Homeಮುಖಪುಟಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲಿಸಿದ ಆಂಧ್ರ ಪ್ರದೇಶ ಹೈಕೋರ್ಟ್

ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲಿಸಿದ ಆಂಧ್ರ ಪ್ರದೇಶ ಹೈಕೋರ್ಟ್

- Advertisement -
- Advertisement -

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ ಆಂಧ್ರ ಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ (ಸುಮೋಟೋ) 11  ಪ್ರಕರಣಗಳನ್ನು ದಾಖಲಿಸಿದೆ.

ಇಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, 2016 ರಲ್ಲಿ ವಿರೋಧ ಪಕ್ಷದಲ್ಲಿದ್ದಾಗ ಅಂದಿನ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು. ಜೊತೆಗೆ ನ್ಯಾಯಾಲಯದ ಬಗ್ಗೆಯೂ ಹಲವು ಟೀಕೆಗಳನ್ನು ಮಾಡಿದ್ದರು. ಇವುಗಳ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಗನ್ ಮೋಹನ್ ರೆಡ್ಡಿ ಹೇಳಿಕೆಗಳನ್ನು ಆಧರಿಸಿ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳ ಪರಿಶೀಲನೆ ನಡೆಸಿರುವ ಪೊಲೀಸರು, ಸಾಕ್ಷ್ಯಗಳ ಅನುಪಸ್ಥಿತಿಯಲ್ಲಿ ಅಂತಿಮ ವರದಿಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪಿಯು ಪರೀಕ್ಷೆ ವೇಳೆ ಒಬ್ಬ ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ

ಜಗನ್ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಅರ್ಜಿದಾರರು ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಕೆಳ ನ್ಯಾಯಾಲಯಗಳು ಪ್ರಕರಣಗಳನ್ನು ರದ್ದುಗೊಳಿಸಿದ್ದವು. ಆದರೆ, ನ್ಯಾಯಾಲಯದ ಆಡಳಿತ ಸಮಿತಿಯು ಅದರಲ್ಲಿ ದೋಷವನ್ನು ಕಂಡುಹಿಡಿದಿದ್ದು ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಂಡಿದೆ.

ಹೇಳಿಕೆಗಳ ಕುರಿತ ವರದಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿರುವ ಆಂಧ್ರ ಹೈಕೋರ್ಟ್‌ನ ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾ, ಹೈಕೋರ್ಟ್ ಆಡಳಿತಾತ್ಮಕ ಸಮಿತಿ ಶಿಫಾರಸ್ಸಿನಂತೆ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಪೊಲೀಸರಿಗೆ ನೋಟಿಸ್ ನೀಡುವುದನ್ನು ತಡೆದಿದ್ದಾರೆ.

ಸಿಆರ್‌ಪಿಸಿ ಸೆಕ್ಷನ್ 397, 401, 482 ಮತ್ತು 483 ರ ಅಡಿಯಲ್ಲಿ ಹೈಕೋರ್ಟ್ ತನ್ನ ಅಧಿಕಾರವನ್ನು ಬಳಸಿಕೊಂಡು ಸುಮೋಟೋ ಕೇಸ್ ದಾಖಲಿಸಲು ಸಾಧ್ಯವಿಲ್ಲ. ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ನಿರ್ಧಾರವನ್ನು ಆಧರಿಸಿ ಸುಮೋಟೋ ಕೇಸ್ ದಾಖಲಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಶ್ರೀರಾಮ್ ವಾದಿಸಿದ್ದಾರೆ.


ಇದನ್ನೂ ಓದಿ: ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...