Homeರಾಷ್ಟ್ರೀಯಆಂಧ್ರಪ್ರದೇಶ: ಮೋಟಾರ್ ಶೋ ರೂಂನಲ್ಲಿ ಬೆಂಕಿ ಅವಘಡ; 25 ಇ-ಬೈಕ್‌ಗಳು ಸುಟ್ಟು ಭಸ್ಮ

ಆಂಧ್ರಪ್ರದೇಶ: ಮೋಟಾರ್ ಶೋ ರೂಂನಲ್ಲಿ ಬೆಂಕಿ ಅವಘಡ; 25 ಇ-ಬೈಕ್‌ಗಳು ಸುಟ್ಟು ಭಸ್ಮ

- Advertisement -
- Advertisement -

ಆಂಧ್ರಪ್ರದೇಶದ ಪಾರ್ವತಿಪುರಂ ಮಾನ್ಯಂ ಜಿಲ್ಲೆಯ ಮೋಟಾರು ಶೋ ರೂಂನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ 25 ಎಲೆಕ್ಟ್ರಿಕ್ ಬೈಕ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ಟೋಬರ್ 24ರ ಸೋಮವಾರ ಮುಂಜಾನೆ ಪಾಲಕೊಂಡ ಪಟ್ಟಣದ ಮನಮ್ ಮೋಟಾರ್ಸ್‌ನಲ್ಲಿ ಈ ಘಟನೆ ಸಂಭವಿಸಿದೆ.

ದೀಪಾವಳಿಯ ವಿಶೇಷ ರಿಯಾಯಿತಿ ಮಾರಾಟಕ್ಕಾಗಿ ಶೋರೂಮ್‌ನಲ್ಲಿ ಇರಿಸಲಾಗಿದ್ದ ಇ-ಬೈಕ್ ಮತ್ತು ಬ್ಯಾಟರಿಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡದಿಂದ ಸುಮಾರು 50 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಶೋರೂಂ ಆಡಳಿತ ಮಂಡಳಿ ಹೇಳಿದೆ ಎಂದು ಐಎಎನ್ಎಸ್ ವರದಿ ಮಾಡಿದೆ.

ಇದನ್ನೂ ಓದಿ: ಸಿಕಂದರಾಬಾದ್‌: ಇ-ಬೈಕ್ ಶೋ ರೂಂ ಸ್ಫೋಟ: ಮಹಿಳೆ ಸೇರಿದಂತೆ ಎಂಟು ಮಂದಿ ಸಾವು

ಸೆಪ್ಟೆಂಬರ್‌ನಲ್ಲಿ ಹೈದರಾಬಾದ್‌ನ ಎಲೆಕ್ಟ್ರಿಕ್ ವಾಹನ ಶೋರೂಮ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಎಂಟು ಜನರು ಸಾವನ್ನಪ್ಪಿದ್ದರು. ಬಹುಮಹಡಿ ಕಟ್ಟಡದ ನೆಲಮಾಳಿಗೆಯಲ್ಲಿರುವ ಶೋರೂಮ್‌ನಿಂದ ಬೆಂಕಿಯು ಮೇಲಿನ ಮಹಡಿಯಲ್ಲಿರುವ ಹೋಟೆಲ್‌ಗೆ ವ್ಯಾಪಿಸಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿ, ಅಲ್ಲಿ ತಂಗಿದ್ದ ಹಲವಾರು ಮಂದಿ ಗಾಯಗೊಂಡಿದ್ದರು.

ಶೋರೂಂನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್‌ನ ಬಳಿ ಬೆಂಕಿ ಕಾಣಿಸಿಕೊಂಡು ಕೆಲವೇ ಸೆಕೆಂಡ್‌ಗಳಲ್ಲಿ ವ್ಯಾಪಿಸಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ತಿಳಿದು ಬಂದಿತ್ತು. ರೂಬಿ ಪ್ರೈಡ್ ಹೋಟೆಲ್ ಮತ್ತು ರೂಬಿ ಮೋಟರ್ ಅನ್ನು ಹೊಂದಿದ್ದ ನೆಲ ಮಾಳಿಗೆ ಮತ್ತು ಅಂತಸ್ತು ಸೇರಿದಂತೆ ಕಟ್ಟಡವು 28 ಕೊಠಡಿಗಳನ್ನು ಹೊಂದಿತ್ತು. ಅಪಘಾತದ ಸಮಯದಲ್ಲಿ ಸುಮಾರು 25 ಜನರು ಹೋಟೆಲ್‌ನಲ್ಲಿ ಇದ್ದರು.

ಈ ಘಟನೆಯಲ್ಲಿ ಅಗ್ನಿಶಾಮಕ ಸುರಕ್ಷತಾ ನಿಯಮಗಳ ಉಲ್ಲಂಘನೆ ಸೇರಿದಂತೆ ಲಾಡ್ಜ್ ಮತ್ತು ಇ-ಬೈಕ್ ಶೋರೂಮ್‌ನ ಕಾರ್ಯನಿರ್ವಹಣೆಯಲ್ಲಿ ಹಲವಾರು ಲೋಪಗಳನ್ನು ಪೊಲೀಸರು ಕಂಡುಕೊಂಡಿದ್ದಾರೆ. ನೆಲಮಾಳಿಗೆಯನ್ನು ಕಾನೂನುಬಾಹಿರವಾಗಿ ವ್ಯಾಪಾರ ಚಟುವಟಿಕೆಗೆ ಬಳಸಿಕೊಂಡಿರುವುದು ಮತ್ತೊಂದು ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕು

ಎಪ್ರಿಲ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ವಿಜಯವಾಡದ ಮನೆಯೊಂದರಲ್ಲಿ ವಿದ್ಯುತ್ ದ್ವಿಚಕ್ರ ವಾಹನದ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದರು. ವ್ಯಕ್ತಿ ಮಲಗುವ ಕೋಣೆಯಲ್ಲಿ ಬ್ಯಾಟರಿಯನ್ನು ಚಾರ್ಜ್ ಮಾಡಲು ತಂದಿದ್ದಾಗ ಸ್ಫೋಟ ಸಂಭವಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...