Homeಮುಖಪುಟಆಂಧ್ರಪ್ರದೇಶ: ಬಜೆಟ್‌ ಅಧಿವೇಶನದಿಂದ ನಾಲ್ವರು ಟಿಡಿಪಿ ಸದಸ್ಯರ ಅಮಾನತು

ಆಂಧ್ರಪ್ರದೇಶ: ಬಜೆಟ್‌ ಅಧಿವೇಶನದಿಂದ ನಾಲ್ವರು ಟಿಡಿಪಿ ಸದಸ್ಯರ ಅಮಾನತು

- Advertisement -
- Advertisement -

ಆಂಧ್ರ ಪ್ರದೇಶ ವಿಧಾನಸಭೆ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) ನಾಲ್ವರು ಸದಸ್ಯರನ್ನು ಬಜೆಟ್ ಅಧಿವೇಶನದಿಂದ ಅಮಾನತು ಮಾಡಲಾಗಿದೆ.

ಶಾಸಕರು ಅಶಿಸ್ತಿನ ವರ್ತನೆ ತೋರಿದ್ದಾರೆಂದು ಆರೋಪಿಸಿ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅಮಾನತು ಮಾಡಿದ್ದಾರೆ. ಅಶೋಕ್ ಬೆಂದಾಲಂ, ವೆಲಗಪುಡಿ ರಾಮಕೃಷ್ಣ ಬಾಬು, ಮಂಟೆನಾ ರಾಮರಾಜು ಮತ್ತು ಅನಗಣಿ ಸತ್ಯ ಪ್ರಸಾದ್ ಅಮಾನತಾದವರು.

ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿಗುಡೆಂ ಪಟ್ಟಣದಲ್ಲಿ ಅಕ್ರಮ ಮದ್ಯ ಸೇವನೆಯಿಂದ ಸಾವುಗಳು ಸಂಭವಿಸಿವೆ ಎಂಬ ವಿಷಯದ ಚರ್ಚೆಗೆ ಒತ್ತಾಯಿಸಿ ಟಿಡಿಪಿ ಸದಸ್ಯರು ಸದನದಲ್ಲಿ ಗದ್ದಲ ಎಬ್ಬಿಸಿದರು.

ದಿನದ ಮಟ್ಟಿಗೆ ಸಭೆ ಸೇರುತ್ತಿದ್ದಂತೆಯೇ ಪ್ರತಿಪಕ್ಷದ ಶಾಸಕರು ಈ ವಿಷಯದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಕಳೆದ ವಾರವೇ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿ ಹೇಳಿಕೆ ನೀಡಿರುವುದನ್ನು ಉಲ್ಲೇಖಿಸಿ ಚರ್ಚೆಗೆ ಸ್ಪೀಕರ್‌ ನಿರಾಕರಿಸಿದರು.

ಜಂಗಾರೆಡ್ಡಿಗುಡೆಮ್‌ನಲ್ಲಿ ಸಂಭವಿಸಿದ ಅನೇಕ ಅಕ್ರಮ ಮದ್ಯದ ಸಾವುಗಳು ವಾಸ್ತವವಾಗಿ ನೈಸರ್ಗಿಕ ಕಾರಣಗಳಿಂದ ಅಥವಾ ಇತರ ಸಂಬಂಧವಿಲ್ಲದ ಕಾರಣಗಳಿಂದ ಸಂಭವಿಸಿವೆ ಎಂದು ವೈಎಸ್‌ಆರ್‌ಸಿಪಿ ಸರ್ಕಾರವು ಹೇಳಿಕೊಂಡಿದೆ. ಅಕ್ರಮವಾಗಿ ತಯಾರಿಸಿದ ಮದ್ಯ ಸೇವನೆಯಿಂದ ಸಂಭವಿಸಿದ ಸಾವುಗಳು ಎಂದು ಟಿಡಿಪಿ ತಪ್ಪಾಗಿ ಬಿಂಬಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ.

ಆದರೆ, ಸರ್ಕಾರ ಮದ್ಯ ಸೇವನೆಯಿಂದಾದ ಸಾವುಗಳನ್ನು ಸಾಮಾನ್ಯ ಸಾವು ಎಂದು ಬಿಂಬಿಸುವ ಮೂಲಕ ಸತ್ಯವನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದ ಟಿಡಿಪಿ ಸದಸ್ಯರು ಈ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

ಸದನದಲ್ಲಿ ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಅವರು ಸದನದ ಬಾವಿಗೆ ನುಗ್ಗಿ ಘೋಷಣೆಗಳನ್ನು ಕೂಗಿದರು. ಶಿಳ್ಳೆ ಊದಿದ ಕೆಲ ಟಿಡಿಪಿ ಸದಸ್ಯರಿಗೆ ಸ್ಪೀಕರ್ ತಾಕೀತು ಮಾಡಿದರು. ತಮ್ಮ ಅಶಿಸ್ತಿನ ವರ್ತನೆಯ ಮೂಲಕ ಸದನಕ್ಕೆ ಅಪಖ್ಯಾತಿ ತರುತ್ತಿದ್ದಾರೆ ಎಂದರು. ಅವರು ನಾಲ್ಕು ಸದಸ್ಯರನ್ನು ಹೆಸರಿಸಿ, ಅಧಿವೇಶನದ ಮುಂದಿನ ಅವಧಿಯಲ್ಲಿ ಪಾಲ್ಗೊಳ್ಳದಿರುವಂತೆ ಆದೇಶಿಸಿದರು.

ಅಮಾನತುಗೊಂಡಿರುವ ಟಿಡಿಪಿ ಶಾಸಕರು ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರವು ನಮ್ಮನ್ನು ಅಮಾನತುಗೊಳಿಸುವ ಮೂಲಕ ಪ್ರತಿಪಕ್ಷಗಳ ಧ್ವನಿಗೆ ಮೂಗುದಾರ ಹಾಕಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಟಿಡಿಪಿ ಸದಸ್ಯರು ಅಕ್ರಮ ಮತ್ತು ಅಗ್ಗದ ಮದ್ಯದಿಂದ ಉಂಟಾದ ಸಾವುಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಸದನವನ್ನು ಮುಂದೂಡಲಾಗಿದೆ.


ಇದನ್ನೂ ಓದಿರಿ: ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...