Homeಮುಖಪುಟಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಕೂಲಿ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಸಂತ್ರಸ್ತೆಯ ಗಂಡನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

- Advertisement -
- Advertisement -

ಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ.

ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು ಒಬ್ಬ ಅಪ್ರಾಪ್ತ ಸೇರಿದಂತೆ ಮೂವರನ್ನು ಬಂಧಿಸಿವೆ. ಇನ್ನಿಬ್ಬರು ಆರೋಪಿಗಳು ವಯಸ್ಕರಾಗಿದ್ದು, ಅವರನ್ನು ಪಲುಬೊಯಿನಾ ವಿಜಯಕೃಷ್ಣ (20), ಪಲುಚೂರಿ ನಿಖಿಲ್ (25) ಎಂದು ಗುರುತಿಸಲಾಗಿದೆ. ಈ ಹಿಂದೆಯೇ ಕಳ್ಳತನದ ಪ್ರಕರಣವೊಂದರಲ್ಲಿ ಅಪ್ರಾಪ್ತ ವಯಸ್ಕ ಆರೋಪಿಯಾಗಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾವಿನಿಂದ ಪಾರಾಗಿರುವ ಮಹಿಳೆ, ಆಕೆಯ ಪತಿ ಮತ್ತು ಅವರ ಮೂವರು ಮಕ್ಕಳು ಎರಡು ದಿನಗಳ ಹಿಂದೆ ಗುಂಟೂರಿಗೆ ಕಲ್ಲಿನ ಕೆಲಸಕ್ಕಾಗಿ ಬಂದಿದ್ದರು. ಮಹಿಳೆಯು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾರೆ. ಅವರು ತೆನಾಲಿಗೆ ರೈಲು ಹತ್ತಿ, ರೇಪಲ್ಲಿಗೆ ಬಂದಿಳಿದಿದ್ದರು.

ಏಪ್ರಿಲ್ 30ರ ಮಧ್ಯರಾತ್ರಿ ರೇಪಲ್ಲಿಗೆ ತಲುಪಿದರು. ಪ್ಲಾಟ್‌ಫಾರ್ಮ್‌ನಲ್ಲಿಯೇ ಉಳಿಯಲು ನಿರ್ಧರಿಸಿದರು. “ಮೂರು ಜನ ಆರೋಪಿಗಳು ಟೈಮ್‌ ಕೇಳಲೆಂದು ಇವರನ್ನು ಎಬ್ಬಿಸಿದರು. ಸಂತ್ರಸ್ತೆಯ ಗಂಡ ತಮ್ಮ ಬಳಿ ವಾಚ್ ಇಲ್ಲ ಎಂದು ಹೇಳಿದಾಗ ಆರೋಪಿಗಳು ಹಲ್ಲೆ ನಡೆಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಡಪಾಯಿಗಳಿಂದ 750 ರೂ.ಗಳನ್ನು ಆರೋಪಿಗಳು ಕಸಿದುಕೊಂಡಿದ್ದು, ಅದನ್ನು ವಾಪಸ್‌ ಪಡೆಯಲು ಯತ್ನಿಸಿದಾಗ ಮಹಿಳೆಯನ್ನು ಸಮೀಪದ ಪೊದೆಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಪತಿ ಸ್ಥಳೀಯರ ಸಹಾಯದಿಂದ ರೇಪಲ್ಲೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಆ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಕೆಲವು ಪೊದೆಗಳಲ್ಲಿ ಸಂತ್ರಸ್ತೆ ಪತ್ತೆಯಾಗಿದ್ದಾರೆ. ಇಬ್ಬರು ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ರೇಪಲ್ಲೆ ಟೌನ್ ಸಿಐ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಗಂಡನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಬಾಪಟ್ಲಾ ಎಸ್ಪಿ ವಕುಲ್ ಜಿಂದಾಲ್ ಮಹಿಳೆಯನ್ನು ಭೇಟಿಯಾಗಿದ್ದು, ಘಟನೆ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದರು. ನಂತರ ತನಿಖೆಗಾಗಿ ಮೂರು ತಂಡಗಳನ್ನು ರಚಿಸಿದರು. ಸಾಕ್ಷ್ಯ ಸಂಗ್ರಹಿಸಲು ಶ್ವಾನ ದಳ ಹಾಗೂ ಸುಳಿವು ತಂಡವನ್ನು ಬಳಸಲಾಯಿತು. ಇದಾದ ಬೆನ್ನಲ್ಲೇ ರೇಪಲ್ಲೆ ಡಿಎಸ್‌ಪಿ ನೇತೃತ್ವದ ವಿಶೇಷ ತಂಡ, ಪಟ್ಟಣ ಸಿಐ ತಂಡಗಳು ಆರೋಪಿಗಳನ್ನು ರೇಪಲ್ಲೆ ಟೌನ್‌ನ ನೇತಾಜಿ ನಗರದಲ್ಲಿ ಬಂಧಿಸಿ, ಅವರಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಆಂಧ್ರಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗಾಗಿ ದಿಶಾ ಕಾಯ್ದೆ ಜಾರಿಗೊಳಿಸಲಾಗಿದೆ. ತ್ವರಿತ ತನಿಖೆ, ವಿಚಾರಣೆ ಮತ್ತು ಶಿಕ್ಷೆಯನ್ನು ನೀಡುವುದಕ್ಕಾಗಿ ಈ ಕಾಯ್ದೆ ಜಾರಿಯಾಗಿರುವ ಹೊತ್ತಿನಲ್ಲೇ ಈ ಆಘಾತಕಾರಿ ಘಟನೆ ನಡೆದಿದೆ.

ದಿಶಾ ಕಾಯಿದೆ 2019ರ ಪ್ರಕಾರ ತಕ್ಷಣವೇ ಆರೋಪಪಟ್ಟಿ ಸಲ್ಲಿಸುವಂತೆ ಎಸ್ಪಿ, ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಪಿಗಳ ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ವಿ ರಜಿನಿ ಪ್ರತಿಕ್ರಿಯಿಸಿ, “ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....