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಸರ್ಕಾರ ಸ್ಪಂದಿಸಿ ನ್ಯಾಯ ಒದಗಿಸಬೇಕು, ಇಲ್ಲದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿದರು.

ಗುಜರಾತ್‌: ಶಾಲಾ ಮಾಲೀಕನಿಂದ ದಲಿತ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...