Homeದಲಿತ್ ಫೈಲ್ಸ್ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

ಆಂಧ್ರಪ್ರದೇಶ: ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ತಿಂಗಳುಗಳ ಬಳಿಕ ಪ್ರಕರಣ ಬಯಲು

- Advertisement -
- Advertisement -

ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಾವತಿಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ನಾಲ್ವರು ಶಂಕಿತರನ್ನು ಕಡಪಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆಯು ಪ್ರದ್ದಟೂರು ಪಟ್ಟಣದ ದೇವಸ್ಥಾನದ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಕುರಿತು ವರದಿಯಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗ್ರಾಮೀಣ ಮಹಿಳಾ ಪೊಲೀಸ್ ಸಿಬ್ಬಂದಿ (ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ) ಗಮನಿಸಿದ್ದು, ಬಾಲಕಿಯನ್ನು ಆಶ್ರಯ ಮನೆಗೆ ಸ್ಥಳಾಂತರಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ಬಾಲಕಿ ಮಾತನಾಡಿರುವ ವಿಡಿಯೊ ಕೂಡ ಆನ್‌ಲೈನ್‌ನಲ್ಲಿ ಹರಿದಾಡಿದೆ.

“ಸ್ಥಳೀಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದೆ ಅಪರಾಧವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ” ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ಆರೋಪಿಸಿದೆ. ಆದರೆ ಕಡಪ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನ್ಬುರಾಜನ್ ಆರೋಪವನ್ನು ನಿರಾಕರಿಸಿದ್ದಾರೆ. “ಪ್ರಕರಣ ದಾಖಲಿಸಲು ವಿಳಂಬವಾಗಿದೆ. ಮೇ 11ರ ಬುಧವಾರದಂದು ಪ್ರಕರಣ ದಾಖಲಿಸಲಾಗಿದ್ದು, ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ” ಎಂದು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿರಿ: ತಮಿಳುನಾಡು: ‘ದನದ ಮಾಂಸ’ ಇಲ್ಲದ ಅಂಬೂರ್‌ ಬಿರಿಯಾನಿ ಹಬ್ಬ; ದಲಿತರಿಂದ ವ್ಯಾಪಕ ಟೀಕೆ

“ಬಾಲಕಿಯ ಕುಟುಂಬ ಸದಸ್ಯರು ಯಾವುದೇ ಔಪಚಾರಿಕ ದೂರು ನೀಡಿರಲಿಲ್ಲ” ಎಂದು ‘ದಿ ಹಿಂದೂ’ ವರದಿ ಮಾಡಿದೆ.

“ನಾವು ಅವರೊಂದಿಗೆ ಸಮಾಲೋಚಿಸಲು ಮತ್ತು ದೂರು ತೆಗೆದುಕೊಳ್ಳಲು ಪ್ರಯತ್ನಿಸಿದ್ದೇವೆ. ಆದರೆ ಅವರು ದೂರು ನೀಡಲಿಲ್ಲ. ಆಕೆಯ ತಂದೆ ಮಾನಸಿಕವಾಗಿ ನೊಂದಿದ್ದರು, ದೂರು ನೀಡಲು ಸಾಧ್ಯವಾಗಲಿಲ್ಲ. ನಿನ್ನೆ (ಬುಧವಾರ) ಬೆಳಗ್ಗೆ ಐಸಿಡಿಎಸ್ (ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‌ಮೆಂಟ್ ಸರ್ವಿಸಸ್) ಅಧಿಕಾರಿಯೊಬ್ಬರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ನಂತರ ವೀಡಿಯೊವನ್ನು ಪರಿಶೀಲಿಸಲಾಗಿದೆ. ನಾಲ್ವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಎಸ್‌ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮೇ 4 ರಂದು ಗ್ರಾಮ ಮಹಿಳಾ ಸಂರಕ್ಷಣಾ ಕಾರ್ಯದರ್ಶಿ (ಜಿಎಂಎಸ್‌ಕೆ) ಗರ್ಭಿಣಿ ಬಾಲಕಿಯನ್ನು ಮೊದಲು ಗಮನಿಸಿ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿದ್ದರು. ಆದರೆ ಬಾಲಕಿ ಜಿಎಂಎಸ್‌ಕೆ ಸಹಾಯವನ್ನು ನಿರಾಕರಿಸಿ ಅಲ್ಲಿಂದ ತೆರಳಿದ್ದಳು” ಎಂದು ಹೆಚ್ಚುವರಿ ಎಸ್‌ಪಿ ಪೂಜಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಂತರ ಮೇ 8 ರಂದು, ಜಿಎಂಎಸ್‌ಕೆ  ಬಾಲಕಿಯನ್ನು ಮತ್ತೆ ಪತ್ತೆಹಚ್ಚಿ ಪೊಲೀಸ್ ಠಾಣೆಗೆ ಕರೆದೋಯ್ದರು. ಬಾಲಕಿ ತನ್ನ ಕುಟುಂಬ ಅಥವಾ ಪೋಷಕರ ಬಗ್ಗೆ ವಿವರಗಳನ್ನು ಹಂಚಿಕೊಳ್ಳದ ಕಾರಣ ಪೊಲೀಸ್ ಅಧಿಕಾರಿಗಳು ಬಾಲಕಿಯನ್ನು ಆಶ್ರಯ ಮನೆಗೆ ಕಳುಹಿಸಿದರು. ಮೇ 9 ರಂದು ಪೊಲೀಸರು ಆಕೆಯ ತಂದೆ ಮತ್ತು ಸಂಬಂಧಿಕರನ್ನು ಪತ್ತೆ ಹಚ್ಚಿದರು. ಆದರೆ ಪೋಷಕರು ಪ್ರಕರಣ ದಾಖಲಿಸಲು ನಿರಾಕರಿಸಿದರು. ಮೇ 11ರಂದು, ಐಸಿಡಿಎಸ್ ಅಧಿಕಾರಿಯ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ಆರು ತಿಂಗಳ ಹಿಂದೆ ಇಬ್ಬರು ಯುವಕರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನಾಲ್ಕು ತಿಂಗಳ ಹಿಂದೆ ಮತ್ತಿಬ್ಬರು ಯುವಕರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಎಸ್ಪಿ ಪೂಜಿತಾ ಅವರನ್ನು ಪ್ರದತ್ತೂರಿಗೆ ಕಳುಹಿಸಲಾಗಿದೆ. ಲೈಂಗಿಕ ಅಪರಾಧ ಮಕ್ಕಳ ರಕ್ಷಣೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಹುಟ್ಟೂರು ಕಡಪಾ ಜಿಲ್ಲೆಯಲ್ಲಿ ನಡೆದ ಘಟನೆಯ ಕುರಿತು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧಿಗಳನ್ನು ಹಿಡಿಯುವ ಪ್ರಯತ್ನ ಮಾಡುವ ಬದಲು ಸಾಮೂಹಿಕ ಅತ್ಯಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಪೊಲೀಸರು ನಿಯಮ ಉಲ್ಲಂಘಿಸಿ ಬಾಲಕಿಯನ್ನು ಖಾಸಗಿ ಮನೆಗೆ ಸ್ಥಳಾಂತರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...